
ಬೆಂಗಳೂರು (ಅ.16): ರಾಜಧಾನಿ ಬೆಂಗಳೂರಿನಲ್ಲಿ ಇಪ್ಪತ್ತು ವರ್ಷಗಳ ದಾಂಪತ್ಯ ಜೀವನ ನಡೆಸುತ್ತಿದ್ದ ಪತಿಯ ರಾಸಲೀಲೆ ಬಯಲಾಗಿದೆ. ಪತ್ನಿಯಿಂದ ಅಂತರ ಕಾಯ್ದುಕೊಂಡು, ಐದಾರು ಪರಸ್ತ್ರೀಯರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಪತಿಯೊಬ್ಬರ ವಿಡಿಯೋ ಸಿಕ್ಕಿದ್ದು, ಸಾಕ್ಷಿಯೊಂದಿಗೆ ಸಿಕ್ಕಿಬಿದ್ದಿದ್ದಾನೆ. ಇದರಿಂದ ನೊಂದ ಮಹಿಳೆ ಪೊಲೀಸ್ ಠಾಣೆ ಮೆಟ್ಟಲೇರಿದ್ದು, ವ್ಯಕ್ತಿಯ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ.
ಇಂದಿರಾನಗರದ ಬಿಎಂ ಕಾವಲ್‌ನಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು ಈ ಭೂಪ. ತಾನು ರಾಷ್ಟ್ರೀಯ ಪಕ್ಷವೊಂದರ ಕಚೇರಿಯಲ್ಲಿ ಕೆಲಸ ಮಾಡುವುದಾಗಿ ಹೇಳಿಕೊಂಡು, ಹಲವು ರಾಜಕೀಯ ನಾಯಕರು ಆತ್ಮೀಯರೆಂದು ಬಿಲ್ಡಪ್ ನೀಡುತ್ತಿದ್ದ. ಈ ಬಿಲ್ಡಪ್‌ನಿಂದ ಆತ ಐದಾರು ಮಹಿಳೆಯರೊಂದಿಗೆ ಅನೈತಿಕ ಸಂಬಂಧವನ್ನೂ ಬೆಳೆಸಿದ್ದು.
ವಿಪರ್ಯಾಸವೆಂದರೆ, ಈತ ಪರಸ್ತ್ರೀಯರೊಂದಿಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋಗಳು ಮತ್ತು ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ಇಟ್ಟುಕೊಂಡಿದ್ದ. ಆಕಸ್ಮಿಕವಾಗಿ ಪತಿಯ ಮೊಬೈಲ್ ನೋಡಿದ ಪತ್ನಿಗೆ ಈ ರಾಸಲೀಲೆ ವಿಡಿಯೋಗಳು ಸಿಕ್ಕಿದ್ದು, ಅದನ್ನು ನೋಡಿ ಆಕೆ ತೀವ್ರ ಆಘಾತಕ್ಕೊಳಗಾಗಿದ್ದಾಳೆ.
ಪತ್ನಿ ಈ ಬಗ್ಗೆ ಪ್ರಶ್ನಿಸಿದಾಗ, ಪತಿ ಆಕೆಯ ಮೇಲೆ ಹಲ್ಲೆ ನಡೆಸಿ, ಮನೆಯಿಂದ ಹೊರಹಾಕಿದ್ದಾನೆಂದು ಮಡದಿ ಅಳಲು ತೋಡಿಕೊಂಡಿದ್ದಾರೆ. ಕೊನೆಗೆ ನ್ಯಾಯಕ್ಕಾಗಿ ಪೊಲೀಸ್ ಮೆಟ್ಟಿಲೇರಿರುವ ಮಹಿಳೆ, ಪತಿಯ ವಿರುದ್ಧ ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.