ಜನ್ಮದಿನದಂದೇ 'ವೀರ್‌'ನಾಗಿ ಜೆಕೆ ಎಂಟ್ರಿ, ಸೂಪರ್ ಸ್ಟೈಲ್‌ ಮೋಷನ್ ಪೋಸ್ಟರ್ ರಿಲೀಸ್!

By Shriram Bhat  |  First Published May 2, 2024, 7:13 PM IST

ಜೆಕೆ ಹೊಸ ಸಿನಿಮಾಗೆ 'ವೀರ್' ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ವೀರ್ ಹೆಸರಿನ ಚಿತ್ರಕ್ಕೆ ಯುವ ಪ್ರತಿಭೆ ಲೋಹಿತ್ ಆರ್ ನಾಯ್ಕ್ ಆಕ್ಷನ್ ಕಟ್ ಹೇಳಿದ್ದಾರೆ. 


ಕನ್ನಡದ ಪ್ರತಿಭಾನ್ವಿತ ಜೆಕೆ ಊರೂಫ್ ಜಯರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳಲ್ಲಿ ಮಿಂಚಿದ ಬಳಿಕ  'ಅಶ್ವಿನಿ ನಕ್ಷತ್ರ' ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ, ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು. ಹಲವು ಸಿನಿಮಾಗಳ ಮೂಲಕ ಕನ್ನಡ ಸಿನಿರಸಿಕರಿಂದಲೂ ಪ್ರೀತಿ ಪಡೆದಿರುವ ಜಯರಾಮ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

'ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ, ಬಂದೇ ಬಿಟ್ಟ ಪುಷ್ಪರಾಜ್; 'ಪುಷ್ಪ 2' ಸಾಂಗ್ ಬಿಡುಗಡೆ!

Tap to resize

Latest Videos

ಜೆಕೆ ಹೊಸ ಸಿನಿಮಾಗೆ 'ವೀರ್' ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ವೀರ್ ಹೆಸರಿನ ಚಿತ್ರಕ್ಕೆ ಯುವ ಪ್ರತಿಭೆ ಲೋಹಿತ್ ಆರ್ ನಾಯ್ಕ್ ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಲೋಹಿತ್ ಅವರಿಗಿದು ಚೊಚ್ಚಲ ಪ್ರಯತ್ನ. ವೀರ್ ಸಿನಿಮಾ ಮೂಲಕ ಲೋಹಿತ್ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಹರಿ ಸಂತು ಗರಡಿಯಲ್ಲಿ ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಲೋಹಿತ್ ವೀರ್ ಚಿತ್ರದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಶ್ರೀನಿಧಿ ಶೆಟ್ಟಿಯೋ, ರಾಧಿಕಾ ಪಂಡಿತ್ ಆ? ಯಶ್ ಆಯ್ಕೆ ಯಾರೆಂಬ ಪ್ರಶ್ನೆಗೆ ಸಿಕ್ಕಿದೆ ಉತ್ತರ!

ವೀರ್ ಸಿನಿಮಾದಲ್ಲಿ ಜೆಕೆಗೆ ಜೋಡಿಯಾಗಿ ಪ್ರಣತಿ ನಾಯಕಿಯಾಗಿ ನಟಿಸಿದ್ದು, ರೋಚಿತ್,  ಮಂಜು ಪಾವಗಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರದಲ್ಲಿ ಜೆಕೆ ಮೂಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವೀರ್ ಸಿನಿಮಾವನ್ನು ರಾಜರಾಜೇಶ್ವರಿ ಪ್ರೊಡಕ್ಷನ್ ನಡಿ ಗೀತಾ ಜಯಶ್ರೀನಿವಾಸನ್ ಬಂಡವಾಳ ಹೂಡುತ್ತಿದ್ದಾರೆ. ಆರ್ ದೇವೇಂದ್ರ ಛಾಯಾಗ್ರಹಣ, ಧ್ರುವ ಎಂ ಬಿ ಸಂಗೀತ , ಆರ್ಯನ್ ಗೌಡ ಸಂಕಲನ, ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆ, ಹರಿ ಸಂತು ಸಾಹಿತ್ಯ ಹಾಡುಗಳಿವೆ. ಸದ್ಯ ವೀರ್ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಕನ್ನಡದ 'ಕಥಾನಾಯಕ' ಸಿನಿಮಾದಲ್ಲೂ ಹಾಡಿದ್ದ ತಮಿಳು ಗಾಯಕಿ ಉಮಾ ರಮಣನ್ ನಿಧನ

click me!