ಆನೆಗುಡ್ಡೆ ನನಗೆ ಅದೃಷ್ಟದ ಬಾಗಿಲು, ಕಾಂತಾರದ ಮುನ್ನುಡಿ ಹೇಳಲು ಹೊರಟಿದ್ದೇನೆ: ರಿಷಬ್‌ ಶೆಟ್ಟಿ

By Govindaraj S  |  First Published Nov 28, 2023, 4:23 AM IST

ಹೊಂಬಾಳೆ ಫಿಲಂ ಸಂಸ್ಥೆಯವರು ನಂಬಿದಂತಹ ಕ್ಷೇತ್ರ ಆನೆಗುಡ್ಡೆ, ನನಗಂತೂ ಆನೆಗುಡ್ಡೆ ಅದೃಷ್ಟದ ಬಾಗಿಲು. ಕಳೆದ ಬಾರಿ ಕಾಂತಾರಕ್ಕೂ ಇಲ್ಲಿಯೇ ಮುಹೂರ್ತ ಮಾಡಿದ್ದೇವೆ. ಅದೇ ರೀತಿ ಈ ಬಾರಿಯೂ ಆನೆಗುಡ್ಡೆಯ ಗಣಪತಿ ಆಶೀರ್ವಾದದೊಂದಿಗೆ ಪ್ರಾರಂಭ ಮಾಡಿದ್ದೇವೆ.


ಕುಂದಾಪುರ (ನ.28): ಹೊಂಬಾಳೆ ಫಿಲಂ ಸಂಸ್ಥೆಯವರು ನಂಬಿದಂತಹ ಕ್ಷೇತ್ರ ಆನೆಗುಡ್ಡೆ, ನನಗಂತೂ ಆನೆಗುಡ್ಡೆ ಅದೃಷ್ಟದ ಬಾಗಿಲು. ಕಳೆದ ಬಾರಿ ಕಾಂತಾರಕ್ಕೂ ಇಲ್ಲಿಯೇ ಮುಹೂರ್ತ ಮಾಡಿದ್ದೇವೆ. ಅದೇ ರೀತಿ ಈ ಬಾರಿಯೂ ಆನೆಗುಡ್ಡೆಯ ಗಣಪತಿ ಆಶೀರ್ವಾದದೊಂದಿಗೆ ಪ್ರಾರಂಭ ಮಾಡಿದ್ದೇವೆ. ಅದ್ಭುತವಾದ ಸಿನಿಮಾ ನೀಡಲು ಇಡೀ ಚಿತ್ರ ತಂಡ ಕೆಲಸ ಮಾಡಲಿದೆ ಎಂದು ನಟ ರಿಷಬ್ ಶೆಟ್ಟಿ ಹೇಳಿದರು. ಕುಂದಾಪುರದ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಸೋಮವಾರ ‘ಕಾಂತಾರ ಅಧ್ಯಾಯ-1’ ಕ್ಕೆ ಮುಹೂರ್ತ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಹೊಂಬಾಳೆ ಸಂಸ್ಥೆ ಹಾಗೂ ವಿಜಯ್ ಕಿರಗಂದೂರು ಅವರ ಕಾರಣದಿಂದಲೇ ಕಾಂತಾರ ಸಿನೆಮಾ ಇಷ್ಟೊಂದು ದೊಡ್ಡಮಟ್ಟಕ್ಕೆ ಹೋಗಿದೆ. ಕಾಂತಾರ ಸಿನಿಮಾವನ್ನು ಕನ್ನಡದ ಜನ ದೊಡ್ಡಮಟ್ಟಿಗೆ ಕೊಂಡೊಯ್ದಿದ್ದರು. ಬಹುತೇಕ ಕಾಂತಾರ ಚಿತ್ರದ ತಾಂತ್ರಿಕ ತಂಡವೇ ಮುಂದುವರಿಯಲಿದೆ. ಕರಾವಳಿ ಭಾಗದಲ್ಲೇ ಹೆಚ್ಚಿನ ಶೂಟಿಂಗ್ ನಡೆಯಲಿದೆ. ಕಾಂತಾರದ ಚಿತ್ರ ತಂಡವೇ ಹೆಚ್ಚಾಗಿ ಅಧ್ಯಾಯ-1ರಲ್ಲೂ ಇರಲಿದೆ. ಕೆಲವೊಂದು ಬದಲಾವಣೆಗಳ ಸಹಿತ ಹೊಸಬರು ಕೂಡ ಸೇರಲಿದ್ದು, ಸಿನೆಮಾ ತಂಡ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಿದೆ ಎಂದರು.

Tap to resize

Latest Videos

undefined

ಸದ್ಯಕ್ಕೆ ಸಿನಿಮಾದ ಬಗ್ಗೆ ಏನೂ ಹೇಳುವುದಿಲ್ಲ. ಫಸ್ಟ್‌ ಲುಕ್‌ ಬಿಡುಗಡೆಗೊಳಿಸಿದ್ದೇವೆ. ಈಗಾಗಲೇ ಬಿಟ್ಟಿರುವ ಪೋಸ್ಟರ್‌, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡುತ್ತದೆ ಎಂದರು. ಹೋಗುತ್ತಾ, ಹೋಗುತ್ತಾ ಸಿನಿಮಾವೇ ಮಾತನಾಡಿದರೆ ಚಂದ. ಡಿಸೆಂಬರ್‌ನಲ್ಲಿ ಚಿತ್ರೀಕರಣವನ್ನು ಆರಂಭ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದರು.

Kantara ಪ್ರೀಕ್ವೆಲ್ ಶೂಟಿಂಗ್ ಬಗ್ಗೆ ರಿಷಬ್‌ಗೆ ಟೆನ್ಷನ್: ಮಂಗಳೂರಿನಲ್ಲಿ ಮಾಡೋಕಾಗ್ತಿಲ್ಲಂತೆ 'ಕಾಂತಾರ 2' ಚಿತ್ರೀಕರಣ!

ಉಗ್ರರೂಪಿಯಾಗಿ ಕಾಣಿಸಿಕೊಂಡ ರಿಷಬ್ ಶೆಟ್ಟಿ: ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಸಿನಿಮಾ ಹೊಂದಿರಲಿದೆ ಎಂಬ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿದೆ. ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್​ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು.
 

click me!