TCS Recruitment 2022: ಬೆಂಗಳೂರಿನಲ್ಲಿ ಟೆರಾ ಡೆವಲಪರ್ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published Jan 9, 2022, 2:17 PM IST

ಭಾರತದ ಅತಿದೊಡ್ಡ ಟೆಕ್ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್  ಖಾಲಿ ಇರುವ ಟೆರಾ ಡೆವಲಪರ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.


ಬೆಂಗಳೂರು(ಜ.9): ಭಾರತದ ಅತಿದೊಡ್ಡ ಟೆಕ್ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (Tata Consultancy Services-TCS) ಖಾಲಿ ಇರುವ ಟೆರಾ ಡೆವಲಪರ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಈ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರಿನಲ್ಲಿರುವ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಹೈದರಾಬಾದ್ ನಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://www.tcs.com/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಟೆರಾ ಡೆವಲಪರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬ್ಯಾಚುಲರ್ ಆಫ್ ಟೆಕ್ನಾಲಜಿಯನ್ನು ಪೂರ್ಣಗೊಳಿಸಬೇಕು. ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ / ಬ್ಯಾಚುಲರ್ ಆಫ್ ಕಂಪ್ಯೂಟರ್ ಸೈನ್ಸ್ / ಬ್ಯಾಚುಲರ್ ಆಫ್ ಎಂಜಿನಿಯರಿಂಗ್ / ಬ್ಯಾಚುಲರ್ ಆಫ್ ಟೆಕ್ನಾಲಜಿ / M.Sc-ಟೆಕ್ ಅಥವಾ ಈ ಸಂಬಂಧಿತ ಕ್ಷೇತ್ರದಲ್ಲಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

Tap to resize

Latest Videos

undefined

ಅನುಭವ: ಬೆಂಗಳೂರು ಮತ್ತು ಹೈದರಾಬಾದ್‌ ನಲ್ಲಿರುವ ಟೆರಾ ಡೆವಲಪರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಫ್ಟ್‌ವೇರ್ ಅಭಿವೃದ್ಧಿ ಕ್ಷೇತ್ರದಲ್ಲಿ 4 ರಿಂದ 10 ವರ್ಷಗಳ ಅನುಭವವನ್ನು ಹೊಂದಿರಬೇಕು.

UPSC ESE RESULT 2020: ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ರಿಸರ್ವ್ ಲಿಸ್ಟ್‌ ಬಿಡುಗಡೆ

TCS ಉದ್ಯೋಗ ಕೌಶಲ್ಯಗಳು (Job skills): ಶೈಕ್ಷಣಿಕ ಅರ್ಹತೆಗಳ ಜೊತೆಗೆ, ಅಭ್ಯರ್ಥಿಗೆ ಈ ಕೆಳಗಿನ ಕೌಶಲ್ಯಗಳು ಸಹ ಅಗತ್ಯವಿದೆ ಎಂದು ಟಿಸಿಎಸ್‌ ತನ್ನ ಅಧಿಸೂಚನೆಯಲ್ಲಿ  ಉಲ್ಲೇಖಿಸಿದೆ.

ಪರಸ್ಪರ, ಸಾಂಸ್ಥಿಕ, ಲಿಖಿತ ಮತ್ತು ಮೌಖಿಕ ಸಂವಹನ ಮತ್ತು ಕೇಳುಗರಾಗಿ ಅತ್ಯುತ್ತಮ ಕೌಶಲ್ಯಗಳನ್ನು ಹೊಂದಿರಬೇಕು.
UNIX ನಲ್ಲಿ ಕೌಶಲ್ಯ - ಮೂಲಭೂತ ಡೀಬಗ್ ಮಾಡುವಿಕೆ ಹಾಗೂ ಸ್ಕ್ರಿಪ್ಟಿಂಗ್ ಕೌಶಲ್ಯಗಳು
UNIX ಶೆಲ್ ಸ್ಕ್ರಿಪ್ಟಿಂಗ್‌ನಲ್ಲಿ ಜ್ಞಾನ ಮತ್ತು ಅನುಭವವನ್ನು ಹೊಂದಿರಬೇಕು.
SME ಗಳು ಸಹ ಪಾಲುದಾರರೊಂದಿಗೆ ಸಂವಹನ ವಿಧಾನವನ್ನು ಹೊಂದಿರಬೇಕು ಮತ್ತು ಯೋಜನೆಯ ಗಡುವುಗಳೊಂದಿಗೆ ಕೆಲಸ ಮಾಡಲು ಟೈಮ್‌ಲೈನ್ ಅನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಸಂದರ್ಶನಗಳು ಮತ್ತು ಇತರ ಕಾರ್ಯವಿಧಾನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ಮೂಲಕ ಶಾರ್ಟ್‌ಲಿಸ್ಟ್ ಆಗುವ ಅಭ್ಯರ್ಥಿಗಳನ್ನು ವಿವಿಧ ವಿಧಾನಗಳ ಮೂಲಕ  ಉದ್ಯೋಗ ಪ್ರಕ್ರಿಯೆಯ ಬಗ್ಗೆ ಮಾಹಿತಿ ಹೊಂದಿರಬೇಕು.

Bank of Baroda Recruitment 2022: ಸಂಪತ್ತು ನಿರ್ವಹಣಾ ಸೇವೆಗಳ ವಿಭಾಗದಲ್ಲಿ ಹುದ್ದೆ

ಮಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗ ಅರಸುತ್ತಿರುವ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ: ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (Manager) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆಫ್​ಲೈನ್ (Offline)​ ಮೂಲಕ ಜನವರಿ 20ರೊಳಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು karnatakabank.com ಗೆ ಭೇಟಿ ನೀಡಿ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್ ನೇಮಕಾತಿಯ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ಅರ್ಜಿ ವಿಳಾಸ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR)
ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಪ್ರಧಾನ ಕಛೇರಿ
ಮಹಾವೀರ ಸರ್ಕಲ್
ಕಂಕನಾಡಿ
ಮಂಗಳೂರು- 575002

 

click me!