
ಸ್ಯಾಂಡಲ್‌ವುಡ್‌ನಲ್ಲಿ ಸೂಪರ್ ಎನರ್ಜಿ ಇರೋ ನಟ ಎಂದು ಗುರುತಿಸಿಕೊಂಡವರಲ್ಲಿ ನಟ ಶಿವರಾಜ್‌ಕುಮಾರ್ (Shivarajkumar)ಒಬ್ಬರು. ವಯಸ್ಸು 61 ಆದರೂ ಅವರಲ್ಲಿರುವ ಎನರ್ಜಿ ಕಂಡು ಯುವ ನಟರೇ ನಾಚಬೇಕು. ಜೈಲರ್ ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಕೀರ್ತಿ ಇದಾಗಲೇ ದೇಶಾದ್ಯಂತ ಹರಡಿರುವ ನಡುವೆಯೇ ಇದೀಗ ಅಮೆರಿಕದಲ್ಲಿಯೂ ಖ್ಯಾತಿ ಗಳಿಸಿದ್ದಾರೆ.
ಹೌದು. ಅಮೆರಿಕದ ಟೆಕ್ಸಾಸ್‌ನಲ್ಲಿ ‘ನಾವಿಕ ವಿಶ್ವ ಕನ್ನಡ ಸಮಾವೇಶ’ದಲ್ಲಿ (Navika World Kannada Summit) ಶಿವಣ್ಣ ಭರ್ಜರಿ ಡ್ಯಾನ್ಸ್ ಮಾಡಿದ್ದು, ನೋಡುಗರನ್ನು ಮರುಳುಗೊಳಿಸಿದ್ದಾರೆ. ಅಮೆಕಾದ ಟೆಕ್ಸಾಸ್‌ನಲ್ಲಿ 7ನೇ ನಾವಿಕ ವಿಶ್ವ ಕನ್ನಡ ಸಮಾವೇಶ ನಡೆಯುತ್ತಿದೆ. ಸೆಪ್ಟೆಂಬರ್ 1ರಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು, ಇವತ್ತು ಅಂದರೆ 3ನೇ ತಾರೀಖಿನವರೆಗೂ ಇದೆ. ಈ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್‌ಕುಮಾರ್‌ರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆ ಮೇಲೆ ಶಿವಣ್ಣ ಭರ್ಜರಿಯಾಗಿ ಕುಣಿದು ರಂಜಿಸಿದ್ದಾರೆ. ಪಂಚೆ ಧರಿಸಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಶಿವಣ್ಣನ ಎನರ್ಜಿ ಕಂಡು ಎಲ್ಲರೂ ವಾವ್ ಎನ್ನುತ್ತಿದ್ದಾರೆ.
ಶಿವರಾಜ್ ಕುಮಾರ್ ಬಾಲಿವುಡ್ಗೆ ಎಂಟ್ರಿ? ಖ್ಯಾತ ನಿರ್ದೇಶಕ ಸುದೀಪ್ತೋ ಸೇನ್ ಬುಲಾವು!
ಸದ್ಯ ‘ಘೋಸ್ಟ್’, ‘ಕರಟಕ ದಮನಕ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವರಾಜ್‌ಕುಮಾರ್ ಅವರು ಬ್ಯುಸಿ ಆಗಿದ್ದಾರೆ. ಆ ಕೆಲಸಗಳ ನಡುವೆಯೂ ಅವರು ‘ನಾವಿಕ ವಿಶ್ವ ಕನ್ನಡ ಸಮಾವೇಶ’ದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಮತ್ತು ಗೀತಾ ಅವರನ್ನು ಮೆರವಣಿಗೆಯಲ್ಲಿ ಸಮಾರಂಭ ನಡೆವ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು. ಅಲ್ಲಿನ ಕಲಾವಿದರು ಹುಲಿವೇಷ ಧರಿಸಿ ನೃತ್ಯ ಮಾಡುತ್ತಿದ್ದರು. ಆಗ ಶಿವಣ್ಣ ಸಖತ್ ಜೋಷ್‌ನಲ್ಲಿ ಹೆಜ್ಜೆ ಹಾಕಿದ್ದಾರೆ.
ಈ ಮಧ್ಯೆಯೇ ಶಿವರಾಜ್ ಕುಮಾರ್ ಬಾಲಿವುಡ್ಗೂ ಹಾರಲಿದ್ದಾರೆ ಎನ್ನುವ ಸುದ್ದಿಯಿದೆ. ಇದಾಗಲೇ ನಿರ್ದೇಶಕ ಸುದೀಪ್ತೋ ಸೇನ್ (Sudipto Sen) ಅವರು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ದಿ ಕೇರಳ ಸ್ಟೋರಿಯಂಥ ಖ್ಯಾತ ಚಿತ್ರ ನೀಡಿದವರು ಸುದೀಪ್ತೋ ಸೇನ್. ಇವರು ಖುದ್ದು ಶಿವರಾಜ್‌ಕುಮಾರ್ ಅವರ ಮನೆಯಲ್ಲಿಯೇ ಭೇಟಿ ಕೊಟ್ಟು ಕೆಲ ಕಾಲ ಸಿನಿಮಾದ ಕುರಿತು ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಈ ಭೇಟಿಯ ಫೋಟೋ ಕೂಡ ವೈರಲ್ ಆಗಿದೆ. ಈ ಮೂಲಕ ಬಾಲಿವುಡ್ ಸಿನಿಮಾಕ್ಕೆ ಆಫರ್ ನೀಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.
ನನ್ನ ತುಟಿ ಮೇಲ್ಯಾಕೆ ಕಣ್ಣು? ನಿಜ ಹೇಳ್ತೇನೆ ಕೇಳಿ... 'ಯಜಮಾನ' ನಟಿ ತಾನ್ಯಾ ಗರಂ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.