ಬಾಯಲ್ಲಿ ಚೀಟಿ ಹಿಡಿದು ಶಿವಣ್ಣನ ಕೈಗೆ ಇತ್ತ ಇಲಿ: ಮೆಸೇಜ್​ ನೋಡಿ ಕುಣಿದಾಡಿದ ಸೆಂಚುರಿ ಸ್ಟಾರ್​ ಫ್ಯಾನ್ಸ್​!

By Suvarna News  |  First Published Nov 13, 2023, 8:58 PM IST

ಬಾಯಲ್ಲಿ ಚೀಟಿ ಹಿಡಿದು ಶಿವಣ್ಣನ ಕೈಗೆ ಇತ್ತ ಇಲಿ: ಮೆಸೇಜ್​ ನೋಡಿ ಕುಣಿದಾಡಿದ ಸೆಂಚುರಿ ಸ್ಟಾರ್​ ಫ್ಯಾನ್ಸ್​!
 


ಮೊನ್ನೆ ನಡೆದಿದ್ದ ಜೀ ಕುಟುಂಬ ಅವಾರ್ಡ್ಸ್​ನಲ್ಲಿ ಸೆಂಚುರಿ ಸ್ಟಾರ್​ ಶಿವರಾಜ್​ ಕುಮಾರ್​ ಅವರು ಭರ್ಜರಿ ಎಂಟ್ರಿ ಕೊಟ್ಟಿದ್ದರು.  ನೀವ್​ ಗನ್​ನಲ್ಲಿ ಎಷ್ಟು ಜನರನ್ನು ಹೆದರಿಸಿದ್ದೀರೋ, ಅದಕ್ಕಿಂತ ಹೆಚ್ಚಿನ ಜನರನ್ನು ನಾನು ಕಣ್ಣಲ್ಲಿ ಹೆದರಿಸಿದ್ದೇನೆ ಎನ್ನುತ್ತಲೇ  ವೇದಿಕೆ ಮೇಲೆ ಕಾಣಿಸಿಕೊಂಡಿದ್ದರು.  ದೆ ಕಾಲ್​ ಮಿ ಓ.ಜಿ ಅಂದ್ರೆ ಒರಿಜಿನಲ್​ ಗ್ಯಾಂಗ್​ಸ್ಟರ್​ ಎನ್ನುವ ಹಾಡಿನ ಹಿನ್ನೆಲೆಯಲ್ಲಿ ಶಿವಣ್ಣ ಭರ್ಜರಿ ಸ್ಟೆಪ್​  ಹಾಕುತ್ತಿದ್ದಂತೆಯೇ ವೇದಿಕೆ ಮೇಲೆ ಮಿಂಚು ಸೃಷ್ಟಿಯಾಗಿತ್ತು.   ಅತಿಥಿಯಾಗಿ ಆಗಮಿಸಿದ್ದ ಶಿವರಾಜ್​ ಕುಮಾರ್​  ಇತ್ತೀಚಿಗಷ್ಟೇ ಬಿಡುಗಡೆಯಾಗಿರುವ ಘೋಸ್ಟ್​ ಚಿತ್ರದ ಹಾಡಿಗೆ ಭರ್ಜರಿ ಸ್ಟೆಪ್​ ಹಾಕಿದ್ರು. ಇದೀಗ ಅವರ ಇನ್ನೊಂದು ಸಕತ್​ ಇಂಟರೆಸ್ಟಿಂಗ್​ ಪ್ರೋಮೋ ಒಂದನ್ನು ಜೀ ಕನ್ನಡ ರಿಲೀಸ್ ಮಾಡಿದೆ.

