
ಹೀಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಮಂತ್ರಾಲಯಕ್ಕೆ ತೆರಳಿ ರಾಯರಿಗೆ ವಿಶೇಷ ಪೂಜೆ ಮಾಡಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಈ ಬಗ್ಗೆ ಸ್ವತಃ ಜಗ್ಗೇಶ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನನ್ನ ಹುಟ್ಟುಹಬ್ಬದ ದಿನ ರಾಯರು ನಿದ್ರಿಸುತ್ತಿದ್ದ ಜಾಗದಲ್ಲಿ ಅವರ ಆ ದಿನವನ್ನು ನೆನೆದು ಕೂತ ಕ್ಷಣ ರೋಮಾಂಚನಗೊಂಡೆ’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಮಂತ್ರಾಲಯಕ್ಕೆ ಹೋಗುವ ದಾರಿಯಲ್ಲಿ ತಾವು ಭೇಟಿ ಮಾಡುವ ವಿಶೇಷ ಅಭಿಮಾನಿಗೆ ಈ ಬಾರಿ ವೀಲ್‌ಚೇರ್ ಕೊಳ್ಳಲು ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಜಗ್ಗೇಶ್ ಅವರಿಗೆ ಸಾಕಷ್ಟುಮಂದಿ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಚಿತ್ರರಂಗದ ನಟ, ನಟಿಯರು ವಿಶೇಷವಾಗಿ ಶುಭ ಕೋರಿದ್ದಾರೆ. ಸದ್ಯಕ್ಕೆ ‘ತೋತಾಪುರಿ’ ಹಾಗೂ ‘ರಂಗನಾಯಕ’ ಚಿತ್ರಗಳಲ್ಲಿ ನಟಿಸುತ್ತಿರುವ ಜಗ್ಗೇಶ್ ಅವರಿಗೆ ಈ ಎರಡೂ ಚಿತ್ರತಂಡಗಳಿಂದ ಶುಭ ಕೋರಿದ್ದು, ವಿಶೇಷವಾದ ಪೋಸ್ಟರ್ಗಳನ್ನೂ ಸಹ ಬಿಡುಗಡೆ ಮಾಡಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.