ಇನ್ಸ್ಟಾಗ್ರಾಂ ಲವ್: ಲೀವ್ ಇನ್‌ ಪಾರ್ಟನರ್ ಲೇಡಿ ಎಎಸ್‌ಐ ಕತೆ ಮುಗಿಸಿದ CRPF ಜವಾನ

Published : Jul 20, 2025, 06:31 PM IST
CRPF jawan strangles woman cop

ಸಾರಾಂಶ

ಗುಜರಾತ್‌ನಲ್ಲಿ ಸಿಆರ್‌ಪಿಎಫ್ ಜವಾನನೋರ್ವ ತನ್ನ ಲೀವ್-ಇನ್ ಪಾರ್ಟನರ್ ಆಗಿದ್ದ ಮಹಿಳಾ ಎಎಸ್‌ಐಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ಇವರಿಬ್ಬರು ಜಗಳದ ಬಳಿಕ ಈ ಘಟನೆ ನಡೆದಿದ್ದು, ಆರೋಪಿ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ತನ್ನ ಜೊತೆ ಸಹ ಜೀವನ ನಡೆಸುತ್ತಿದ್ದ ವೃತ್ತಿಯಲ್ಲಿ ಎಎಸ್‌ಐ ಆಗಿದ್ದ ಮಹಿಳೆಯನ್ನು ಸಿಆರ್‌ಪಿಎಫ್ ಜವಾನನೋರ್ವ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಗುಜರಾತ್‌ನ ಕಚ್‌ ಜಿಲ್ಲೆಯಲ್ಲಿ ನಡೆದಿದೆ. ಕೋಪದ ಭರದಲ್ಲಿ ಲೀವ್‌ ಇನ್ ಪಾರ್ಟನರ್ ಹತ್ಯೆ ಮಾಡಿದ ಬಳಿಕ ಆರೋಪಿ ಸಿಆರ್‌ಪಿಎಫ್‌ ಜವಾನ ತನ್ನ ಪ್ರೇಯಸಿ ಕೆಲಸ ಮಾಡುತ್ತಿದ್ದ ಠಾಣೆಯಲ್ಲಿಯೇ ಪೊಲೀಸರಿಗೆ ಶರಣಾಗಿದ್ದಾನೆ.

ಎಎಸ್‌ಐ 25 ವರ್ಷದ ಅರುಣಾ ನಾಥುಭಾಯ್ ಜಾಧವ್ ಕೊಲೆಯಾದ ಮಹಿಳೆ ಈಕೆ ಹಾಗೂ ಸಿಆರ್‌ಪಿಎಫ್ ಜವಾನ ದಿಲೀಪ್ ದಂಗಾಚಿಯಾ ಒಂದೇ ಮನೆಯಲ್ಲಿ ಜೊತೆಯಾಗಿ ವಾಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಇವರಿಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ವಾಗ್ವಾದ ಶುರುವಾಗಿದ್ದು, ಅದು ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ದಿಲೀಪ್ ಅರುಣಾ ಬೇನ್ ಕತ್ತು ಹಿಸುಕಿ ಕೊಲೆ ಮಾಡಿದ್ದು, ಬಳಿಕ ಮರುದಿನ ಆಕೆ ಕೆಲಸ ಮಾಡುತ್ತಿದ್ದ ಕಚ್‌ನ ಅಂಜರ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿ ಸಿಆರ್‌ಪಿಎಫ್ ಜವಾನ ಮರುದಿನ ಬೆಳಗ್ಗೆ ಪೊಲೀಸ್ ಠಾಣೆಗೆ ಬಂದು ಹಾಜರಾದ ಬಳಿಕವೇ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಅರುಣಾ ಮೂಲತಃ ಸುರೇಂದ್ರನಗರ ನಿವಾಸಿಯಾಗಿದ್ದು, ಅಂಜರ್‌ನ ಗಂಗೋತ್ರಿ ಸೊಸೈಟಿ-2ನಲ್ಲಿ ವಾಸ ಮಾಡುತ್ತಿದ್ದರು. ಕೊಲೆ ಮಾಡಿದ ದಿಲೀಪ್ ಮಣಿಪುರದಲ್ಲಿ ಸಿಆರ್‌ಪಿಎಫ್‌ ಜವಾನನಾಗಿದ್ದ, ಅರುಣಾಳ ನೆರೆಯ ಗ್ರಾಮದ ನಿವಾಸಿಯಾಗಿದ್ದ, ಇಬ್ಬರೂ 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಇದಾದ ನಂತರ ಲೀವಿಂಗ್ ಟುಗೆದರ್‌ನಲ್ಲಿದ್ದರು. ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇವರಿಬ್ಬರು ಶೀಘ್ರದಲ್ಲೇ ಮದುವೆಯೂ ಆಗುವುದಕ್ಕೆ ಮುಂದಾಗಿದ್ದರು ಹಾಗೂ ಆರೋಪಿ ದಿಲೀಪ್ ರಜೆಯ ಮೇರೆಗೆ ಕಚ್‌ಗೆ ಬಂದಿದ್ದ, ದಿಲೀಪ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ಸಮಾಜದ ಉನ್ನತ ಸ್ತರದಲ್ಲಿ ಉದ್ಯೋಗದಲ್ಲಿದ್ದವರೇ ತಪ್ಪು ಮಾಡುವವರಿಗೆ ಬುದ್ಧಿ ಹೇಳಬೇಕಾದವರೆ ಇನ್ಸ್ಟಾಗ್ರಾಮ್‌ನಲ್ಲಿ ಸಿಕ್ಕವನ ಪ್ರೇಮಿಸಿ ಜೀವ ಕಳೆದುಕೊಂಡಿದ್ದು ವಿಪರ್ಯಾಸ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮದುವೆ ಮುಂದೂಡಿಕೆ ಆದ 12 ದಿನಗಳ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ, ಕೈಯಲ್ಲಿದ್ದ ರಿಂಗ್‌ ಮಾಯ!
ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ; ವಿವಾಹಿತ ಮಹಿಳೆ ಆತ್ಮ*ಹತ್ಯೆ