Kalaburagi Udyoga Mela 2022 : ಫೆಬ್ರವರಿ 12ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

By Contributor Asianet  |  First Published Feb 4, 2022, 9:19 PM IST

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ  ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ   ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 


ಬೆಂಗಳೂರು(ಫೆ.4): ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (Karnataka Skill Development Corporation) ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ (Kalaburagi) ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ (PDA Engineering college) ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು (Udyoga Mela) ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಿ.ಇ, ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಸಿಎ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.

Latest Videos

undefined

ಪ್ರಮುಖ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ಉದ್ಯೋಗಗಳ ನೇಮಕಾತಿಯನ್ನು ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ನಕಲಿ ಪ್ರತಿ, 2 ಫೋಟೋ, ಆಧಾರ್ ಕಾರ್ಡ್ ಹಾಗೂ ಐದು ಸೆಟ್ ಸ್ವವಿವರದ ಅರ್ಜಿಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹತೆಗಳು, ವಯೋಮಿತಿ, ವೇತನ ಮತ್ತು ಉದ್ಯೋಗದ ಸಂಪೂರ್ಣ ವಿವರಗಳನ್ನು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ : 8277895931

ಉದ್ಯೋಗ ಮೇಳ ನಡೆಯುವ ಸ್ಥಳ : ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಐವನ್ನ-ಎ-ಶಾಹಿ, ಶಂಭೋಜಿನಲ್ಲಿ, ಕಲಬುರ್ಗಿ-585102

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು https://skillconnect.kaushalkar.com/app/gulbarga-jobfair?utm_source=DH-MoreFromPub&utm_medium=DH-app&utm_campaign=DH ಲಿಂಕ್ ಬಳಸಿ ತಮ್ಮ ಹೆಸರನ್ನು ಈ ಕೂಡಲೇ ನೊಂದಾಯಿಸಿಕೊಳ್ಳಿ. ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ksdc.recruitment@gmail.com ವಿಳಾಸಕ್ಕೆ ಮೇಲ್ ಕೂಡ ಮಾಡಬಹುದು.

KEA ASSISTANT PROFESSOR EXAM SCHEDULE 2022: ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಸ್ತಾವಿತ ವೇಳಾಪಟ್ಟಿ ಬಿಡುಗಡೆ 

ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಕಚೇರಿ ಆಡಳಿತಗಾರ ( Office Administrator ) ಹುದ್ದೆ ಖಾಲಿ ಇದ್ದು,  ಅಭ್ಯರ್ಥಿಗಳುಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ  ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ ಪೂರ್ಣಗೊಳಿಸಿರಬೇಕು.

ಕೆಲಸದ ಅನುಭವ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫೀಸ್ ಕಮ್ಯುನಿಕೇಷನ್, ಬೇಸಿಕ್ ಅಕೌಂಟಿಂಗ್, ಟ್ಯಾಲಿ, ಎಂಎಸ್​ ಎಕ್ಸೆಲ್ ಮತ್ತು ಎಂಎಸ್ ಆಕ್ಸೆಸ್​ನಲ್ಲಿ ಡಾಟಾ ಎಂಟ್ರಿ ಯೂಸಿಂಗ್ ಮಾಡುವುದು ತಿಳಿದಿರಬೇಕು.  ಅಕೌಂಟ್ಸ್​ ಮತ್ತು ಆಫೀಸ್ ಅಡ್ಮಿನಿಸ್ಟ್ರೇಷನ್​​ನಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವನ್ನು ಹೊಂದಿರಬೇಕು.

AAAL Recruitment 2022: ಕಮಾಂಡರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಕಚೇರಿ ಆಡಳಿತಗಾರ   ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು  35 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಕಚೇರಿ ಆಡಳಿತಗಾರ  ಹುದ್ದೆಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗೆ  ತಿಂಗಳಿಗೆ 25,000ರೂ ವೇತನ ನೀಡಲಾಗುತ್ತದೆ. ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

click me!