ಸುದೀಪ್ ಬಿಜೆಪಿಗೆ; ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದ ಪ್ರಕಾಶ್ ರಾಜ್

By Shruthi Krishna  |  First Published Apr 5, 2023, 11:41 AM IST

ಸುದೀಪ್ ಬಿಜೆಪಿಗೆ ಸೇರುವ ಬಗ್ಗೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದು ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಹೇಳಿದ್ದಾರೆ. 


ಸ್ಯಾಂಡಲ್‌ವುಡ್‌ ಸ್ಟಾರ್ ನಟ ಕಿಚ್ಚ ಸುದೀಪ್‌ ಇಂದು (ಏಪ್ರಿಲ್ 5) ಬಿಜೆಪಿಗೆ  ಸೇರುತ್ತಿದ್ದಾರೆ ಎನ್ನುವ ಸುದ್ದಿ ದೊಡ್ಡ ಸಂಚಲನ ಮೂಡಿಸಿದೆ. ರಾಜ್ಯ ರಾಜಕೀಯದಲ್ಲಿ ಕಿಚ್ಚನ ಎಂಟ್ರಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಇಂದು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಸುದ್ದಿಗೋಷ್ಠಿ ನಡೆಸಲಿದ್ದು ಸುದೀಪ್ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸುದ್ದಿಗೋಷ್ಠಿ ನಡೆಯಲಿದ್ದು ಅಧಿಕೃತವಾಗಿ ಸುದೀಪ್ ಬಿಜೆಪಿ ಸೇರಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಟ ಕಿಚ್ಚ ಸುದೀಪ್‌ ‌ಬಿಜೆಪಿಗೆ ಸೇರುತ್ತಿದ್ದಾರೆ. ಬಿಜೆಪಿ ಪರ ಪ್ರಚಾರದ ಸ್ಟಾರ್ ಕ್ಯಾಂಪೇನ್ ಕೂಡ ಆಗಲಿದ್ದಾರೆ ಕಿಚ್ಚ ಸುದೀಪ್. ಬಿ

ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಸುಳ್ಳು ಸುದ್ದಿ ಹರಡಿಸುತ್ತಿದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಕಿಚ್ಚ ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವವರು ಅಲ್ಲ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಸೋಲುವ ಭಯದಲ್ಲಿ.. ಭ್ರಷ್ಟ BJP ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ.. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. 

Tap to resize

Latest Videos

ಪ್ರಕಾಶ್ ರಾಜ್ ಹೇಳಿಕೆಗೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಕೆಲರು ಕಿಚ್ಚನ ಎಂಟ್ರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ರೆ ಇನ್ನು ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸುದೀಪ್ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ ಹಾಗಾಗಿ ಇದು ಸುಳ್ಳು ಸುದ್ದಿಅಂತನೆ ಹೇಳುತ್ತಿದ್ದಾರೆ. ಆದರೆ ಆಪ್ತ ಮೂಲಗಳು ಹೇಳುವ ಪ್ರಕಾರ ಕುಚ್ಚ ಸುದೀಪ್ ರಾಜಕೀಯ ಎಂಟ್ರಿ ಕನ್ಫರ್ಮ್ ಆಗಿದೆ.

I strongly believe this is a Fake news spread by the desperate ,loosing BJP in Karnataka. is far more sensible Citizen to fall prey ..ಕರ್ನಾಟಕದಲ್ಲಿ ಸೋಲುವ ಭಯದಲ್ಲಿ .. ಭ್ರಷ್ಟ BJP ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ .. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ https://t.co/kIRmFczTIO

— Prakash Raj (@prakashraaj)

ರಾಜಕೀಯ ಅಖಾಡಕ್ಕೆ ಧುಮುಕಿದ ಕಿಚ್ಚ ಸುದೀಪ್: ನಾಳೆ ಬಿಜೆಪಿ ಸೇರ್ಪಡೆ ಸಾಧ್ಯತೆ

ಸುದೀಪ್ ಪಕ್ಷಕ್ಕೆ ಕರೆ ತರಲು ತೆರೆಮರೆಯಲ್ಲಿ ಸಚಿವರಾದಿಯಾಗಿ ಹಲವು ನಾಯಕರ ಚರ್ಚೆ ನಡೆಸಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪಕ್ಷ ಸೇರ್ಪಡೆ ಬಗ್ಗೆ ಸುದೀಪ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಹಾಗಾಗಿ ಕುತೂಹಲ ಹೆಚ್ಚಾಗಿದೆ. 


 

click me!