ಬಿಜೆಪಿಯ ಟ್ರಬಲ್ ಶೂಟರ್ ಎಂದೇ ಕರೆಸಿಕೊಂಡಿದ್ದ ಸಿ ಪಿ ಯೋಗೇಶ್ವರ್ ಬಿಜೆಪಿಗೆ ಸೇರುವ ವಿಚಾರ ಕೇಳಿ ಬಂದಿದ್ದು, ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣ [ಅ.22]: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕನಸಿನಲ್ಲೂ ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸುವುದಿಲ್ಲ. ಅವರು ನಮ್ಮ ಪಕ್ಷದ ಮುಂಚೂಣಿ ನಾಯಕರು. ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್‌ಗೆ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಮುಂದಿನ ದಿನಗಳಲ್ಲಿ ಅವರಿಗೆ ಉತ್ತಮ ಅವಕಾಶ ಇದೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದನ್ನು ಯಾರೂ ಆಯ್ಕೆ ಮಾಡಿಕೊಳ್ಳುವುದಿಲ್ಲ. ಯೋಗೇಶ್ವರ್ ಅವರಂತಹ ಬುದ್ಧಿವಂತ ರಾಜಕಾರಣಿಗಳು ಮನಸ್ಸಿನಲ್ಲಿರಲಿ, ಕನಸ್ಸಿನಲ್ಲೂ ಆ ಪಕ್ಷದ ಬಗ್ಗೆ ಯೋಚನೆ ಮಾಡುವುದಿಲ್ಲ ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಎರಡನೇ ಹಂತ ಕಾಯ್ದು ನೋಡಿ: ಬಿಜೆಪಿ ಸರ್ಕಾರದ ಒಂದು ಹಂತವನ್ನು ನೋಡಿದ್ದೀರಿ, ಎರಡನೇ ಹಂತವನ್ನು ಕಾಯ್ದು ನೋಡಿ, ಫಲಿತಾಂಶ ಗೊತ್ತಾಗುತ್ತದೆ ಎಂದು ಯೋಗೇಶ್ವರ್ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸುವ ಮೂಲಕ ಯೋಗೇಶ್ವರ್ ಅವರಿಗೆ 2ನೇ ಹಂತದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಸುಳಿವನ್ನು ನೀಡಿದರು.