ಶಿವಣ್ಣನ ಮಗಳ ಸಿನಿಮಾಗೆ ಎಂಟ್ರಿ ಕೊಟ್ರು ಅಚ್ಯುತ್ ಕುಮಾರ್, ಹಳೇ ಬೇರು ಹೊಸ ಚಿಗುರು ಆಟವೇ..?

Published : Jul 09, 2024, 12:23 PM ISTUpdated : Jul 09, 2024, 12:55 PM IST
ಶಿವಣ್ಣನ ಮಗಳ ಸಿನಿಮಾಗೆ ಎಂಟ್ರಿ ಕೊಟ್ರು ಅಚ್ಯುತ್ ಕುಮಾರ್, ಹಳೇ ಬೇರು ಹೊಸ ಚಿಗುರು ಆಟವೇ..?

ಸಾರಾಂಶ

ಈ ಸಿನೆಮಾದಲ್ಲಿ ನಮ್ಮಿಬ್ಬರ ಜೋಡಿ ಹಿಂದಿನ ಸಿನೆಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಅದನ್ನು ನೀವು ಸ್ಕ್ರೀನ್ ಮೇಲೆ ನೋಡಬೇಕು. ಫೈರ್ ಫ್ಲೈ ತುಂಬಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಮತ್ತು ತುಂಬಾ ಮನರಂಜನೆಯಿಂದ ಕೂಡಿದೆ. ..

ನಟ ಶಿವರಾಜ್‌ಕುಮಾರ್ ಮಗಳು ನಿವೇದಿತಾ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿರುವುದು ಗೊತ್ತೇ ಇದೆ. ಈ ಸಿನಿಮಾದಲ್ಲಿ ನಟಿ ಸುಧಾರಾಣಿ ಈಗಾಗಲೇ ಎಂಟ್ರಿ ಕೊಟ್ಟಾಗಿದೆ. ಇದೀಗ  ಹಿರಿಯ ನಟ ಅಚ್ಯುತ್ ಕುಮಾರ್ ಫೈರ್ ಫ್ಲೈನಲ್ಲಿ ಅಭಿನಯಿಸುತ್ತಿರುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ.‌

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಚ್ಯುತ್ ಕುಮಾರ್, 'ನಾನು ಹೀರೋ ತಂದೆಯ ಪಾತ್ರ ಮಾಡುತ್ತಿದ್ದೇನೆ.ಪಾತ್ರ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಒಬ್ಬ ತಂದೆ ಮಗನ ಬಾಂಧವ್ಯ ಮತ್ತು ಅವರಿಬ್ಬರು ಫ್ರೆಂಡ್ಸ್ ಆಗಿದ್ರೆ ಹೇಗೆ ಮಜವಾಗಿರುತ್ತೆ ಅಂತ ಈ ಸಿನೆಮಾದಲ್ಲಿ ನೋಡಬಹುದು. ನನ್ನ ಕೋಸ್ಟಾರ್ ಆಗಿ ಸುಧಾರಾಣಿಯವರು ನಟಿಸುತ್ತಿದ್ದಾರೆ. ಮುಂಚೆ ನಾವು ಬೇರೆ ಸಿನೆಮಾಗಳಲ್ಲಿ ನಮ್ಮ ಜೋಡಿಯನ್ನು ನೋಡಿ ಜನ ಮೆಚ್ಚಿದ್ದರು. 

ಸುದೀಪ್ ಯಾರನ್ನ ಬಾಸ್ ಅಂತಾರೆ..? ಅದ್ಯಾಕೆ ಅಂತ್ಲೂ ಹೇಳಿದಾರೆ, ಹೀಗೂ ಉಂಟೇ ಅನ್ಬೇಡಿ!

ಆದ್ರೆ ಈ ಸಿನೆಮಾದಲ್ಲಿ ನಮ್ಮಿಬ್ಬರ ಜೋಡಿ ಹಿಂದಿನ ಸಿನೆಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಅದನ್ನು ನೀವು ಸ್ಕ್ರೀನ್ ಮೇಲೆ ನೋಡಬೇಕು. ಫೈರ್ ಫ್ಲೈ ತುಂಬಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಮತ್ತು ತುಂಬಾ ಮನರಂಜನೆಯಿಂದ ಕೂಡಿದೆ. ನೀವುಗಳು ಮಿಸ್ ಮಾಡದೆ ದೀಪಾವಳಿಗೆ ಈ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ.    

