'ಡಾ ವಿಷ್ಣುವರ್ಧನ್‌ ಸಮಾಧಿಗೆ ಬೇಕಾದ್ರೆ ಹಣದ ವ್ಯವಸ್ಥೆ ಮಾಡ್ತೀನಿ, ಕೋರ್ಟ್‌ಗೂ ಹೋಗ್ತೀನಿ- Actor Kiccha Sudeep

Published : Aug 09, 2025, 05:31 PM ISTUpdated : Aug 09, 2025, 06:07 PM IST
actor kiccha sudeep on Dr Vishnuvardhan Memorial demolition abhiman studio

ಸಾರಾಂಶ

Dr Vishnuvardhan Memorial: ಡಾ ವಿಷ್ಣುವರ್ಧನ್‌ ಸಮಾಧಿ ವಿಚಾರವಾಗಿ ನಟ ಕಿಚ್ಚ ಸುದೀಪ್‌ ಮಾತನಾಡಿದ್ದಾರೆ. ಈ ಘಟನೆಯನ್ನು ಖಂಡಿಸಿದ್ದಲ್ಲದೆ, ನಾನು ಕೋರ್ಟ್‌ಗೆ ಬರಲು ರೆಡಿಯಿದ್ದೇನೆ ಎಂದಿದ್ದಾರೆ. 

ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿ ಡಾ ವಿಷ್ಣುವರ್ಧನ್‌ ( Dr Vishnuvardhan Memorial ) ಅವರ ಸಮಾಧಿ ಇತ್ತು. ಇನ್ನು ಮೈಸೂರಿನಲ್ಲಿ ಇವರ ಸ್ಮಾರಕ ಮಾಡಲಾಗಿದೆ. ಆದರೆ ಮೊನ್ನೆ ರಾತ್ರೋ ರಾತ್ರಿ ವಿಷ್ಣುವರ್ಧನ್‌ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ. ಇದನ್ನು ಅವರ ಫ್ಯಾನ್ಸ್‌ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಕೂಡ ಖಂಡಿಸಿದ್ದಾರೆ. ಈಗ ನಟ ಕಿಚ್ಚ ಸುದೀಪ್‌ ಕೂಡ ಇದನ್ನು ವಿರೋಧಿಸಿ, ನಾನು ಆ ಜಮೀನು ಖರೀದಿ ಮಾಡುವೆ, ಸ್ಮಾರಕ ಕಟ್ಟುವೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಕಾನೂನಿನ ಮೂಲಕ ಹೋರಾಟ ಮಾಡಲು ರೆಡಿ ಇದ್ದೇನೆ ಎಂದಿದ್ದಾರೆ.

ದೇವಸ್ಥಾನವನ್ನು ಒಡೆದಾಗ ಆದಷ್ಟು ನೋವಾಗಿದೆ

ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೇಯಿಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ, ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುವುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ.

ನಾನು ಸರ್ಕಾರಕ್ಕೆ ಮನವಿ ಮಾಡಲು ರೆಡಿ!

ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ.

ವಿಷ್ಣುವರ್ಧನ್‌ಗೆ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗ ಸಿಗಲ್ವಾ?

ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್‌ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ.

ಭೂಮಿ ವ್ಯವಹಾರ ದೊಡ್ಡದಾಯ್ತಾ?

ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದ್ದ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ.

ಏನೇ ಹಣ ಬೇಕಿದ್ರೂ ನಾನು ಕೊಡುವೆ

ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ. ನಿಮ್ಮ ಪ್ರೀತಿಯ ಕಿಚ್ಚ

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