
ನಟ ದರ್ಶನ್ ತೂಗುದೀಪ ಅವರು ( Darshan Thoogudeepa ) ಸದ್ಯ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ದರ್ಶನ್‌ಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಪರಿಣಾಮ, ಮತ್ತೆ ಅವರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಇನ್ನು ದರ್ಶನ್ ನಟನೆಯ ʼಡೆವಿಲ್ʼ ಸಿನಿಮಾದ ದರ್ಶನ್ ಆಕ್ಟಿಂಗ್, ಡಬ್ಬಿಂಗ್ ಕೂಡ ಮುಗಿದಿದೆ. ಈ ಸಿನಿಮಾ ದರ್ಶನ್ ಅನುಪಸ್ಥಿತಿಯಲ್ಲಿ ರಿಲೀಸ್ ಆಗತ್ತಾ ಎಂಬ ಪ್ರಶ್ನೆ ಇದೆ. ಹೀಗಿರುವಾ ಪತ್ನಿ ವಿಜಯಲಕ್ಷ್ಮೀ ಮುಖಾಂತರ ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ಕಳಿಸಿದ್ದಾರೆ.
ಎಲ್ಲರಿಗೂ ನಮಸ್ಕಾರ.
ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ.
ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರೂ, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ದಿ ಡೆವಿಲ್“ ಚಿತ್ರದ ಎಲ್ಲ ಕೆಲಸ ಕಾರ್ಯಗಳು ಯಾವುದೆ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ.
“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
ನಿಮ್ಮ ಪ್ರೀತಿಯ
ದಾಸ.
ಪೊಲೀಸರ ಮಾಹಿತಿ ಪ್ರಕಾರ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ಅಶ್ಲೀಲ ಮೆಸೇಜ್‌ಗಳನ್ನು ಕಳಿಸಿದ್ದರು. ಇದು ದರ್ಶನ್ ಕಿವಿಗೆ ಬಿದ್ದಿತ್ತು. ಆ ಬಳಿಕ ದರ್ಶನ್ ಅವರು ತಮ್ಮ ಗ್ಯಾಂಗ್ ಸಹಾಯದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆಸಿಕೊಂಡಿದ್ದರು. ಅಲ್ಲಿ ರೇಣುಕಾಸ್ವಾಮಿಗೆ ಮೂರು ದಿನಗಳ ಕಾಲ ಹಲ್ಲೆ ಮಾಡಲಾಗಿತ್ತು. ಈ ನೋವಿನಿಂದ ಅವರು ಸಾವನ್ನಪ್ಪಿದ್ದು, ಆ ಬಳಿಕ ರಾಜಕಾಲುವೆಯಲ್ಲಿ ಹಣ ಎಸೆಯಲಾಗಿತ್ತು. ಇಬ್ಬರು ವ್ಯಕ್ತಿಗಳು ಪೊಲೀಸ್ ಠಾಣೆಗೆ ಬಂದು ತಾವು ಕೊಲೆ ಮಾಡಿರೋದಾಗಿ ಒಪ್ಪಿಕೊಂಡಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ಮಾಡಿದಾಗ ನಟ ದರ್ಶನ್ ಹೆಸರು ಕೇಳಿಬಂದಿತ್ತು. ಸಂಪೂರ್ಣ ತನಿಖೆ ಮಾಡಿದಾಗ ಒಟ್ಟೂ ಹದಿನೇಳು ಜನರನ್ನು ವಶಕ್ಕೆ ಪಡೆಯಲಾಗಿತ್ತು. ಇದು 2024 ಜೂನ್ ತಿಂಗಳಿನಲ್ಲಿ ನಡೆದ ಘಟನೆಯಾಗಿತ್ತು. ಅದಾದ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿ ದರ್ಶನ್ ಇದ್ದರು. ಅನಾರೋಗ್ಯದ ಕಾರಣ ನೀಡಿ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್‌ನಲ್ಲಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಅವರು ಆಪರೇಶನ್ ಮಾಡಿಸಿಕೊಳ್ಳದೆ, ʼದಿ ಡೆವಿಲ್ʼ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದರು. ಇದನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಸುಪ್ರೀಂ ಕೋರ್ಟ್ ದರ್ಶನ್ ಸೇರಿ ಏಳು ಜನರ ಜಾಮೀನನ್ನು ರದ್ದು ಮಾಡಿದೆ. ಹೀಗಾಗಿ ಮತ್ತೆ ದರ್ಶನ್ ಜೈಲು ಸೇರಿದ್ದಾರೆ. ಈ ಕೇಸ್ ಟ್ರಯಲ್ ಶುರು ಆಗಲಿದ್ದು, ಯಾವಾಗ ಕೊನೆ ತೀರ್ಪು ಹೊರಬೀಳಲಿದೆ ಎಂದು ಕಾದು ನೋಡಬೇಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.