ನವದೆಹಲಿ(ಜ.29): ಮಹತ್ವದ ಬೆಳವಣಿಗೆಯೊಂದರಲ್ಲಿ ಗರ್ಭಪಾತ ಕಾನೂನಿನಲ್ಲಿ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಗರ್ಭಪಾತದ ಅವಧಿಯನ್ನು ಹೆಚ್ಚಿಸಿದೆ.
ಈ ಹಿಂದೆ ಇದ್ದ 20 ವಾರ ಗರ್ಭಪಾತ ಅವಧಿಯನ್ನು 24 ವಾರಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.
ಮಹಿಳೆಯರ ಸಂತಾನೋತ್ಪತ್ತಿ ಹಕ್ಕನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗರ್ಭಪಾತ ಕಾನೂನಲ್ಲಿ ಬದಲಾವಣೆ ತರಲಾಗಿದೆ ಎಂದು ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ.
ಮಾನಸಿಕವಾಗಿ, ದೈಹಿಕವಾಗಿ ಹೆಣ್ಣನ್ನು ಹೈರಾಣಿಗಿಸೋ ಗರ್ಭಪಾತ!
ಮಹಿಳೆಗೆ ತನ್ನ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಹಕ್ಕು ಇದೆ ಎಂದಿರುವ ಕೇಂದ್ರ ಸರ್ಕಾರ, ಗರ್ಭಪಾತ ಅವಧಿ ಹೆಚ್ಚಳ ಆಕೆಯ ಸಂತಾನೋತ್ಪತ್ತಿ ಹಕ್ಕನ್ನು ಖಾತ್ರಿಪಡಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.