ಮಾಡದೇ ಇರುವ ಕೊಲೆಗೆ ಜೈಲಿನಲ್ಲಿ ಇದ್ದಾರೆ, ನೋವು ಆಗಲ್ವಾ ಅಂದ್ರು ನಿರ್ಮಾಪಕ ಕೆ ಮಂಜು!

ನಮ್ಮ ಶಿವಣ್ಣನ ಮಗಳು ನಿವೇದಿತಾ ಸಿನೆಮಾ ಮಾಡುತ್ತಿರುವುದು ತುಂಬಾ ಖುಷಿಯಾಗುತ್ತಿದೆ. ಶ್ರೀಮುತ್ತು ಸಿನಿ ಸರ್ವಿಸ್ ನಡಿ ತುಂಬಾ ಪ್ರೊಪೆಷನಲ್ ಆಗಿ ಮುನ್ನೆಡೆಯುತ್ತಿರುವುದು ನೋಡಿದ್ರೆ ಇಂತಹದೊಂದು ನಿರ್ಮಾಣ ಸಂಸ್ಥೆ  ಮತ್ತು ನಿರ್ಮಾಪಕಿ ನಮ್ಮ ಚಿತ್ರರಂಗಕ್ಕೆ ಬೇಕಿತ್ತು ಮತ್ತು ಹೊಸಬರಿಗೆ ಅವಕಾಶ ಕೊಡುತ್ತಿರುವುದರಿಂದ ಹೊಸ ತಲೆಮಾರಿನ ಫಿಲ್ಮಂಮೇಕರ್ ಗೆ ಅನುಕೂಲವಾಗುತ್ತದೆ. 

ತಂದೆ-ಮಗಳ ಬಾಂಧವ್ಯಕ್ಕೆ ಕಪ್ಪು ಚುಕ್ಕೆ ಇಟ್ಟ ಯೂಟ್ಯೂಬರ್ ವಿರುದ್ಧ ಕೇಸ್; ಸಾಯಿ ಧರಮ್ ತೇಜ ಗರಂ! 

ಇವರು ಆಯ್ಕೆ ಮಾಡಿಕೊಂಡಿರುವ ಕಥೆ  ಕುಟುಂಬ ಕೂತು ನೋಡಬಹುದು. ಮತ್ತೆ ಮತ್ತೆ ಈ ತರ ಹೊಸಬರಿಗೆ ಅವಕಾಶ ಕೊಟ್ಟಿ ನಮ್ಮ ಇಂಡಸ್ಟ್ರೀ ಮುಂದಿನ ಹೆಜ್ಜೆಗಳಿಗೆ ಇವರ ನಿರ್ಮಾಣ ಸಂಸ್ಥೆ ಮೆಟ್ಟಿಲುಗಳಾಗಲಿ ಎಂದು ಆಶಿಸುತ್ತೇನೆ' ಎಂದಿದ್ದಾರೆ.

'ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಪಾಪ...ಕರುಳು ಕಿತ್ತು ಬರುತ್ತೆಅನುಶ್ರೀ ಕಥೆ ಕೇಳಿದ್ರೆ, ಕೆನ್ನೆ ಮೇಲೆ ಬಿಸಿ ಹನಿ ಬೀಳದಿದ್ರೆ ನಿಮಗೇನೋ ಆಗಿದೆ..!

'ಫೈರ್ ಫ್ಲೈ’ ಸಿನಿಮಾಗೆ  ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ , ಸುಧಾರಾಣಿ ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ ಅಚ್ಯುತ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

ಏನ್ರೀ ಇದು ನಟ ವಿಷ್ಣುವರ್ಧನ್ ಕಥೆ, ಮತ್ತೊಂದು ದಾಖಲೆ ವಿಷ್ಣುವರ್ಧನ್ ಹೆಸರಲ್ಲಿದೆ..!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಾಯನಿಗೆ ಧುರಂಧರ್ ಬಿಗ್ ಸವಾಲ್! ಕನ್ನಡದಲ್ಲೂ ಬರಲಿದೆ ಧುರಂಧರ್-2, ಟಾಕ್ಸಿಕ್ ರಿಲೀಸ್ ಮುಂದೂಡಿಕೆ?
ಚಿತ್ರರಂಗ ‘ಇಂಡಸ್ಟ್ರಿ’ ಆಗಬೇಕು, ಸಬ್ಸಿಡಿ ಬೇಕೇಬೇಕು: ಜಯಮಾಲಾ