ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ, ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟ ಜೋಡಿ

By Vinutha Perla  |  First Published Nov 30, 2023, 12:16 PM IST

ಸುಪ್ರೀಂಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ ಐದು ತಿಂಗಳ ನಂತರ ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ ಯಶಸ್ವಿಯಾಗಿ ನಡೆಸಲಾಗಿದೆ. ಈ ಮೂಲಕ ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ದಕ್ಷಿಣ ಏಷ್ಯಾದ ಮೊದಲ ದೇಶವೆಂದು ನೇಪಾಳ ಗುರುತಿಸಿಕೊಂಡಿದೆ.


ಕಠ್ಮಂಡು: ಸುಪ್ರೀಂಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ ಐದು ತಿಂಗಳ ನಂತರ ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ ಯಶಸ್ವಿಯಾಗಿ ನಡೆಸಲಾಗಿದೆ. ಟ್ರಾನ್ಸ್-ವುಮನ್ 35 ವರ್ಷದ ಮಾಯಾ ಗುರುಂಗ್ ಮತ್ತು 27 ವರ್ಷದ ಸುರೇಂದ್ರ ಪಾಂಡೆ ಸಲಿಂಗಿಗಳು ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ  ಈ ಮೂಲಕ ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ದಕ್ಷಿಣ ಏಷ್ಯಾದ ಮೊದಲ ದೇಶವೆಂದು ನೇಪಾಳ ಗುರುತಿಸಿಕೊಂಡಿದೆ.

ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್ ಗುರುಂಗ್ (ಪಿಂಕಿ) ಸಲಿಂಗಿಗಳ ಮದುವೆ ನಡೆದಿದ್ದು, ಇದನ್ನು ನೋಂದಾಯಿಸಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುವ ಸಂಸ್ಥೆ ಇದಾಗಿದೆ.

Tap to resize

Latest Videos

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ, ಶಾಸ್ತ್ರಬದ್ಧವಾಗಿ ನಡೆದ ಮದ್ವೆಯಲ್ಲಿ ಮನೆ ಮಂದಿಯೂ ಭಾಗಿ!

2007ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015ರಲ್ಲಿ ಅಂಗೀಕರಿಸಲ್ಪಟ್ಟ ನೇಪಾಳದ ಸಂವಿಧಾನವು ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿತ್ತು. 2023ರ ಜೂನ್ 27ರಂದು ಗುರುಂಗ್ ಸೇರಿದಂತೆ ಅನೇಕ ಜನರು ಸಲ್ಲಿಸಿದ ರಿಟ್ ಅರ್ಜಿಯಲ್ಲಿ ನೇಪಾಳದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತು. 

ಆದರೆ ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಾಯಿಸುವ ಐತಿಹಾಸಿಕ ಆದೇಶದ ಹೊರತಾಗಿಯೂ, ನಾಲ್ಕು ತಿಂಗಳ ಹಿಂದೆ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಅಗತ್ಯ ಕಾನೂನುಗಳ ಕೊರತೆಯನ್ನು ಉಲ್ಲೇಖಿಸಿ ಈ ಕ್ರಮವನ್ನು ತಿರಸ್ಕರಿಸಿತು. ಆ ಸಮಯದಲ್ಲಿ ಸುರೇಂದ್ರ ಪಾಂಡೆ ಮತ್ತು ಮಾಯಾ ಅವರ ವಿವಾಹದ ಅರ್ಜಿ ವಜಾ ಹಾಕಿತ್ತು. ಆದರೆ ಇದೀಗ ಇವರಿಬ್ಬರ ವಿವಾಹ ನೋಂದಣಿ ಮಾಡಲಾಗಿದ್ದು ಇದು ನೇಪಾಳದಲ್ಲಿ ಮಾತ್ರವಲ್ಲದೆ ಇಡೀ ದಕ್ಷಿಣ ಏಷ್ಯಾದಲ್ಲಿಯೇ ಮೊದಲ ಪ್ರಕರಣವಾಗಿದ್ದು, ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಪಿಂಕಿ ಹೇಳಿದ್ದಾರೆ.

ಅವಳಲ್ಲ ಅವನು: ಮದುವೆಗೆ ಮನೆಯವರಿಂದ ವಿರೋಧ, ಲಿಂಗ ಬದಲಾಯಿಸಿಕೊಂಡ ಯುವತಿ

ಅನೇಕ ತೃತೀಯಲಿಂಗಿ ದಂಪತಿಗಳು ಯಾವುದೇ ಕಾನೂನಿನ ಸಮ್ಮತಿಯಿಲ್ಲದ ಕಾರಣ ಸಂಕಷ್ಟದಲ್ಲಿದ್ದರು. ಆದರೆ ಇನ್ನು ಮುಂದೆ ಅಂಥಾ ತೊಂದರೆ ಇರುವುದಿಲ್ಲ. ಸಲಿಂಗಿಗಳು ಸಹ ಮದುವೆಯಾಗಿ ಖುಷಿಯಿಂದ ಜೀವನ ನಡೆಸಬಹುದಾಗಿದೆ ಎಂದು ಪಿಂಕಿ ಹೇಳಿದರು.

ನವಲಪರಸಿ ಜಿಲ್ಲೆಯ ನಿವಾಸಿ ಸುರೇಂದ್ರ ಮತ್ತು ಲಾಮ್‌ಜಂಗ್ ಜಿಲ್ಲೆಯ ಮಾಯಾ, ಕುಟುಂಬದ ಒಪ್ಪಿಗೆಯೊಂದಿಗೆ ಸಾಂಪ್ರದಾಯಿಕವಾಗಿ ವಿವಾಹವಾದರು. ಕಳೆದ ಆರು ವರ್ಷಗಳಿಂದ ಇವರಿಬ್ಬರೂ ಪತಿ-ಪತ್ನಿಯಾಗಿ ಒಟ್ಟಿಗೆ ವಾಸಿಸುತ್ತಿದ್ದಾರೆ. ಈಗ ಅವರ ಮದುವೆಯನ್ನು ತಾತ್ಕಾಲಿಕವಾಗಿ ನೋಂದಾಯಿಸಲಾಗಿದೆ. ಅಗತ್ಯ ಕಾನೂನುಗಳನ್ನು ರೂಪಿಸಿದ ನಂತರ, ಅದು ಸ್ವಯಂಚಾಲಿತವಾಗಿ ಶಾಶ್ವತ ಮಾನ್ಯತೆಯನ್ನು ಪಡೆಯುತ್ತದೆ ಎಂದು ತಿಳಿದುಬಂದಿದೆ.

click me!