ಅಂದಹಾಗೆ, ಘೋಸ್ಟ್​ ಚಿತ್ರದ ಬಗ್ಗೆ ಹೇಳುವುದಾರೆ, ಇದು ಕಳೆದ ಅಕ್ಟೋಬರ್​ 19ರಂದು ರಿಲೀಸ್​ ಆಗಿದೆ.  ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕರ್ನಾಟಕ ಸೇರಿದಂತೆ ಇಡೀ ಭಾರತದ ಹಲವು ಕಡೆ ರಿಲೀಸ್ ಆಗಿ ಸಕ್ಸಸ್ ಪ್ರದರ್ಶನ ಕಾಣುತ್ತಿದೆ. ಘೋಸ್ಟ್ ಸಿನಿಮಾದಲ್ಲಿ ನಟ ಶಿವಣ್ಣ ನಾಯಕರಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಪ್ರಮುಖ ಪಾತ್ರವೊಂದಲ್ಲಿ ಕಾಣಿಸಿಕೊಂಡಿದ್ದಾರೆ.  ಸದ್ಯ ಕನ್ನಡದ ಸೆಂಚುರಿ ಸ್ಟಾರ್  ಶಿವಣ್ಣ ಅವರ ಘೋಸ್ಟ್ ಹವಾ ರಾಜ್ಯದ ತುಂಬ ವ್ಯಾಪಿಸಿದೆ.

Tap to resize

Latest Videos

ಗನ್​ಗಿಂತ ಹೆಚ್ಚು ಜನ್ರನ್ನ ಕಣ್ಣಲ್ಲೇ ಹೆದ್ರಿಸಿದ್ದೀನಿ ಅನ್ನುತ್ತಲೇ ಭರ್ಜರಿ ಎಂಟ್ರಿ ಕೊಟ್ಟ ಶಿವಣ್ಣ- ಸ್ಟೇಜಲ್ಲಿ ಮಿಂಚು

ಈ ಪ್ರೊಮೋದಲ್ಲಿ ಇಲಿಯೊಂದು ಬಾಯಲ್ಲಿ ಚೀಟಿ ಹಿಡಿದು ಬಂದಿದೆ. ಅದನ್ನು ಅದು ಶಿವಣ್ಣನ ಕೈಗೆ ಇಟ್ಟಿದೆ. ಆ ಚೀಟಿಯ ಹಿಂಭಾಗದಲ್ಲಿ ಬೆಂಕಿ ಹಿಡಿದು ಶಿವರಾಜ್​ ಕುಮಾರ್​ ಅವರು ನೋಡಿದಾಗ ಅದರಲ್ಲಿ ಒಂದು ಮೆಸೇಜ್​ ಕಂಡಿದೆ. ಅದನ್ನು ನೋಡಿ ಫ್ಯಾನ್ಸ್​ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಷ್ಟಕ್ಕೂ ಆ ಮೆಸೇಜ್​ ಏನೆಂದರೆ, ಘೋಸ್ಟ್​ ಚಿತ್ರವು ಜೀ-5ನಲ್ಲಿ ನವೆಂಬರ್​ 17ರಿಂದ ನೋಡಬಹುದು ಎಂಬ ಮೆಸೇಜ್​ ಅದು. ನನ್ನ ಗ್ಯಾಂಗ್ ಅಲ್ಲಿ ಇರೋ Informer ಒಬ್ಬ್ರು ನಿಮಗೆ ಒಂದು Messages ಕೊಟ್ಟಿದ್ದಾರೆ ಏನು ಅಂತ ಗೊತ್ತಾಯ್ತು ಅಲ್ವಾ ಎನ್ನುವ ಶೀರ್ಷಿಕೆ ಕೊಟ್ಟಿದ್ದು, ಇದು ಸಕತ್​ ವೈರಲ್​  ಆಗಿದೆ. 


