Kanatara; ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ? ನಟ ಕಿಶೋರ್ ಪ್ರಶ್ನೆ

By Shruthi Krishna  |  First Published Oct 24, 2022, 11:09 AM IST

ಕಾಂತಾರ ವಿವಾದದ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯೆ ನೀಡಿದ್ದಾರೆ. ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ? ಎಂದು ನಟ ಪ್ರಶ್ನೆ ಮಾಡಿದ್ದಾರೆ. 


ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದೇಶದಾದ್ಯಂತ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸಿನಲ್ಲೂ ಉತ್ತಮ ಕಮಾಯಿ ಮಾಡಿದೆ. ಜೊತೆಗೆ  ವಿವಾದದಿಂದನು ಕಾಂತಾರ ಚರ್ಚೆಯಲ್ಲಿದೆ. ರಿಷಬ್ ಶೆಟ್ಟಿ ಹೇಳಿದ ಹಾಗೆ ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್ ಪ್ರತಿಕ್ರಿಯೆ ನೀಡುತ್ತಿದ್ದಂತೆಯೇ ಭಾರೆ ಚರ್ಚೆಗೆ ಗ್ರಾಸವಾಯಿತು. ಹಿಂದೂಪರ ಹೋರಾಟಗಾರರು ನಟ ಚೇತನ್ ಮೇಲೆ ಮುಗಿ ಬಿದ್ದರು. ಧರ್ಮ ಮತ್ತು ಕಾಂತಾರ ಚರ್ಚೆ ಜೋರಾಗಿದೆ. ಇದೀಗ ಈ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದ ಕಿಶೋರ್ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದಾರೆ. ಫೇಸ್ ಬುಕ್ ನಲ್ಲಿ ಈ ಬಗ್ಗೆ ದೀರ್ಘವಾಗಿ ಬರೆದುಕೊಂಡಿರುವ ಕಿಶೋರ್,  ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ. 

ಕಿಶೋರ್ ಅವರ ಪೋಸ್ಟ್ ಹೀಗಿದೆ

Tap to resize

Latest Videos

ಕಾಂತಾರ ಮತ್ತು ಧರ್ಮ,

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ  ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ??

ಎಲ್ಲ ಒಳ್ಳೆಯ ಸಿನಿಮಾಗಳಂತೆ 'ಕಾಂತಾರ' ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು.

ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಕಿಶೋರ್ ಬರೆದುಕೊಂಡಿದ್ದಾರೆ.  

ರಿಷಬ್ ಶೆಟ್ಟಿಯ ಮಾಸ್ಟರ್‌ಪೀಸ್; 'ಕಾಂತಾರ' ನೋಡಿ ಹೊಗಳಿದ 'ಕಾಶ್ಮೀರ್ ಫೈಲ್ಸ್' ನಿರ್ದೇಶಕ ಅಗ್ನಿಹೋತ್ರಿ

ಕಾಂತಾರ ಸಿನಿಮಾ ವಿವಾದ ನಡುವೆಯೂ ಅನೇಕರು ಮೆಚ್ಚಿಕೊಂಡಿದ್ದಾರೆ. ಪ್ರೇಕ್ಷಕರ ಜೊತೆಗೆ ಅನೇಕ ಸಿನಿಮಾ ಸ್ಟಾರ್ಸ್ ಕೂಡ ಹಾಡಿ ಹೊಗಳಿದ್ದಾರೆ. ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಕ್ಸ್ ಆಫೀಸ್‌ನಲ್ಲೂ ಭರ್ಜರಿ ಕಮಾಯಿ ಮಾಡಿದೆ.

Kantara Collection; ಮುಂದುವರೆದ ರಿಷಬ್ ಶೆಟ್ಟಿ ಅಬ್ಬರ, ಹಿಂದಿಯಲ್ಲಿ ಇದುವರೆಗೂ ಒಟ್ಟು ಗಳಿಸಿದ್ದೆಷ್ಟು?

ಕಾಂತಾರ ಬಗ್ಗೆ

ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಪಾತ್ರ ಗಮನಾರ್ಹವಾಗಿದೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.    
 

click me!