ಬಿಜೆಪಿ ಸರ್ಕಾರ ಟಿಪ್ಪು ರೈಲು ಸಂಚಾರವನ್ನು ಸ್ಥಗಿತಗೊಳಿಸಿದರೆ ಹಾಗೂ ಪಠ್ಯಪುಸ್ತಕದಲ್ಲಿ ಟಿಪ್ಪು ಪಠ್ಯವನ್ನು ತೆಗೆದರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ರಾಮನಗರ (ಅ.27): ಬಿಜೆಪಿ ಸರ್ಕಾರ ಟಿಪ್ಪು ರೈಲು ಸಂಚಾರವನ್ನು ಸ್ಥಗಿತಗೊಳಿಸಿದರೆ ಹಾಗೂ ಪಠ್ಯಪುಸ್ತಕದಲ್ಲಿ ಟಿಪ್ಪು ಪಠ್ಯವನ್ನು ತೆಗೆದರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಹುಲಿ ಟಿಪ್ಪು ಸುಲ್ತಾನ್ ನೆನಪಿನಾರ್ಥ ರೈಲಿಗೆ ಟಿಪ್ಪು ಹೆಸರನ್ನು ನಾಮಕರಣ ಮಾಡಲಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ಸಮರ್ಪಿಸಿದ ಕಾರಣಕ್ಕಾಗಿ ಟಿಪ್ಪು ಜೀವನಚರಿತ್ರೆ ಪಠ್ಯಪುಸ್ತಕದಲ್ಲಿ ವಿಷಯವಾಗಿದೆ. ಆದರೆ, ಬಿಜೆಪಿ ಸರ್ಕಾರ ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಮತ್ತು ಆತನ ಚರಿತ್ರೆಯ ವಿಷಯವನ್ನು ತೆಗೆಯಲು ಹೊರಟಿದೆ ಎಂದು ಟೀಕಿಸಿದರು.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಟಿಪ್ಪು ರೈಲು ಸಂಚಾರ ಸ್ಥಗಿತಗೊಳಿಸುವುದಾಗಿ ಬಿಜೆಪಿ ಸರ್ಕಾರದ ಸಚಿವರು ಹೇಳಿಕೆ ನೀಡಿದ್ದಾರೆ. ಯಾವ ಕಾರಣಕ್ಕೂ ಟಿಪ್ಪು ಹೆಸರಿನ ರೈಲನ್ನು ಸ್ಥಗಿತಗೊಳಿಸಿದರೆ ಅಥವಾ ಹೆಸರು ಬದಲಾವಣೆ ಮಾಡಿದರೆ ಹಾಗೂ ಪಠ್ಯಪುಸ್ತಕದಲ್ಲಿ ಟಿಪ್ಪು ವಿಷಯವನ್ನು ತೆಗೆದರೆ ರಾಜ್ಯದಲ್ಲಿ ಉಗ್ರ ಹೋರಾಟಗಳು ನಡೆದು ಕ್ರಾಂತಿ ಆಗುತ್ತದೆ ಎಂದು ಎಚ್ಚರಿಸಿದರು.
ಅಕ್ಟೋಬರ್ 27ರ ಟಾಪ್ 10 ಸುದ್ದಿಗಾಗಿ ಕ್ಲಿಕ್ ಮಾಡಿ: