ಪ್ರಿಯಕರ ಕೈಕೊಟ್ಟಿದ್ದಕ್ಕೆ ವಿವಾಹಿತ ಮಹಿಳೆ ಸಾವು; ಬೀದಿಗೆ ಬಿದ್ದ ಮಕ್ಕಳು!

Published : Feb 10, 2025, 02:46 PM IST
ಪ್ರಿಯಕರ ಕೈಕೊಟ್ಟಿದ್ದಕ್ಕೆ ವಿವಾಹಿತ ಮಹಿಳೆ ಸಾವು; ಬೀದಿಗೆ ಬಿದ್ದ ಮಕ್ಕಳು!

ಸಾರಾಂಶ

ವಿವಾಹಿತ ಮಹಿಳೆಯೊಬ್ಬರು ಪ್ರೇಮಿಯ ನಿರ್ಲಕ್ಷ್ಯದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಆಕೆಯ ಇಬ್ಬರು ಮಕ್ಕಳು ಬೀದಿ ಪಾಲಾಗಿದ್ದಾರೆ.

ಮದುವೆ ಮಾಡಿಕೊಂಡು ಇಬ್ಬರು ಮಕ್ಕಳಿದ್ದರೂ ಈ ಮಹಿಳೆ ಮಾತ್ರ ಪ್ರಿಯಕರನ ಸಹವಾಸವನ್ನು ಬಿಟ್ಟಿರಲಿಲ್ಲ. ಇದೀಗ ತನ್ನ ಪ್ರಿಯಕರ ಕೈಕೊಟ್ಟನೆಂದು ವಿವಾಹಿತ ಮಹಿಳೆ ತನ್ನ ಒಬ್ಬರು ಮಕ್ಕಳನ್ನು ಬಿಟ್ಟು ಪ್ರೇಮಿಯ ಮನೆಯ ಮುಂದೆಯೇ ವಿಷ ಸೇವಿಸಿ ಸಾವಿಗೀಡಾಗಿದ್ದಾಳೆ. 

ಈ ಘಟನೆ ಮಧ್ಯಪ್ರದೇಶದ ಆರ್ಥಿಕ ರಾಜಧಾನಿ ಎಂದು ಕರೆಯಲ್ಪಡುವ ಇಂದೋರ್ ನಗರದ ರಾವ್ ಪ್ರದೇಶದಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಬ್ಬರು ಪ್ರೇಮಿಯ ನಿರ್ಲಕ್ಷ್ಯದಿಂದ ಬೇಸತ್ತು ವಿಷ ಸೇವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮಿಯ ನಿರ್ಲಕ್ಷ್ಯದಿಂದ ಬೇಸತ್ತು ಆತ್ಮಹತ್ಯೆ: ಇಂದೋರ್ ನಗರದ ರಾವ್‌ ಬಡಾವಣೆಯಲ್ಲಿ ವಾಸಿಸುತ್ತಿದ್ದ ಕಮಲಾ ಸೋಲಂಕಿ (40) ಕಳೆದ ಕೆಲವು ಸಮಯದಿಂದ ಸತೀಶ್ ಎಂಬ ಯುವಕನೊಂದಿಗೆ ಲಿವ್-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಜಗಳ ನಡೆದಿದ್ದು, ಬಳಿಕ ಸತೀಶ್ ಮನೆ ಬಿಟ್ಟು ಹೋಗಿದ್ದಾನೆ. ಇದಾದ ನಂತರ ಕಮಲಾ ಎಷ್ಟೇ ಕರೆ ಮಾಡಿದರೂ ಅವರ ಫೋನ್ ಕರೆಗಳನ್ನು ಸತೀಶ್ ಸ್ವೀಕರಿಸುತ್ತಿರಲಿಲ್ಲ. ಆತನ ನಿರ್ಲಕ್ಷ್ಯದಿಂದ ಬೇಸತ್ತ ಮಹಿಳೆ ಭಾನುವಾರ ಆತನ ಮನೆಗೆ ಹೋಗಿ ಆತನೊಂದಿಗೆ ಜಗಳ ಮಾಡಿದ್ದಾಳೆ. ಈ ವೇಳೆ ಮಹಿಳೆ ಕೋಪದಿಂದ ಅಲ್ಲೇ ವಿಷ ಸೇವಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು: ಕಮಲಾ ವಿಷ ಸೇವನೆ ಮಾಡಿದ ನಂತರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಕೂಡಲೇ ಹತ್ತಿರದ ಎಂವೈ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯ ಕುಟುಂಬ ಸದಸ್ಯರು ಮತ್ತು ಇತರ ಪರಿಚಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಗಂಡನಿಂದಲೂ ಮೋಸ ಹೋಗಿದ್ದ ಮಹಿಳೆ: ಕಮಲಾ ಅವರ ಜೀವನ ಈಗಾಗಲೇ ಸಮಸ್ಯೆಗಳ ಗೂಡಾಗಿತ್ತು. ಟ್ರಕ್ ಚಾಲಕನಾಗಿದ್ದ ಆಕೆಯ ಪತಿ ಕಳೆದ 2 ವರ್ಷಗಳ ಹಿಂದೆ ಆಕೆಯನ್ನು ತೊರೆದು ಬೇರೆ ಮಹಿಳೆಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದನು. ಈ ಆಘಾತದಿಂದ ಚೇತರಿಸಿಕೊಂಡ ನಂತರ ಕಮಲಾ ತನ್ನ ಪಾಡಿಗೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆಗ ಸತೀಶ್‌ನನ್ನು ಭೇಟಿಯಾಗಿದ್ದು, ಇಬ್ಬರ ನಡುವೆ ಸ್ನೇಹ ಗಾಢವಾಗಿ ಬೆಳೆದು ಪ್ರೀತಿಗೆ ತಿರುಗಿದೆ. ಇದಾದ ನಂತರ ಇಬ್ಬರೂ ಲಿವ್-ಇನ್‌ನಲ್ಲಿ ವಾಸಿಸಲು ಪ್ರಾರಂಭಿಸಿದರು.

ಮಕ್ಕಳಿಗಾಗಿ ದುಡಿಯುತ್ತಿದ್ದ ಮಹಿಳೆ: ಇನ್ನು ಮಹಿಳೆ ಕಮಲಾ ಅವರಿಗೆ ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದು, ಅವರ ಜವಾಬ್ದಾರಿಯನ್ನು ಅವರೇ ಹೊತ್ತಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಮೂಲಕ ತನ್ನ ಮಕ್ಕಳನ್ನು ಪಾಲನೆ ಮಾಡುತ್ತಿದ್ದರು. ಆದರೆ, ಪ್ರೇಮಿಯ ನಿರ್ಲಕ್ಷ್ಯ ಮತ್ತು ಪದೇ ಪದೇ ತಿರಸ್ಕರಿಸಲ್ಪಟ್ಟಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಪೊಲೀಸರು ಈಗ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬ ಸದಸ್ಯರು ಮತ್ತು ಪರಿಚಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಆತ್ಮಹತ್ಯೆಗೆ ನಿಜವಾದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಸತೀಶ್‌ನ ಹೇಳಿಕೆಯ ನಂತರವೇ ಪ್ರಕರಣದ ಸಂಪೂರ್ಣ ಸತ್ಯ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಸುಂದರ ದೇಶದಲ್ಲಿ ಬಾಡಿಗೆಗೆ ಸಿಗ್ತಾನೆ ಗಂಡ, ಗಂಟೆಗೆ ಇಷ್ಟಿದೆ ಸಂಬಳ!
ಮದುವೆ ಮುಂದೂಡಿಕೆ ಆದ 12 ದಿನಗಳ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ, ಕೈಯಲ್ಲಿದ್ದ ರಿಂಗ್‌ ಮಾಯ!