ಇಷ್ಟು ಚಿಕ್ಕವಯಸ್ಸಿನಲ್ಲಿ ಅಪ್ಪು ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಅವನನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಅವನ ನಿಧನದಿಂದ ದೊಡ್ಡ ನಷ್ಟ ಆಗಿದೆ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಜಯಪ್ರದಾ ಭಾವುಕರಾದರು.
ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಅಗಲಿಕೆಗೆ ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಬೇರೆ ರಾಜ್ಯಗಳ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಅಪ್ಪು ನಿಧನದ ಹಿನ್ನೆಲೆಯಲ್ಲಿ ಸದಾಶಿವನಗರ ನಿವಾಸಕ್ಕೆ ಬಹುಭಾಷಾ ನಟಿ ಜಯಪ್ರದಾ (Jayaprada) ಅವರು ಇಂದು ಭೇಟಿ ನೀಡಿದರು. ಶಿವರಾಜ್ಕುಮಾರ್ (Shivrajkumar) ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಪುನೀತ್ ಅವರನ್ನು ನೆನಪು ಮಾಡಿಕೊಂಡು ಕಂಬನಿ ಸುರಿಸಿದರು.
'ಪುನೀತ್ ನಮ್ಮ ಜೊತೆ ಇಲ್ಲ ಎಂಬುದನ್ನು ಸಹಿಸಿಕೊಳ್ಳೋಕೆ ತುಂಬ ಕಷ್ಟ ಆಗುತ್ತಿದೆ. ರಾಜ್ ಕುಟುಂಬ ಅಂದರೆ ನನಗೆ ಬಹಳ ಇಷ್ಟ. ರಾಜ್‍ಕುಮಾರ್ (Rajkumar), ಪಾರ್ವತಮ್ಮ ರಾಜ್‍ಕುಮಾರ್ (Parvatamma Rajkumar) ಅವರ ಈ ಕುಟುಂಬದಲ್ಲಿ ನಾನು ಒಬ್ಬಳಾಗಿದ್ದೇನು. ಇಷ್ಟು ಚಿಕ್ಕವಯಸ್ಸಿನಲ್ಲಿ ಅಪ್ಪು ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಅವನನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಅವನ ನಿಧನದಿಂದ ದೊಡ್ಡ ನಷ್ಟ ಆಗಿದೆ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ' ಎಂದು ಜಯಪ್ರದಾ ಭಾವುಕರಾದರು. ಇನ್ನು ಜಯಪ್ರದಾ, ರಾಜ್ಕುಮಾರ್ ಅವರ ಜೊತೆ 'ಸನಾದಿ ಅಪ್ಪಣ್ಣ', 'ಕವಿರತ್ನ ಕಾಳಿದಾಸ', 'ಹುಲಿಯ ಹಾಲಿನ ಮೇವು' ಮತ್ತು 'ಶಬ್ದವೇದಿ' ಚಿತ್ರಗಳಲ್ಲಿ ನಟಿಸಿದ್ದಾರೆ.
undefined
ಅಪ್ಪು ಜೊತೆ ನನ್ನ ಜರ್ನಿ ತುಂಬಾ ದೊಡ್ಡದು: ಇಮ್ರಾನ್ ಸರ್ದಾರಿಯಾ
ಇನ್ನು ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಸಂಜೆ 6 ಗಂಟೆಗೆ ರಾಜ್ಯದ ಎಲ್ಲಾ ಚಿತ್ರಮಂದಿರಗಳ ಮುಂದೆ ದೀಪ ಬೆಳಗಿಸುವ ಮೂಲಕ ಅಗಲಿದ ಪುನೀತ್‌ಗೆ ಗೌರವ ನಮನ ಅರ್ಪಿಸಲಿದ್ದಾರೆ. ರಾಜ್ಯದ ಎಲ್ಲ ಚಿತ್ರಮಂದಿರಗಳು, ಪ್ರೇಕ್ಷಕರು, ಅಭಿಮಾನಿಗಳಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. ನಟ ಪುನೀತ್ ರಾಜ್‌ಕುಮಾರ್ ಅವರ ಪುಣ್ಯತಿಥಿಯನ್ನು ನ.8ರಂದು ನಡೆಸಲು ಡಾ.ರಾಜ್‌ಕುಮಾರ್ ಕುಟುಂಬದವರು ನಿರ್ಧರಿಸಿದ್ದಾರೆ.
ಪುನೀತ್ ಅಗಲಿದ 11ನೇ ದಿನಕ್ಕೆ ಪುಣ್ಯತಿಥಿ ನಡೆಯಲಿದ್ದು, ಕುಟುಂಬದವರು, ನೆಂಟರು, ಸ್ನೇಹಿತರು ಹಾಗೂ ಆಪ್ತರು ಈ ತಿಥಿ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲ ದಿನದ ಕಾರ್ಯವು ಕೇವಲ ಕುಟುಂಬದವರ ಸಮ್ಮುಖದಲ್ಲೇ ಖಾಸಗಿಯಾಗಿ ನಡೆಯಲಿದೆ ಎಂದು ತಿಳಿದು ಬಂದಿದೆ. ನ.9ರಂದು ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಪುಣ್ಯ ತಿಥಿಯ ಅಂಗವಾಗಿ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಚಿತ್ರರಂಗದ ಎಲ್ಲ ವಿಭಾಗದವರು ಕೂಡ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪುನೀತ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಬಸವರಾಜ ಬೊಮ್ಮಾಯಿ
ಇನ್ನು ಕೋಟ್ಯಂತರ ಅಭಿಮಾನಿಗಳನ್ನು ಪುನೀತ್ ಅವರು ಅಗಲಿದ್ದಾರೆ. ಭಾರತೀಯ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಅಪ್ಪು ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ಅಪ್ಪು ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಕೂಡ ದೊಡ್ಡದಿದೆ. ಪ್ರತಿ ದಿನ 20 ಸಾವಿರಕ್ಕೂ ಅಧಿಕ ಜನರು ಕಂಠೀರವ ಸ್ಟುಡಿಯೋ ಆವರಣಕ್ಕೆ ಬಂದು ಪುನೀತ್ ರಾಜ್ಕುಮಾರ್ ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಕೂಡ ಬಂದು ನಮನ ಸಲ್ಲಿಸುತ್ತಿದ್ದಾರೆ. ಎಲ್ಲರೂ ಶಾಂತಿಯುತವಾಗಿ ಸಮಾಧಿ ದರ್ಶನ ಪಡೆಯಲು ಪೊಲೀಸರು ಸೂಕ್ತ ಭದ್ರತೆ ಕಲ್ಪಿಸಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಸಹ ಭೇಟಿ ನೀಡುತ್ತಿದ್ದಾರೆ. ನಟ ಸೂರ್ಯ, ರಾಮ್ ಚರಣ್, ರಾಜೇಂದ್ರ ಪ್ರಸಾದ್ ಸೇರಿದಂತೆ ಅನೇಕ ಸ್ಟಾರ್ ನಟರು ಬೆಂಗಳೂರಿಗೆ ಆಗಮಿಸಿ ಪುನೀತ್ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ತೆರಳಿದ್ದಾರೆ.