ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಬಳಿಕ ರಾಮನಗರ ಪರವಾಗಿ ಹಲವು ಬೇಡಿಕೆಗಳನ್ನಿಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇದೀಗ ಕಾರ್ಖಾನೆ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಕಾರ್ಖಾನೆ ಆರಂಭಕ್ಕೆ ಕುರಿತು ಇಟ್ಟಿರುವ ಬೇಡಿಕೆ ವಿವರ ಇಲ್ಲಿದೆ.
ಬೆಂಗಳೂರು(ಏ.30): ರಾಮನಗರ ಜಿಲ್ಲೆಯ ಕೆಲ ಬೇಡಿಕೆಗಳನ್ನು ಈಡೇಸಿರುವಂತೆ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಒತ್ತಾಯಿಸಿದ್ದಾರೆ. ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರ್ ಆರಂಭ, ಕೈಗಾರಿಕೆಗೆ ಸೂಕ್ತ ಮುಂಜಾಗ್ರತ ಕ್ರಮ, ಹೊರಗಿನ ಕಾರ್ಮಿಕರಿಗೆ ನಿರ್ಬಂಧ ಹಾಗೂ ಗ್ರೀನ್ ಝೋನ್ ವಿನಾಯಿತಿಗಳನ್ನು ರಾಮನಗರ ಜಿಲ್ಲೆಗೆ ನೀಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ನಿಖಿಲ್ ಮದುವೆಗೆ ಎಷ್ಟು ಪಾಸ್ ನೀಡಲಾಗಿತ್ತು?: ಸರ್ಕಾರಕ್ಕೀಗ ಹೊಸ ತಲೆನೋವು
ಸತತ ಟ್ವೀಟ್‌ಗಳ ಮೂಲಕ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು ಎಂದು ಹೆಚ್ ಡಿ.ಕೆ ಟ್ವೀಟ್ ಮಾಡಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು.
1/3
ಬೇಡಿಕೆಗಳ ಈಡೇರಿಕೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮದ ಕುರಿತು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ. ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆ ಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದಿದ್ದಾರೆ.
ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆ ಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು.
2/3
ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ
ಕರೋನಾ ವೈರಸ್ ಮುಕ್ತವಾಗಿರುವ ಜಿಲ್ಲೆಗಳಲ್ಲಿ ನೀಡಿರುವ ವಿನಾಯ್ತಿಯನ್ನು ತಕ್ಷಣವೇ ರಾಮನಗರ ಜಿಲ್ಲೆಗೂ ಅನ್ವಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಮುಖ್ಯಕಾರ್ಯದರ್ಶಿಯವರಿಗೆ ಒತ್ತಾಯಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು.
1/3
ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ ಪಾದರಾಯನಪುರ ಪುಂಡರನ್ನು ಹೆಡೆಮುರಿ ಕಟ್ಟಿ ರಾಮನಗರ ಜಿಲ್ಲೆಗೆ ಸ್ಥಳಾಂತರಿಸಿದ್ದ ಸರ್ಕಾರದ ಕ್ರಮವನ್ನು ಖಂಡಿಸಿದ್ದ ಹೆಚ್ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದರು. ಪಾದರಾಯನಪುರ ಪುಂಡರಿಂದ ರಾಮನಗರ ಜಿಲ್ಲೆಗೆ ಕೊರೋನಾ ಅಂಟಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮತ್ತೆ ಪುಂಡರನ್ನು ವಾಪಸ್ ಬೆಂಗಳೂರಿಗೆ ಸ್ಥಳಾಂತರಿಸಿತ್ತು.