ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ; ನಟ ಚೇತನ್ ಕುಮಾರ್

By Shruiti G Krishna  |  First Published Oct 19, 2022, 10:44 AM IST

ಕಾಂತಾರ ಚಿತ್ರಕ್ಕೆ ವ್ಯತಿರಿಕ್ತ ಪ್ರತಿಕ್ರಿಯೆ ನೀಡಿರುವ ನಟ ಚೇತನ್ ಕುಮಾರ್, ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ಅಲ್ಲ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. 


ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳಿಂದನೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರು, ಸಿನಿ ಗಣ್ಯರು ಚಿತ್ರ ನೋಡಿ ಹಾಡಿ ಹೊಗಳುತ್ತಿದ್ದಾರೆ. ಆದರೆ ಇದಕ್ಕೆ ವ್ಯತಿರಿಕ್ತ ಪ್ರತಿಕ್ರಿಯೆ ನೀಡಿರುವ ನಟ ಚೇತನ್ ಕುಮಾರ್, ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. 
   
ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿ ಎನ್ನುವುದು ನಿಜವಲ್ಲ ಎಂದಿರುವ ಚೇತನ್, ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 'ನಮ್ಮ ಕನ್ನಡದ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ ನಕಲಿ/ಪರವರ ಬಹುಜನ ಸಂಪ್ರದಾಯಗಳು ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ' ಎಂದು ಹೇಳಿದ್ದಾರೆ. 



ಕುತೂಹಲ ಹೆಚ್ಚಾಗ್ತಿದೆ, ಕಾಂತಾರ ನೋಡಲು ಕಾಯುತ್ತಿದ್ದೇನೆ; ನಟಿ ಕಂಗನಾ ರಣಾವತ್

Tap to resize

Latest Videos

ಕಾಂತಾರ ಸಿನಿಮಾದಲ್ಲಿ ಭೂತಕೋಲ, ದೈವಾರಾಧನೆಯೇ ಹೈಲೆಟ್. ಈ ಸಿನಿಮಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಚೇತನ್ ಕುಮಾರ್ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ನೆಟ್ಟಿಗರು ಚೇತನ್ ಕುಮಾರ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಒಬ್ಬಬ್ಬರು ಒಂದೊಂದು ರೀತಿ ಕಾಮೆಂಟ್ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ. 'ಎಲ್ಲೋ ಪರದೇಶದಲ್ಲಿ ಹುಟ್ಟಿರೋ ಬೆರೆಕೆ ನೀನು. ನಿನಗೇನು ಗೊತ್ತು ಕರಾವಳಿ ಸಂಸ್ಕೃತಿ ಬಗ್ಗೆ. ಎಲ್ಲದಕ್ಕು ನಂದೆಲ್ಲಿಡಲಿ ಅಂತ ಬರುತ್ತಿಯಾ ಚೆಡ್ಡಿ ಬಿಚ್ಚುಕೊಂಡು' ಎಂದು ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದಾನೆ. 'ಮತ್ತೋರ್ವ ಕಾಮೆಂಟ್ ಮಾಡಿ ಎಲ್ಲೇ ಹೋದ್ರು ಆ ಧರ್ಮ ಈ ಧರ್ಮಅಂತಿಯೋಲ್ಲೋ' ಎಂದು ಹೇಳಿದ್ದಾರೆ. ಹೀಗೆ ಅನೇಕರು ಚೇತನ್ ಅವರನ್ನು ತರಾಟೆ ತೆಗೆದುಕೊಂಡಿದ್ದು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.

pic.twitter.com/ZiGrjsN1mL

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa)

 

click me!