ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ..!

Published : Sep 25, 2020, 03:30 PM IST
ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ..!

ಸಾರಾಂಶ

ದತ್ತಾಂಶ ನಮೂದಕರನ್ನು (Data Entry Operators) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.

ಮೈಸೂರು, (ಸೆ.25) : ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಿನ್ನೆಲೆ ಖಾಸಗಿ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ದತ್ತಾಂಶ ನಮೂದಕರನ್ನು (Data Entry Operators) ನೇಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಯೋಗ ಶಾಲಾ ತಂತ್ರಜ್ಞರು ಲಭ್ಯವಿಲ್ಲದಿದ್ದಲ್ಲಿ Nursing and Paramedical personnel, Diploma Holders, ವಿಜ್ಞಾನ ಪದವೀಧರರನ್ನು ನಿಯೋಜಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಜಾಬ್ಸ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊರೋನಾ ಪರೀಕ್ಷೆಗೆ ನೇಮಕ ಮಾಡಿಕೊಳ್ಳಲಾಗುವವರಿಗೆ ಸರ್ಕಾರವು ನಿಗದಿಪಡಿಸಿರುವ ದರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರಿಗೆ 10,000 ರೂ. ಜೊತೆಗೆ ಪ್ರತಿ ಗಂಟಲುದ್ರವ ತೆಗೆಯುವಿಕೆಗೆ 15 ರೂ, ಹಾಗೂ ದತ್ತಾಂಶ ನಮೂದಕರಿಗೆ 14,000 ರೂ. ಸಂಭಾವನೆಯನ್ನು ಮಾಸಿಕವಾಗಿ ನೀಡಲಾಗುವುದು.

ಆಸಕ್ತರು ಸೆಪ್ಟೆಂಬರ್ 30ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಪಟ್ಟ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮನವಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಶರತ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

PREV
click me!

Recommended Stories

ಬೆಂಗಳೂರಿನ ಅಮರ್‌ ಸುಬ್ರಹ್ಮಣ್ಯ ಆಪಲ್‌ ಎಐ ಟೀಮ್‌ಗೆ ಉಪಾಧ್ಯಕ್ಷ!
ಸರಾಸರಿ ಮಾಸಿಕ ವೇತನ: ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕ, ಸಿಗೋ ಸ್ಯಾಲರಿ ಎಷ್ಟು?