ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ; ಕಿರಿಕ್ ಕೀರ್ತಿ ಶಾಕಿಂಗ್ ಪೋಸ್ಟ್ ವೈರಲ್

By Shruthi Krishna  |  First Published Feb 1, 2023, 3:47 PM IST

ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ ಎಂದು ಕಿರಿಕ್ ಕೀರ್ತಿ ಶಾಕಿಂಗ್ ಪೋಸ್ಟ್ ಶೇರ್ ಮಾಡಿದ್ದು ವೈರಲ್ ಆಗಿದೆ. 



ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟ ಸೋಶಿಯಲ್ ಮೀಡಿಯಾ ಸ್ಟಾರ್ ಕಿರಿಕ್ ಕೀರ್ತಿ ತಾನು ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂದು ಬಹಿರಂಗ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೀರ್ತಿ ತನ್ನ ನೋವಿನ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.   ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಅಲ್ಲದೇ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾದಲ್ಲಿ ಕಿರಿಕ್ ಕೀರ್ತಿ ದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಮಗನ ಜೊತೆಗಿರುವ ಫೋಟೋ ಶೇರ್ ಮಾಡಿ ಜಗತ್ತನ್ನು ಬಿಟ್ಟು ಹೋಗುವ ನಿರ್ಧಾರ ಮಾಡಿದ್ದೆ ಎಂದು ಹೇಳಿದ್ದಾರೆ. 

ಕಿರಿಕ್ ಕೀರ್ತಿ ಪೋಸ್ಟ್  
 
ನಿರ್ಧಾರ ಮಾಡಿಬಿಟ್ಟಿದ್ದೆ. ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ. ಕಾರಣಗಳು ಹಲವು. ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು. ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು. ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು. ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು. ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ. ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? ನನ್ನ ನಂಬಿ ಇನ್ವೆಸ್ಟ್ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ...? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದ್ವು, ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ' ಎಂದು ಬರೆದುಕೊಂಡಿದ್ದಾರೆ. 

Assault on Kirik Keerthi: ನಶೆಯಲ್ಲಿ ಫೋಟೋ ಕ್ಲಿಕ್‌: ಕಿರಿಕ್‌ ಕೀರ್ತಿ ಮೇಲೆ ಬಿಯರ್‌ ಬಾಟಲಿಂದ ಹಲ್ಲೆ

Tap to resize

Latest Videos

undefined

'10 ನಿಮಿಷ ಧ್ಯಾನ ಮಾಡ್ದೆ. ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ. ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ. ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ. ನಿಮ್ಮ ಬೆಂಬಲ‌ ಜೊತೆಗಿರಲಿ. ಡಿಪ್ರೆಷನ್‌ನಿಂದ ಮತ್ತೆ ವಾಪಾಸ್ ಬರಲು ಸಹಕರಿಸಿ. ಮತ್ತೆ ನನ್ನ ಮುಖದ ಮೇಲಿನ ನಗು ವಾಪಾಸ್ ತರುವ ತನಕ ಪ್ರಯತ್ನ‌ ನಿರಂತರ. ಇದು ಹೇಳಿಕೊಳ್ಳಬಾರದ ವಿಷಯ. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ' ಎಂದು ಕಿರಿಕ್ ಕಾರ್ತಿ ತನ್ನ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಮಡದಿಗೆ ನೆಟ್ಟಿಗರ ಚುಚ್ಚು ಮಾತು, ಕುಟುಂಬದಲ್ಲಿ ಅಸಮಾಧಾನ: ನೋವು ತೋಡಿಕೊಂಡ ಕಿರಿಕ್ ಕೀರ್ತಿ

ಆದರೆ ಇಂಥ ನಿರ್ಧಾರಕ್ಕೆ ಕಾರಣವೇನು ಎನ್ನುವುದನ್ನು ರಿವೀಲ್ ಮಾಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗೆ ಕಾಮೆಂಟ್ ಅನ್ನು ಹೈಡ್ ಮಾಡಿದ್ದಾರೆ. ಕೀರ್ತಿ ಮತ್ತೆ ಆಕ್ಟೀವ್ ಆಗಿರುವುದು ಅವರ ಅಭಿಮಾನಿಗಳಿಗೆ ಸಂತಸ ನೀಡಿದೆ. ಧೈರ್ಯವಾಗಿರಿ ಎನ್ನುವ ಕಾಮೆಂಟ್ ಹರಿದುಬರುತ್ತಿದೆ. ಬಿಗ್ ಬಾಸ್ ಬಳಿಕ ಕಿರಿಕ್ ಕೀರ್ತಿ ಒಂದು ಸಿನಿಮಾದಲ್ಲಿ ಮಾಡಿದರು. ಬಳಿಕ ರಿಯಾಲಿಟಿ ಶೋ ಮೂಲಕ ಮತ್ತೆ ಕಿರುತೆರೆ ಪ್ರೇಕ್ಷಕರ ಮುಂದೆ ಬಂದರು. ಬಳಿಕ ಕಿರಿಕ್ ಕೀರ್ತಿ ಹೆಚ್ಚಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ ಕೀರ್ತಿ ಕೆಲವು ಸಮಯದಿಂದ ಸಾಮಾಜಿಕ ಜಾಲತಾಣದಿಂದನೂ ದೂರ ಉಳಿದ್ದರು. ಇದೀಗ ಮತ್ತೆ ವಾಪಾಸ್ ಆಗಿದ್ದು ಮೊದಲ ಹಾಗೆ ಆಗುವ ಪ್ರಯತ್ನ ಮಾಡುತ್ತಿದ್ದಾರೆ.    

click me!