ರೇಣುಕಾಸ್ವಾಮಿ ಕೊಲೆ ಕೇಸ್‌: ಜೈಲಲ್ಲಿ ಚಿತ್ರರಂಗದವರ ಭೇಟಿಗೆ ದರ್ಶನ್‌ ನಕಾರ..!

Published : Jun 29, 2024, 08:51 AM IST
ರೇಣುಕಾಸ್ವಾಮಿ ಕೊಲೆ ಕೇಸ್‌: ಜೈಲಲ್ಲಿ ಚಿತ್ರರಂಗದವರ ಭೇಟಿಗೆ ದರ್ಶನ್‌ ನಕಾರ..!

ಸಾರಾಂಶ

ದರ್ಶನ್ ಅವರನ್ನು ಭೇಟಿಯಾಗಲು ನಿರ್ದೇಶಕರಾದ ಜೋಗಿ ಪ್ರೇಮ್, ಕಾಟೇರ ತರುಣ್ ಸುಧೀರ್ ಹಾಗೂ ಕೆಲ ನಿರ್ಮಾಪಕರು ತೆರಳಿದ್ದರು. ಆದರೆ ತಮ್ಮ ಪತ್ನಿ ಹಾಗೂ ಪುತ್ರನ ಹೊರತುಪಡಿಸಿ ಇನ್ನುಳಿದವರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ. ಹೀಗಾಗಿ ಜೈಲಿನಲ್ಲಿರುವ ತಮ್ಮ ಗೆಳೆಯನ 'ದರ್ಶನ' ಸಿಗದೆ ಚಲನಚಿತ್ರ ರಂಗದ ಬೇಸರದಲ್ಲಿ ಸ್ನೇಹಿತರು ಮರಳಿದ್ದಾರೆ.   

ಬೆಂಗಳೂರು(ಜೂ.29):  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮ್ಮ ಭೇಟಿಗೆ ಆಗಮಿಸಿದ್ದ ನಟರು. ನಿರ್ದೇಶಕರು ಸೇರಿದಂತೆ ಚಿತ್ರರಂಗದ ಸ್ನೇಹಿತರನ್ನು ಕಾಣಲು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ನಿರಾಕರಿಸಿದ್ದಾರೆ. 

ದರ್ಶನ್ ಅವರನ್ನು ಭೇಟಿಯಾಗಲು ನಿರ್ದೇಶಕರಾದ ಜೋಗಿ ಪ್ರೇಮ್, ಕಾಟೇರ ತರುಣ್ ಸುಧೀರ್ ಹಾಗೂ ಕೆಲ ನಿರ್ಮಾಪಕರು ತೆರಳಿದ್ದರು. ಆದರೆ ತಮ್ಮ ಪತ್ನಿ ಹಾಗೂ ಪುತ್ರನ ಹೊರತುಪಡಿಸಿ ಇನ್ನುಳಿದವರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ. ಹೀಗಾಗಿ ಜೈಲಿನಲ್ಲಿರುವ ತಮ್ಮ ಗೆಳೆಯನ 'ದರ್ಶನ' ಸಿಗದೆ ಚಲನಚಿತ್ರ ರಂಗದ ಬೇಸರದಲ್ಲಿ ಸ್ನೇಹಿತರು ಮರಳಿದ್ದಾರೆ ಎಂದು ತಿಳಿದು ಬಂದಿದೆ.

ಶಾಂತಂ ಪಾಪಂ ಸೀಸನ್‌ನಲ್ಲಿ ದರ್ಶನ್‌ ಮರ್ಡರ್‌ ಕೇಸ್‌ ಎಪಿಸೋಡ್‌?

