ನಟಿ ಮೇಘನಾ ರಾಜ್‍ಗೆ ಪ್ರತಿಷ್ಠಿತ FOG HERO ಅವಾರ್ಡ್

Published : Aug 01, 2022, 10:21 AM IST
 ನಟಿ ಮೇಘನಾ ರಾಜ್‍ಗೆ ಪ್ರತಿಷ್ಠಿತ FOG HERO ಅವಾರ್ಡ್

ಸಾರಾಂಶ

ಸ್ಯಾಂಡಲ್ ವುಡ್‌ನ ಖ್ಯಾತ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ FOG HERO ಅವಾರ್ಡ್ ಲಭಿಸಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ 'ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ' ಅವರು ಆಯೋಜಿಸುವ 'ಫೆಸ್ಟಿವಲ್ ಆಫ್ ಗ್ಲೋಬ್(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. 

ಸ್ಯಾಂಡಲ್ ವುಡ್‌ನ ಖ್ಯಾತ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ FOG HERO ಅವಾರ್ಡ್ ಲಭಿಸಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ 'ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ' ಅವರು ಆಯೋಜಿಸುವ 'ಫೆಸ್ಟಿವಲ್ ಆಫ್ ಗ್ಲೋಬ್(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನ‌ರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತದೆ. 

ಕಳೆದ ಎರಡು ವರ್ಷ ಈ ಸಮಾರಂಭಕ್ಕೆ ಬ್ರೇಕ್ ಬಿದ್ದಿತ್ತು. ಕೊರೊನಾ ಕಾರಣದಿಂದ ಈ ಸಮಾರಂಭ ನಡೆದಿರಲಿಲ್ಲ. ಆದರೀಗ ಎರಡು ವರ್ಷಗಳ ನಂತರ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಪ್ರತಿವರ್ಷ ಸಾಧನೆ ಮಾಡಿದ ಭಾರತೀಯರೊಬ್ಬರಿಗೆ ಅವಾರ್ಡ್ ನೀಡಿ ಗೌರವಿಸಲಾಗುತ್ತದೆ.   

ಗಣ್ಯರೊಬ್ಬರಿಗೆ FOG HERO ಅವಾರ್ಡ್ ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ F0G HERO ಅವಾರ್ಡ್ ಗೆ ಭಾಜನರಾಗಿದ್ದಾರೆ.  ಈ ಬಗ್ಗೆ ಈ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನದ ಕುರಿತು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು. 

ಐರನ್‌ ಲೇಡಿ, ಚಿರು ಮುದ್ದಿನ ಡಾರ್ಲಿಂಗ್‌ ಅಜ್ಜಿ ಲಕ್ಷ್ಮೀದೇವಿ ಬಗ್ಗೆ ಮೇಘನಾ ರಾಜ್ ಭಾವುಕ ಪೋಸ್ಟ್!

ಈ ಬಗ್ಗೆ ನಟಿ ಮೇಘನಾ ರಾಜ್ ಪ್ರತಿಕ್ರಿಯೆ ನೀಡಿದ್ದು,  ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ' ಎಂದರು ನಟಿ ಮೇಘನರಾಜ್.

ರಿಯಾಲಿಟಿ ಶೋ ಮುಗಿಸಿ ಸಿನಿಮಾ ಕಡೆ ಹೊರಟ ಮೇಘನಾ ರಾಜ್ ಹೇಳಿದ್ದೇನು?

ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಮಗುವಿಗೆ ಜನ್ಮ ನೀಡಿದ ಬಳಿಕ ಮೇಘನಾ ಸಿನಿಮಾರಂಗದಿಂದ ಕೊಂಚ ಅಂತರ ಕಾಯ್ದುಕೊಂಡಿದ್ದರು. ಇದೀಗ ಮತ್ತೆ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು ಬಣ್ಣದ ಲೋಕದಲ್ಲಿ ಸಕ್ರೀಯರಾಗಿದ್ದಾರೆ. ಮುದ್ದಾದ ಮಗುವಿನ ಆರೈಕೆ ಜೊತೆಗೆ ಮೇಘನಾ ಸಿನಿಮಾ ಕೆಲಸಗಳಲ್ಲಿಯೂ ಬ್ಯುಸಿಯಾಗಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Actress Amulya: ಮುದ್ದು ಮಕ್ಕಳು, ಗಂಡನ ಜೊತೆ ಪೋಸ್ ಕೊಟ್ಟ ಗೋಲ್ಡನ್ ಗರ್ಲ್
Mark Movie: ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?