ನಿನ್ನೆಯಷ್ಟೇ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದ್ರೆ, ಇಂದು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ ನೀಡುವ ಮೂಲಕ ರಾಜ್ಯ ಸರ್ಕಾರ ಉಲ್ಟಾ ಹೊಡೆದಿದೆ.
ಬೆಂಗಳೂರು(ಜು.17): ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಿನ್ನೆಯಷ್ಟೇ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದ್ರೆ, ಇಂದು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ ನೀಡುವ ಮೂಲಕ ರಾಜ್ಯ ಸರ್ಕಾರ ಉಲ್ಟಾ ಹೊಡೆದಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ದುಡ್ಡಿದ್ದವರ ವಿರೋಧಕ್ಕೆ ಮಣಿದು ಟ್ವೀಟ್ ಡಿಲೀಟ್ ಮಾಡಿದ್ರಾ ಸಿಎಂ!?
ಒಂದೇ ದಿನದಲ್ಲಿ ಕನ್ನಡಿಗರಿಗೆ ಮೀಸಲು ವಿಷಯದಲ್ಲಿ ರಾಜ್ಯ ಸರ್ಕಾರ ಮೂರನೇ ಬಾರಿಗೆ ಯುಟರ್ನ್ ಹೊಡೆದಿದೆ. ಒಂದೇ ನಿರ್ಧಾರವನ್ನ ಸಿಎಂ ಸಿದ್ದರಾಮಯ್ಯ ಮೂರು ಬದಲಾಯಿಸಿದ್ದಾರೆ.