ಎಂ.ಜಿ.ಶ್ರೀನಿ ನಿರ್ದೇಶನದ ಘೋಸ್ಟ್‌ ಸಿನಿಮಾವನ್ನು ಎರಡೇ ವಾಕ್ಯಗಳಲ್ಲಿ ವಿವರಿಸಬಹುದು: ಪ್ರತಿಯೊಂದು ಕ್ರಿಯೆಗೂ ಅದನ್ನು ಮಾಡುವವರಿಗೂ ಗೊತ್ತಿಲ್ಲದ ಕಾರಣವೊಂದು ಇದ್ದೇ ಇರುತ್ತದೆ. ನಾಯಕನಾದವನು ಮಿಕ್ಕವರಿಂದ ತನಗೇನು ಬೇಕೋ ಅದನ್ನು ಮಾಡಿಸಬೇಕೇ ಹೊರತು, ಅದನ್ನು ಅವರು ಯಾಕೆ ಮಾಡಬೇಕು ಎಂದು ಹೇಳಬಾರದು. ಕನ್‌ಫ್ಯೂಷನ್ನೇ ಇಲ್ಲ ಮತ್ತು ಕನ್‌ಫ್ಯೂಷನ್ನೇ ಎಲ್ಲಾ. ಇತ್ತೀಚಿನ ಸಿನಿಮಾಗಳ ಚಿತ್ರಕತೆಯಂತೆ ಶ್ರೀನಿ ಕೂಡ ಅತ್ಯಂತ ಕಾಂಪ್ಲಿಕೇಟೆಡ್‌ ಆದ ಚಿತ್ರಕತೆಯೊಂದನ್ನು ಹೆಣೆದಿದ್ದಾರೆ. ಅದನ್ನು ಪೂರ್ತಿ ಅರ್ಥಮಾಡಿಕೊ‍ಳ್ಳಬೇಕಿದ್ದರೆ ಗದ್ದೆ ಬಯಲನ್ನು ಡ್ರೋನ್ ಹಾಕಿಕೊಂಡು ನೋಡಬೇಕು. ಈ ವಾಕ್ಯದ ಅರ್ಥವೇನು ಎಂದು ತಿಳಿಯಲು   ಸಿನಿಮಾ ನೋಡಬೇಕು. ಸಿನಿಮಾ ನೋಡಿದ ನಂತರವೂ ಡ್ರೋನ್‌ನಲ್ಲಿ ಕಂಡ ಕಟ್ಟಡದ ನಕ್ಷೆ, ಘೋಸ್ಟ್‌ಗೆ ಹೇಗೆ ಗೊತ್ತಾಗುತ್ತದೆ ಎಂಬುದು ಥಟ್ಟನೆ ತಿಳಿಯುವುದಿಲ್ಲ. ಶ್ರೀನಿ ಏಕಕಾಲಕ್ಕೆ ಪಾತ್ರಗಳಿಗೂ ನೋಡುಗರಿಗೂ ಸವಾಲು ಒಡ್ಡುತ್ತಾ ಹೋಗುತ್ತಾರೆ. ಪರಿಸ್ಥಿತಿಯನ್ನು ನಿಗೂಢವಾಗಿಸುತ್ತಾ, ಮತ್ತೆ ತಿಳಿಯಾಗಿಸುತ್ತಾ, ಸುಮ್ಮನೆ ನನ್ನ ಹಿಂದೆ ಬನ್ನಿ ಎಂದು ಬಚ್ಚಿಟ್ಟ ನಿಧಿಯೊಂದನ್ನು ತೋರಿಸಲು ಕರೆದೊಯ್ಯುವ ಕಾಪಾಲಿಕನಂತೆ ಮುಂದೆ ಸಾಗುತ್ತಾರೆ. ಪ್ರೇಕ್ಷಕನ ಕೆಲಸ ಇಷ್ಟೇ: ನಿರ್ದೇಶಕನನ್ನು ಕಣ್ಮುಚ್ಚಿಕೊಂಡು ಹಿಂಬಾಲಿಸುವುದು.

ಅವಳ ಡ್ರೆಸ್ಸು, ಆಭರಣ ಇಷ್ಟ ಆಗಲ್ಲ: ಸೀತಾರಾಮದ ವಿಲನ್​ ಭಾರ್ಗವಿಯ ಅಮ್ಮ ಗಿರಿಜಾ ಲೋಕೇಶ್​ ಹೇಳಿದ್ದೇನು?

 

 
 
 
 
 
 
 
 
 
 
 
 
 
 
 

A post shared by Zee Kannada (@zeekannada)

click me!