ನಟ ಡಾಲಿ ಧನಂಜಯ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ

Published : Feb 28, 2024, 07:08 PM ISTUpdated : Feb 28, 2024, 07:41 PM IST
ನಟ ಡಾಲಿ ಧನಂಜಯ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ

ಸಾರಾಂಶ

ರಾಜ್ಯ ಸರ್ಕಾರದಿಂದ '15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ ರಾಯಭಾರಿಯನ್ನಾಗಿ (Brand Ambassador) ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಆದೇಶಿಸಿದೆ.

ಬೆಂಗಳೂರು (ಫೆ.28): 2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲಿರುವ '15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ ರಾಯಭಾರಿಯನ್ನಾಗಿ (Brand Ambassador) ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಆದೇಶಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದೆ. ಅದರಂತೆ ಪ್ರಸಕ್ತ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಮೇರೆಗೆ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರದ ಆದೇಶದಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿತ್ತು. 

ಬೆಂಗಳೂರಲ್ಲಿ ನಿಮ್ಮ ವಾಣಿಜ್ಯ ಮಳಿಗೆಗೆ ಕನ್ನಡ ನಾಮಫಲಕ ಹಾಕಿಲ್ವಾ..? ಬಿಬಿಎಂಪಿಯವರು ನಾಳೆಯೇ ಅಂಗಡಿ ಮುಚ್ಚಿಸ್ತಾರೆ!

ಕಳೆದ ಜ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿನ ನಿರ್ಣಯದ ಅನ್ವಯ ಈ ಚಲನಚಿತ್ರೋತ್ಸವವನ್ನು 2024ರ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ. ಈ ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಫೆ.29 ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗ ಹಾಗೂ ಮಾ.7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.

ಬೆಲೆ ಏರಿಕೆ ನಡುವೆ ವಿದ್ಯುತ್ ದರ ಇಳಿಕೆಯ ಖುಷಿ ನೀಡಿದ ಗ್ಯಾರಂಟಿ ಸರ್ಕಾರ; ಯೂನಿಟ್‌ಗೆ 1.10 ರೂ. ಇಳಿಕೆ

ಈ ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ (Brand Ambassador) ನೇಮಿಸಿ ಸರ್ಕಾರದ ಆದೇಶ ಹೊರಡಿಸುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಶಿಫಾರಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ಡಾಲಿ ಧನಂಜಯ್ ಅವರನ್ನು ಚಲನಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದೈವದ ಮಾತು ನಿಜವಾಯ್ತು, ಹರಕೆ ತೀರಿಸಲು ದಂಪತಿ ಸಮೇತ ಬಂದ ರಿಷಬ್ ಶೆಟ್ಟಿ
ಯಶ್- ರಾಧಿಕಾ ಪುತ್ರಿಗೆ 7 ವರ್ಷಗಳ ಸಂಭ್ರಮ: ಹುಟ್ಟುಹಬ್ಬದ ಕ್ಯೂಟ್​ ಫೋಟೋಗಳು ಇಲ್ಲಿವೆ