
ಅಭಿಮಾನಿಗಳ ಪ್ರೀತಿಯ ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಬಾರದಲೋಕಕ್ಕೆ ಪಯಣ ಬೆಳೆಸಿ ಎರಡೂವರೆ ವರ್ಷ ಕಳೆದಿದೆ. ಇಂದಿಗೂ ಪ್ರತಿದಿನ ಪ್ರತಿಕ್ಷಣ ಅಭಿಮಾನಿಗಳು ಪರಮಾತ್ಮನ ನೆನೆಯುತ್ತಲೇ ಇದ್ದಾರೆ. ರಾಜರತ್ನ ಇಂದು ಇದ್ದಿದ್ದರೆ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇರುತ್ತಿದ್ದರು. ಅಪ್ಪು ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದರ ನಡುವೆ ಪ್ರೀತಿಯ ತಮ್ಮ ಅಪ್ಪುಗೆ ವಿಶೇಷವಾಗಿ ಶಿವರಾಜ್‌ಕುಮಾರ್ ಶುಭಹಾರೈಸಿದ್ದಾರೆ. ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ ಎಂದು ಶಿವಣ್ಣ ಸ್ಮರಿಸಿದ್ದಾರೆ.
ಅಪ್ಪು ಆಗಿ ಬಂದು ನೀನು ಪುನೀತ್‌ನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದು ಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ. ಎಷ್ಟೋ ಜನಕ್ಕೆ ನೀನು ಮಾರ್ಗದರ್ಶಿ, ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ನೀನು ಪವರ್ ಸ್ಟಾರ್ ಎಂದು ಶಿವಣ್ಣ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆದರೆ ನನಗೆ ಎಂದೆಂದಿಗೂ ನನ್ನ ಪುಟ್ಟ ತಮ್ಮ. ನನ್ನ ಕೈ ಹಿಡಿದು ನಡೆದ ತಮ್ಮ, ನಿನ್ನ ನಗುವಲ್ಲಿ ನನಗೆ ಸಂತೋಷ ಹುಡುಕಿ ಕೊಟ್ಟ ತಮ್ಮ, ನನ್ನ ಎದೆಯ ಮೇಲೆ ಮಲಗಿದ ತಮ್ಮ, ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಶಿವಣ್ಣ ಪ್ರೀತಿಯಿಂದ ವಿಶ್ ಮಾಡಿದ್ದಾರೆ.
ಪುನೀತ್‌ರನ್ನು ನಟ ಸ್ಮರಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಇಲ್ಲದೇ 3ನೇ ವರ್ಷದ ಹುಟ್ಟುಹಬ್ಬ ಇದಾಗಿದೆ. ಅಪ್ಪು ಸ್ಮಾರಕದ ಬಳಿ ಜನಸಾಗರನೇ ಹರಿದು ಬರುತ್ತಿದೆ. ಪುನೀತ್ ರಾಜ್‌ಕುಮಾರ್ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ನಮನ ಸಲ್ಲಿಸಲಿದ್ದಾರೆ. ಕುಟುಂಬ ಸದಸ್ಯರು ಅಪ್ಪು ಸಮಾಧಿ ಪೂಜೆ ನೆರವೇರಿಸಲಿದ್ದಾರೆ. ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೋವು ಇನ್ನು ಕರಗಿಲ್ಲ. ಅವರ ಹೆಸರಿನಲ್ಲಿ ಅಭಿಮಾನಿಗಳು ಪುಣ್ಯ ಕೆಲಸಗಳನ್ನು ಮುಂದುವರೆಸಿದ್ದಾರೆ. ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಪುನೀತ್ ರಾಜ್‌ಕುಮಾರ್ 49ನೇ ಹುಟ್ಟುಹಬ್ಬ: ಕುಟುಂಬ ಸಮೇತ ಅಪ್ಪು ಸಮಾಧಿ ದರ್ಶನಕ್ಕೆ ಬರುತ್ತಿರುವ ಅಭಿಮಾನಿಗಳು!
ಅಪ್ಪು ಜನ್ಮದಿನದ ಹಿನ್ನೆಲೆ ಅಭಿಮಾನಿಗಳು ರಕ್ತದಾನ, ಅನ್ನದಾನದಂತಹ ಅರ್ಥಪೂರ್ಣ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ರಾತ್ರಿಯಿಂದಲೇ ರಾಜ್ಯದ ಮೂಲೆಮೂಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ರಾತ್ರಿ 12 ಗಂಟೆಗೆ ಅಪ್ಪು ಸಮಾಧಿ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವರಾಜ್ ಕುಮಾರ್ ಭೇಟಿ ನೀಡಿದ್ದರು. ಕಂಠೀರವ ಸ್ಟುಡಿಯೋ ಬಳಿ ಬೆಳಗ್ಗೆ 10 ಗಂಟೆಯಿಂದ ಅಭಿಮಾನಿಗಳಿಗೆ ನಿರಂತರವಾಗಿ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಪುನೀತ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮರು ಬಿಡುಗಡೆಯಾಗಿದ್ದ 'ಜಾಕಿ' ಸಿನಿಮಾ ಸಖತ್ ಸದ್ದು ಮಾಡ್ತಿದೆ. ಶುಕ್ರವಾರ ತೆರೆಕಂಡ ಸಿನಿಮಾ 1 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.