ಹುಟ್ಟೂರಲ್ಲಿ ಸಿದ್ಧಗಂಗಾ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣ

By Kannadaprabha News  |  First Published Nov 8, 2019, 10:59 AM IST

ಅಭಿನವ ಬಸವಣ್ಣರೆಂದೇ ಖ್ಯಾತರಾದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 111 ಅಡಿ ಎತ್ತರ ಪ್ರತಿಮೆ ಸ್ಥಾಪನೆ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. 


ಗಂ. ದಯಾನಂದ

ಕುದೂರು(ನ.08): ನಡೆದಾಡುವ ದೇವರು ಎಂದೇ ನಾಡಿನ ಜನಮಾಸನ ದಲ್ಲಿ ಸ್ಥಾನ ಪಡೆದು ಅಭಿನವ ಬಸವಣ್ಣರೆಂದೇ ಖ್ಯಾತರಾದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 111 ಅಡಿ ಎತ್ತರ ಪ್ರತಿಮೆ ಸ್ಥಾಪನೆ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯ ಕ್ರಮದ ಸಿದ್ಧತೆಗಳು ಪೂರ್ಣಗೊಂಡಿವೆ.

Tap to resize

Latest Videos

ಶ್ರೀಗಳ ಜನ್ಮಸ್ಥಳ ವೀರಾಪುರ ಗ್ರಾಮದಲ್ಲಿ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಚಾಲನೆ ನೀಡಲಿದ್ದಾರೆ. ಆನಂತರ ಅಧಿಕೃತವಾಗಿ ಪ್ರತಿಮೆ ಸ್ಥಾಪನೆ ಕೆಲಸ ಆರಂಭಗೊಳ್ಳಲಿದೆ. ಎರಡೂವರೆ ವರ್ಷಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ವೀರಾಪುರ ಅಭಿವೃದ್ಧಿ ಕುರಿತು ನೀಲನಕ್ಷೆಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರದ ಅನುಮೋದನೆಯನ್ನು ಪಡೆಯಲಾಗಿದ್ದು, ಈಗಾಗಲೇ ಗ್ರಾಮದ ಸಮಗ್ರ ಅಭಿವೃದ್ಧಿಗೆ 25 ಕೋಟಿ ರು.  ಮಂಜೂರು ಮಾಡಲಾ ಗಿದೆ. ಶ್ರೀಗಳ 111 ಅಡಿ ಎತ್ತರದ ಪ್ರತಿಮೆಯನ್ನು ಅಲ್ಲಿನ ಬಂಡೆಯ ಮೇಲೆ ನಿರ್ಮಾಣ ಮಾಡಲು ಸ್ಥಳವನ್ನು ಗುರುತಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಲ್ಲೊಂದು ಸಮುದಾಯಭವನ, ಸ್ವಾಮೀಜಿಯವರ ಬದುಕಿನ ಸಂಪೂರ್ಣ ಚಿತ್ರಸಹಿತ ಮಾಹಿತಿಯಿರುವ ಅಧ್ಯಾತ್ಮಭವನ, ಧ್ಯಾನ ಮಂದಿರದೊಂದಿಗೆ ಇಲ್ಲಿ ನಿತ್ಯ ಅನ್ನದಾಸೋಹದ ವ್ಯವಸ್ಥೆ ಹಾಗೂ ಶಾಲೆ, ಉನ್ನತಶಿಕ್ಷಣ ಕೇಂದ್ರ, ಆಸ್ಪತ್ರೆಗಳನ್ನು ಸ್ಥಾಪಿಸುವ ಮೂಲಕ ವೀರಾಪುರ ಗ್ರಾಮವನ್ನು ವಿಶ್ವ ಆಕರ್ಷಣೀಯ ಸ್ಥಳವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ.ಶ್ರೀಗಳ ಪ್ರತಿಮೆ ನಿರ್ಮಾಣ ಜವಾಬ್ದಾರಿಯನ್ನು ಪಿಎಸ್‌ಎಪಿ ಅರ್ಕಿಟೆಕ್ಟ್ ಕಂಪನಿಗೆ ನೀಡಲಾಗಿದೆ. 

ಈಗಾಗಲೇ ಗದಗದಲ್ಲಿ 116 ಅಡಿ ಪ್ರತಿಮೆಯನ್ನು ನಿರ್ಮಿಸಿರುವ ಕಂಪನಿ, ಮಲೆ ಮಹದೇಶ್ವರ ಬೆಟ್ಟದಲ್ಲಿಯೂ ಮಹದೇಶ್ವರ ಸ್ವಾಮಿ ಪ್ರತಿಮೆ ನಿರ್ಮಿಸುತ್ತಿದೆ. ಇದೀಗ ಶ್ರೀ ಶಿವಕುಮಾರ ಸ್ವಾಮೀಜಿಗಳ ಬೃಹತ್ ಪ್ರತಿಮೆ ನಿರ್ಮಾಣ ಜವಾಬ್ದಾರಿ ನೀಡಲಾಗಿದೆ.

click me!