ನಟ ನವೀನ್ ಕೃಷ್ಣ ಹೆಂಡತಿ ಅಕ್ಕ ನೀತಾ ಪವರ್ ನಾಪತ್ತೆ; ಹುಡುಕಿಕೊಡುವಂತೆ ಮನವಿ

Published : Jan 20, 2023, 04:50 PM ISTUpdated : Jan 21, 2023, 09:09 AM IST
ನಟ ನವೀನ್ ಕೃಷ್ಣ ಹೆಂಡತಿ ಅಕ್ಕ ನೀತಾ ಪವರ್ ನಾಪತ್ತೆ; ಹುಡುಕಿಕೊಡುವಂತೆ ಮನವಿ

ಸಾರಾಂಶ

ಸ್ಯಾಡಲ್ ವುಡ್ ನಟ ನವೀನ್ ಕೃಷ್ಣ ಅವರ ಅಕ್ಕ ನೀತಾ ಪವರ್ ನಾಪತ್ತೆಯಾಗಿದ್ದು ಹುಡುಕಿ ಕೊಡುವಂತೆ ಮಾಡಿದ್ದಾರೆ.  

ಸ್ಯಾಂಡಲ್ ವುಡ್ ನಟ, ನಿರ್ದೇಶಕ ನವೀನ್ ಕೃಷ್ಣ  ಅವರ ಅಕ್ಕ ನೀತಾ ಪವರ್ ನಾವತ್ತೆಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನೀತಾ ಕಾಣಿಸುತ್ತಿಲ್ಲ ಎಂದು ನಟ ನವೀನ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನ್ನ ಸಹೋದರಿಯ ಫೋಟೋ ಮತ್ತು ಹೆಚ್ಚಿನ ಮಾಹಿತಿಯನ್ನು ನವೀನ್ ಕೃಷ್ಣ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ. ಫೋಟೋ ಜೊತೆಗೆ ‘ಕಂಡರೆ ಕೂಡಲೇ ತಿಳಿಸಿ ನಮ್ಮ ಅಕ್ಕ’ ಎಂದು ಹೇಳಿದ್ದಾರೆ. 

ಪೋಸ್ಟ್ ನಲ್ಲಿ ಸಂಪೂರ್ಣ ವಿವರ ನೀಡಿದ್ದಾರೆ. ಎಲ್ಲಿಂದ ನಾಮತ್ತೆಯಾಗಿದ್ದು, ಯಾವಾಗ ಮತ್ತು ಸಮಯವನ್ನು ತಿಳಿಸಿದ್ದಾರೆ. ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ನೀತಾ ಪವಾರ್ ಜನವರಿ 17 ರಂದು ಮಧ್ಯಾಹ್ನ 2:57ಕ್ಕೆ ಮನೆಯಿಂದ ಹೊರ ಹೋದವರು ವಾಪಸ್ ಬಂದಿಲ್ಲ. ದಯವಿಟ್ಟು ಕಂಡರೆ ತಿಳಿಸಿ ಎಂದು ಹೇಳಿದ್ದಾರೆ.  ಈ ಮಾಹಿತಿಯನ್ನು ಇತರರೊಂದಿಗೆ ಹಂಚಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ. ಜೊತೆಗೆ ಒಂದಿಷ್ಟು ಫೋನ್ ನಂಬರ್‌ಗಳನ್ನು ನೀಡಿದ್ದಾರೆ.  

ಕಥೆ ಹಿಂದಿನ ವ್ಯಥೆ ಎಂದಿಗೂ ಸ್ಪೂರ್ತಿದಾಯಕ: ಕೇಳಿ ನವೀನ್ ಕೃಷ್ಣ ಅವರ ಕ್ಲೋಸಪ್ ಕಥೆ

ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರ ಪುತ್ರನಾದ ನವೀನ್ ಕೃಷ್ಣ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದರು. 1982ರಲ್ಲಿ ಪರಾಜಿತ ಸಿನಿಮಾದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದರು. ಬಳಿಕ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಧಿಮಾಕು ಸೇರಿದಂತೆ ಹಲವು ಚಿತ್ರಗಳಲ್ಲಿ ನಾಯಕ ನಟರಾಗಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲೂ ನಟಿಸಿದ್ದಾರೆ. ಸಿನಿಮಾ ಜೊತೆಗೆ ಧಾರಾವಾಹಿಗಳಲ್ಲೂ ನಟಿಸಿ ಖ್ಯಾತಿಗಳಿಸಿದ್ದಾರೆ. ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಅನೇಕ ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ.  ಈಗಲೂ ಕೆಲವು ಧಾರಾವಾಹಿಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್