
ರಸ್ತೆ ಅಪಫಾತದಿಂದ ನಿಧನರಾದ ಸಂಚಾರಿ ವಿಜಯ್ ಜೀವನದ ಪಯಣವನ್ನು ಹಾಗೂ ಹೆಜ್ಜೆ ಗುರುತಗಳನ್ನು ಮೆಲುಕು ಹಾಕಬೇಕು ಎಂದು ಅಗಲಿದ ಕಲಾವಿದನನ್ನು ನೆನಪಿಸುವ ಪ್ರಯತ್ನಕ್ಕೆ ಪತ್ರಕರ್ತ ಡಾ ಶರಣು ಹುಲ್ಲೂರು ಸಂಪಾದಕತ್ವದಲ್ಲಿ ಸಿದ್ಧವಾಗಿರುವ 'ಅನಂತವಾಗಿರು' ಪುಸ್ತಕವನ್ನು ಬೆಂಗಳೂರಿನ ಕಾಯಕ ಪ್ರಕಾಶನ ಪ್ರಕಟಿಸುತ್ತಿದೆ.
ವಿಜಯ್ ಅವರ ಬಾಲ್ಯ, ಜೀವನದ ಬಗ್ಗೆ ವಿಜಯ್ ಸಹೋದರರು ಹಾಗೂ ಕುಟುಂಬದವರು ಬರೆದಿದ್ದಾರೆ. ಅವರ ಬಾಲ್ಯದ ಗೆಳೆಯರು, ಶಾಲಾ ಗೆಳೆಯರು, ಜತೆಗಿದ್ದವರು ಆತ್ಮೀಯ ಗೆಳೆಯನೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಲೇಖಕರಾದ ವಸುಧೇಂದ್ರ, ಜೋಗಿ, ಸಂಧ್ಯಾರಾಣಿ, ನಿರ್ದೇಶಕರಾದ ಬಿ.ಎಸ್. ಲಿಂಗದೇವರು, ಮಂಸೋರೆ, ಅರವಿಂದ್ ಕುಪ್ಳಿಕರ್, ಎಂ.ಎಸ್ ರಮೇಶ್, ರಂಗ ನಿರ್ದೇಶಕಿ ಮಂಗಳಾ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ರಾಷ್ಟ್ರ ಪ್ರಶಸ್ತಿ ವಿಜೇತ ಲೇಖಕ ಕೆ. ಪುಟ್ಟಸ್ವಾಮಿ ಹೀಗೆ ಸಿನಿಮಾ ರಂಗದ ಹಾಗೂ ವಿಜಯ್ ಅವರನ್ನು ಬಲ್ಲ 32ಕ್ಕೂ ಹೆಚ್ಚು ಲೇಖಕರು ಬರೆದ ಬರಹಗಳು ಇದರಲ್ಲಿವೆ.
ಸಾಹಿತಿ ಜಿ.ಎನ್. ಮೋಹನ್ ಈ ಪುಸ್ತಕಕ್ಕೆ ಹಿನ್ನುಡಿ ಬರೆದಿದ್ದಾರೆ. ಜು.17 ರಂದು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಸಂಚಾರಿ ಥಿಯೇಟರ್‌ನಲ್ಲಿ ಸಂಜೆ ಪುಸ್ತಕ ಬಿಡುಗಡೆ ಆಗಲಿದೆ. ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ವಿಜಯ್ ಗೆಳೆಯರು ಸೋಷಿಯಲ್ ಮೀಡಿಯಾದಲ್ಲಿ ವಿಜಯ್‌ಗೆ ಶುಭ ಹಾರೈಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.