ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಮದುವೆ ಫಿಕ್ಸ್; ಹುಡುಗಿ ಯಾರು?

By Shruiti G KrishnaFirst Published Jul 13, 2022, 12:02 PM IST
Highlights

ಸ್ಯಾಂಡಲ್ ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆಮಾಡಿದೆ. ಇತ್ತೀಚಿಗಷ್ಟೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಮಗನ ಮದುವೆಗೆ ಸಜ್ಜಾಗಿದ್ದಾರೆ. ಹೌದು, ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಅವರಿಗೆ ಮದುವೆ ಫಿಕ್ಸ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. 

ಸ್ಯಾಂಡಲ್ ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆಮಾಡಿದೆ. ಇತ್ತೀಚಿಗೆ ಅಂದರೆ 2019ರಲ್ಲಿ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಮಗನ ಮದುವೆಗೆ ಸಜ್ಜಾಗಿದ್ದಾರೆ. ಹೌದು, ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಅವರಿಗೆ ಮದುವೆ ಫಿಕ್ಸ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕ್ರೇಜಿ ಸ್ಟಾರ್ ಸೈಲೆಂಟ್ ಆಗಿ ಮಗನ ಮದುವೆಗೆ ಸಿದ್ಧತೆ ಮಾಡಿದ್ದು ಮುಂದಿನ ತಿಂಗಳೇ ಮದುವೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಆಗಸ್ಟ್ 21 ಹಾಗೂ 22ರಂದು ಹಸೆಮಣೆ ಏರುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರವಿಚಂದ್ರನ್ ಪುತ್ರನ ಮದುವೆ ವಿಷಯ ಕೇಳಿ ಅಭಿಮಾನಿಗಳು ಸಹ ಖುಷ್ ಆಗಿದ್ದಾರೆ. 

ಅಂದಹಾಗೆ ಮನೋರಂಜನ್ ಮದುವೆ ಅಂದ್ಮೇಲೆ ಹುಡುಗಿ ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ. ರವಿಚಂದ್ರನ್ ಸೊಸೆ ಯಾರು ಎನ್ನುವ ಹೆಚಚ್ಿನ ಮಾಹಿತಿ ಲಭ್ಯವಾಗಿಲ್ಲ. ಸದ್ಯ ತಿಳಿದುಬಂದಿರುವ ಮಾಹಿತಿ ಪ್ರಕಾರ ಮನೋರಂಜನ್ ಕೈ ಹಿಡಿಯುತ್ತಿರುವ ಹುಡುಗಿ ಬೆಂಗಳೂರಿನವರೇ ಅಂತೆ. ವಿಲ್ಸನ್ ಗಾರ್ಡನ್ ನಿವಾಸಿಯಾಗಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಂದಹಾಗೆ ಇದು ಪಕ್ಕಾ ಅರೇಂಜ್ ಮ್ಯಾರೇಜ್ ಅಂತೆ. ಅಪ್ಪ - ಅಮ್ಮ ಹುಡುಕಿದ ಹುಡುಗಿಯನ್ನೆ ಮನೋರಂಜನ್ ಮದುವೆಯಾಗುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರೇಜಿ ಸ್ಟಾರ್ ಕುಟುಂಬ ಎಲ್ಲಿಯೂ ಮಾಹಿತಿ ರಿವೀಲ್ ಮಾಡಿಲ್ಲ. ಮುಂದಿನ ತಿಂಗಳೆ ಮದುವೆಯಾಗಿದ್ದರಿಂದ ಸದ್ಯದಲ್ಲೇ ಕ್ರೇಜಿ ಕುಟುಂಬ ಮಗನ ಮದುವೆ ಸಂಭ್ರವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುವ ಸಾಧ್ಯತೆ ಇದೆ. 

100 ಕಾರ್ಮಿಕರಿಗೆ 5000 ಸಾವಿರ ರೂ. ಧನ ಸಹಾಯ ಮಾಡಿದ ನಟ ಮನೋರಂಜನ್ ರವಿಚಂದ್ರನ್!

ರವಿಚಂದ್ರನ್ ಅವರಿಗೆ ಮೂವರು ಮಕ್ಕಳು. ಒಬ್ಬಳು ಮಗಳು ಮತ್ತು ಇಬ್ಬರು ಗಂಡು ಮಕ್ಕಳು.  2019 ಮೇ ತಿಂಗಳಲ್ಲಿ ರವಿಚಂದ್ರನ್ ಪುತ್ರಿ ಗೀತಾಂಜಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅದ್ದೂರಿಯಾಗಿ ಮದುವೆ ನೆರವೇರಿತ್ತು. ಚಿತ್ರರಂಗದ, ರಾಜಕೀಯ ಗಣ್ಯರು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಇದೀಗ ಮಗನ ಮದುಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಅಂದಹಾಗೆ ಕ್ರೇಜಿಸ್ಟಾರ್ ಇಬ್ಬರು ಗಂಡು ಮಕ್ಕಳು ಸಹ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ.

ಆ ಒಂದು ಸಮಸ್ಯೆಯಿಂದ 115 ಕೆಜಿಗೆ ಹೆಚ್ಚಾದ ಮನೋರಂಜನ್; ಡಿಪ್ರೆಶನ್‌ಗೆ ಜಾರಿದ್ದು ನಿಜವೇ?

ಸದ್ಯ ಮದುವೆಗೆ ಸಜ್ಜಾಗಿರುವ ಮನೋರಂಜನ್ 2017ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸಹೇಬಾ ಸಿನಿಮಾ ಮೂಲಕ ಮೊದಲ ಬಾರಿಗೆ ತೆರೆಮೇಲೆ ಮಿಂಚಿದರು. ಬಳಿಕ ಬೃಹಸ್ಪತಿ, ಮುಗಿಸಲು ಪೇಟೆ ಸಿನಿಮಾಗಳಲ್ಲಿ ನಟಿಸಿದ್ದಾರೆ. 2022ರಲ್ಲಿ ಪ್ರಾರಂಭ ಸಿನಿಮಾ ಮೂಲಕ ಮನೋರಂಜನ್ ಅಭಿಮಾನಿಗಳ ಮುಂದೆ ಬಂದಿದ್ದರು. ಸಿನಿಮಾದಲ್ಲಿ ದೊಡ್ಡ ಮಟ್ಟದ ಬ್ರೇಕ್ ಪಡೆಯಲು ಪ್ರಯತ್ನಿಸುತ್ತಿದ್ದ ಮನೋರಂಜನ್ ಇದೀಗ ವೈಯಕ್ತಿಕ ಜೀವನದ ಕಡೆ  ಗಮನ ಹರಿಸಿದ್ದಾರೆ. ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ಸದ್ಯ ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚಿಗಷ್ಟೆ ವಿಕ್ರಮ್ ನಟನೆಯ ತ್ರಿವಿಕ್ರಮ ಸಿನಿಮಾ ರಿಲೀಸ್ ಆಗಿದೆ. 

 

click me!