ವಾರದಲ್ಲಿ 2 ಬಾರಿ ಭೇಟಿಗೆ ಅವಕಾಶ:

ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಅವರ ಕುಟುಂಬ ದವರು ಹಾಗೂ ಸ್ನೇಹಿತರು ಸೇರಿದಂತೆ ಹೊರಗಿನವರಿಗೆ ವಾರದಲ್ಲಿ 2 ಬಾರಿ ಭೇಟಿಗೆ ಅವಕಾಶವಿದೆ. ಈ ನಿಯಮವೇ ದರ್ಶನ್‌ಗೂ ಅನ್ನಯವಾಗಲಿದೆ. ಈ ಹಿನ್ನಲೆಯಲ್ಲಿ ದರ್ಶನ್ ಭೇಟಿಗೆ ಬರುವ ಅವರ ಅಭಿಮಾನಿಗಳು ಸೇರಿ ಹೊರಗಿನವರಿಗೆ ಅನುಮತಿ ನೀಡುತ್ತಿಲ್ಲ ಎಂದು ಕಾರಾಗೃಹದ ಅಧಿಕಾರಿಗಳು ಹೇಳಿದ್ದಾರೆ.

ಜೈಲಿಂದ ಹೊರಬಂದ ಬಳಿಕ ಮತ್ತೆಂದೂ ಡ್ರಿಂಕ್ಸ್ ಮಾಡ್ಬೇಡ; ನಟ ದರ್ಶನ್‌ಗೆ ಅಗ್ನಿ ಶ್ರೀಧರ್ ಸಲಹೆ!

ಜೈಲಿಗೆ ದರ್ಶನ್ ಆಗಮಿಸಿದ ಬಳಿಕ ಅವರನ್ನು ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿಯಾಗಿದ್ದರು. ಅದೇ ವೇಳೆ ದರ್ಶನ್ ಭೇಟಿಗೆ ನಟ ವಿನೋದ್ ಪ್ರಭಾಕರ್‌ಸಹ ಬಂದಿದ್ದರು. ಆಗ ಅವರ ಜತೆ ತೆರಳಿ ವಿನೋದ್ ಭೇಟಿಯಾಗಿದ್ದರು. ಇದಾದ ಬಳಿಕ ಹೊರಗಿನವರನ್ನು ಕಾಣಲು ದರ್ಶನ್ ಒಲ್ಲೆ ಎನ್ನುತ್ತಿದ್ದಾರೆ.

ಮುಖ ತೋರಿಸಲು ಹಿಂಜರಿಕೆ: 

ಕೊಲೆ ಆರೋಪ ಹೊತ್ತು ಜೈಲು ಸೇರಿದ ಬಳಿಕ ದರ್ಶನ್ ಮುಗುಮ್ಮಾಗಿದ್ದಾರೆ. ಯಾರೊಂದಿಗೆ ಹೆಚ್ಚಿನ ಮಾತುಕತೆ ಇಲ್ಲದೆ ಮೌನವಾಗಿದ್ದಾರೆ. ಜೈಲಿನಲ್ಲಿ ಪತ್ನಿ ಹಾಗೂ ಮಗನನ್ನು ನೋಡಿ ಭಾವುಕರಾಗಿದ್ದ ಅವರು, ಬೇರೆಯವರಿಗೆ ಮುಖ ತೋರಿಸಲು ಹಿಂದೇಟು ಹಾಕುತ್ತಿದ್ದಾರೆ. ಯಾರೊಂದಿಗೂ ಮಾತನಾಡಲ್ಲ ಎನ್ನುತ್ತಿದ್ದಾರೆಂದು ಓರ್ವ ಅಧಿಕಾರಿ ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದರ್ಶನ್‌ ಡೆವಿಲ್‌ ಸಿನಿಮಾದ ಫಸ್ಟ್ ಡೇ ಫಸ್ಟ್‌ ಶೋ ಹೌಸ್‌ಫುಲ್‌: ಎಷ್ಟು ಕೋಟಿ ಕಲೆಕ್ಷನ್ ಆಗಿದೆ ಗೊತ್ತಾ?
ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!