ಬರ್ತ್‌ಡೇ ಸಂಭ್ರಮದಲ್ಲಿ ಹೊಸ ಸುದ್ದಿ ಕೊಟ್ಟ ಇತಿ ಆಚಾರ್ಯ; ಈಗ ಬಾಲಿವುಡ್‌ನಲ್ಲೂ ಬ್ಯುಸಿ!

By Shriram Bhat  |  First Published Jul 15, 2024, 4:27 PM IST

ಇತಿ ಆಚಾರ್ಯ ತಮ್ಮ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಅಪ್ ಡೇಟ್ ಹಂಚಿಕೊಂಡಿದ್ದಾರೆ. 'ದಿ ಶೂಸ್ ಐ ವೋರ್' ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ..


ಸ್ಯಾಂಡಲ್‌ವುಡ್ ಚಿತ್ರರಂಗದಲ್ಲಿ ಕವಚ, ಪಂಗನಾಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಇತಿ ಆಚಾರ್ಯ ಹೊಸ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ನಟನೆ ಜೊತೆಗೆ ಮಾಡೆಲಿಂಗ್‌ನಲ್ಲೀ ಇತಿ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. 

ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರಿಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ.

Tap to resize

Latest Videos

ಭಾರತಿ ಬಿಟ್ಟು ಬೇರೆ ಸಹನಟಿ ಒಬ್ರನ್ನು ಮದ್ವೆ ಆಗಿದ್ರಾ ವಿಷ್ಣುವರ್ಧನ್?

ಇತಿ ಆಚಾರ್ಯ ತಮ್ಮ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಅಪ್ ಡೇಟ್ ಹಂಚಿಕೊಂಡಿದ್ದಾರೆ. 'ದಿ ಶೂಸ್ ಐ ವೋರ್' ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ಇನ್ನಮುಲ್ಕ್ ಮತ್ತು ಸ್ಕ್ಯಾಮ್ ಖ್ಯಾತಿಯ ಫೈಸಲ್ ರಶೀದ್ ಗೆ ಜೋಡಿಯಾಗಿ ಈ ಕನ್ನಡತಿ ಅಭಿನಯಿಸಲಿದ್ದಾರೆ. 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ, 'ನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾ' ಎಂದಿದ್ದಾರೆ. ಇತಿ ಆಚಾರ್ಯ, ಕನ್ನಡದಲ್ಲಿ ಕವಚ, ಧ್ವನಿ, ಡೀಲ್‌ ರಾಜಾ, ಪಂಗನಾಮ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದೇ ರೀತಿ ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಇಂದು ಅವರು ತಮ್ಮ ಹುಟ್ಟುಹಬ್ಬವನ್ನು ಸಂಭ್ರಮ-ಸಡಗರಗಳಿಂದ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. 

ಒಮ್ಮೆ ಅವ್ರು ಮತ್ತೊಂದು ಮದ್ವೆ ಆದ್ರೆ ನಿಮ್ ರಿಯಾಕ್ಷನ್ ಏನಿರುತ್ತೆ ಅಂದಾಗ ಚಂದನ್ ಶೆಟ್ಟಿ ಏನಂದ್ರು

click me!