ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna NewsFirst Published Jul 24, 2020, 3:01 PM IST
Highlights

2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರುಗಳ ಸೇವೆಯನ್ನು ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ದಿನಾಂಕಗಳನ್ನು ತಿಳಿಯಲು ಮುಂದೆ ಓದಿ.

ಬೆಂಗಳೂರು, (ಜುಲೈ.24): ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ, ಕಡೂರು/ಚಿಕ್ಕಮಗಳೂರು ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಘಟಕ / ನೇರ ಆಡಳಿತಕ್ಕೊಳಪಟ್ಟ ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. 

ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿ:ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಒಟ್ಟು 286 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31,2020ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.

ವೇತನ ಶ್ರೇಣಿ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 200 ರೂ ಮತ್ತು ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಚಲನ್ ಮೂಲಕ ಪಾವತಿಸಬಹುದು. ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

 ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ದಿನಾಂಕ ಮತ್ತು ಇತರೆ ಮಾಹತಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗುವುದು. 

ಅರ್ಜಿ ಸಲ್ಲಿಕೆ: 
ಆಸಕ್ತ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ -577 451 ಇವರ ವಿಳಾಸಕ್ಕೆ ಆಗಸ್ಟ್ 31,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. 

ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಹಾಗೂ ಅಂಚೆಯಲ್ಲಿನ ವಿಳಂಬವನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ವಿಷಯದ ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸಲಾಗಿದೆ ಎಂಬುದನ್ನು ನಮೂದಿಸತಕ್ಕದ್ದು. 

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮಾಡಿ 

click me!