ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲಾ, ಅಮ್ಮ ನೀಡಿದ ಹಳೆಯ ಲಾಕೆಟ್‌ ಎಂದಿದ್ದೇನೆ: ಪಾಚ್ಕೊಳಿ ಎಂದ ನಟ ಜಗ್ಗೇಶ್‌!

Published : Oct 26, 2023, 10:13 AM IST
ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲಾ, ಅಮ್ಮ ನೀಡಿದ ಹಳೆಯ ಲಾಕೆಟ್‌ ಎಂದಿದ್ದೇನೆ: ಪಾಚ್ಕೊಳಿ ಎಂದ ನಟ ಜಗ್ಗೇಶ್‌!

ಸಾರಾಂಶ

ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು ಎಂದು ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣ್ಕಕಾಗಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇತ್ತೀಚೆಗಷ್ಟೇ ಬಂಧನವಾಗಿದ್ದಾರೆ. ಅವರನ್ನು ಜೈಲಿಗೂ ಕಳುಹಿಸಿ ಆಗಿದೆ. ಸಂತೋಷ್ ಬಂಧನದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳೂ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅಲ್ಲದೇ ನಟ ದರ್ಶನ್, ಜಗ್ಗೇಶ್ ಈ ವಿಚಾರವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆ ತಪಾಸಣೆ ಮಾಡಿ ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. 

ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ನಿನ್ನೆಯಿಂದ ತಲೆಕೆಡಿಸಿಕೊಂಡಿದ್ದಾರೆ. ಆ ದೇವರುಗಳಿಗೆ ಧನ್ಯವಾದ. ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ ಪಾಚ್ಕೊಳಿ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ  ಜಗ್ಗೇಶ್ ಬರೆದುಕೊಂಡಿದ್ದಾರೆ. 
 


ಜೊತೆಗೆ ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000 ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೆ ಇರುತ್ತಾರೆ! But Remember One Thing ಒಳ್ಳೆ ಗುಣ ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶ! ಎಂದು ಹುಲಿ ಉಗುರಿನ ಸಂಕಷ್ಟದ ಬಗ್ಗೆ ಜಗ್ಗೇಶ್‌ ರಿಯಾಕ್ಟ್ ಮಾಡಿದ್ದಾರೆ.

ನಿಖಿಲ್‌ಗೆ ಗಿಫ್ಟ್ ಬಂದಿರೋದು ಎಂದು ಅರಣ್ಯಾಧಿಕಾರಿಗಳಿಗೆ ಹುಲಿ ಉಗುರಿನ ಪೆಂಡೆಂಟ್ ಒಪ್ಪಿಸಿದ ಎಚ್‌ಡಿಕೆ!

ಹುಲಿ ಉಗುರು ಧರಿಸಿದ್ದ ಆರೋಪ ಹೊತ್ತಿರುವ ನಟ ಜಗ್ಗೇಶ್ ಮನೆಗೆ ಬುಧವಾರ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಜಗ್ಗೇಶ್ ಪತ್ನಿ ಪರಿಮಳಾ ಅವರು, ಪೂಜೆ ಮಾಡಿ ಇಟ್ಟಿದ್ದ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದರು. ಮಲ್ಲೇಶ್ವರಂನಲ್ಲಿರುವ ಜಗ್ಗೇಶ್ ಮನೆಗೆ ಆರ್‌ಎಫ್‌ಒ ನೇತ್ರಾವತಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಃ ಡಿಸಿಎಫ್ ರವೀಂದ್ರ ಅವರು ಕೂಡ ಭೇಟಿ ಕೊಟ್ಟಿದ್ದರು. ಈ ವೇಳೆ ಜಗ್ಗೇಶ್ ಅವರ ಪತ್ನಿ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದರು. ಪೂಜೆ ಮಾಡಿ ಇಟ್ಟುಕೊಂಡಿದ್ದೆವು ಎಂದು ಅಧಿಕಾರಿಗಳಿಗೆ ಈ ವೇಳೆ ತಿಳಿಸಿದ್ದರು.
 


ಈ ಕುರಿತು ಮಾತನಾಡಿರುವ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ,  'ಜಗ್ಗೇಶ್ ಅವರ ಮನೆ ಪರಿಶೀಲನೆ ಮುಗಿದಿದೆ. ಅವರು ಮಾಹಿತಿ ಕೊಟ್ಟಿದ್ದಾರೆ ಮಹಜರ್‌ ಮಾಡಿದ್ದೇವೆ. ಯಾವ ಪ್ರಾಣಿಗೆ ಸೇರಿದ್ದು ಅಂತ ಚೆಕ್‌ ಮಾಡಲಿದ್ದೇವೆ. ಪೆಂಡೆಂಟ್‌ ಸಿಕ್ಕಿದ್ದು ಅದನ್ನು ತಪಾಸಣೆಗೆ ನೀಡುತ್ತೇವೆ. ವಿಚಾರಣೆಗೆ ಇನ್ನೂ ಅವರನ್ನು ಕರೆದಿಲ್ಲ. ಅವರು ಧರಿಸಿದ್ದು, ಹುಲಿ ಉಗುರೇ ಆಗಿದ್ದಲ್ಲಿ ಅದಕ್ಕೆ  ನ್ಯಾಯಾಂಗದಲ್ಲಿ ಇದ್ದ ಹಾಗೆ ಕ್ರಮ ತೆಗೆದುಕೊಳ್ಳುತ್ತೇವೆ. ನಮ್ಮ ತಾಯಿ‌ ಕೊಟ್ಟಿದ್ದು ಅಂತ  ಹೇಳಿದ್ದಾರೆ. ಇದೇ ವೇಳೆ ಜಗ್ಗೇಶ್‌ ಅವರ ಪತ್ನಿ ಪರಿಮಳ, ಇದು 40 ವರ್ಷದ ಹಳೆಯ ಉಗುರು ಎಂದು ಮಾಹಿತಿ ನೀಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar
ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್