ನಟ ಸುದೀಪ್‌ಗೆ ಮಾತೃವಿಯೋಗ; ಚಿಕಿತ್ಸೆ ಫಲಕಾರಿಯಾಗದೇ ಸಾವು

Published : Oct 20, 2024, 09:13 AM ISTUpdated : Oct 20, 2024, 10:34 AM IST
ನಟ ಸುದೀಪ್‌ಗೆ ಮಾತೃವಿಯೋಗ; ಚಿಕಿತ್ಸೆ ಫಲಕಾರಿಯಾಗದೇ ಸಾವು

ಸಾರಾಂಶ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ನಟ ಸುದೀಪ್ ಅವರ ತಾಯಿ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸುದೀಪ್ ಅವರ ತಾಯಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಬೆಂಗಳೂರು: ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.  ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

ತಾಯಿ ನಿಧನದ ಸುದ್ದಿ ತಿಳಿಯುತ್ತಲೇ ಆಸ್ಪತ್ರೆಗೆ ದೌಡಾಯಿಸಿದ ಸುದೀಪ್, ತಾಯಿಯನ್ನ ನೋಡಿ ಕಣ್ಣೀರಿಟ್ಟಿದ್ದಾರೆ. ಮಧ್ಯಾಹ್ನ 12 ಗಂಟೆ ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಸುದೀಪ್ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸಂಜೆ  5 ರಿಂದ 7 ರ ವರೆಗೆ  ವಿಲ್ಸನ್ ಗಾರ್ಡನ್ ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ ಸುದೀಪ್ ಮನೆ ಬಳಿ ಬ್ಯಾರಿಕೇಡ್ ಹಾಕಲಾಗಿದೆ. ಅಭಿಮಾನಿಗಳು ಹಾಗೂ ಗಣ್ಯರು ಆಗಮಿಸುವ ಹಿನ್ನೆಲೆ ಪೊಲೀಸರನ್ನು ಸಹ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್