ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಪೋಷಕರು ಹಾಜರಿದ್ದು ಖುಷಿಗೊಂಡಿದ್ದರು. ಈ ಬಾರಿಯೂ ಪೋಷಕರೊಂದಿಗೆ ಹಂಪಿ ಉತ್ಸವದಲ್ಲಿ ಭಾಗಿಯಾಗೋ ಇಂಗಿತ ನಿಮಿಕಾರದ್ದು.
ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ.
ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ 'ಶೇಕ್ ಇಟ್ ಪುಷ್ಪವತಿ' ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ ಎಂಬ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಪ್ರಸಿದ್ಧಿ ಪಡೆದುಕೊಂಡಿರುವವರು ನಿಮಿಕಾ ರತ್ನಾಕರ್. ವಿಶೇಷವೆಂದರೆ, ಈ ಹಾಡೇ ಅವರನ್ನು ಹಂಪಿ ಉತ್ಸವದಲ್ಲಿ ಭಾಗಿಯಾಗಿ ನೃತ್ಯ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿರುವ ನಿಮಿಕಾ, ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.
undefined
ಇದು ಚೀಲದ ವಿಚಾರ ಅಲ್ಲ, ಶೀಲದ ವಿಚಾರ; ಶೃತಿ ಹರಿಹರನ್ ವಿರುದ್ದ ಗುಡುಗಿದ 'ಮಠ' ಗುರುಪ್ರಸಾದ್
ಹಂಪಿ ಎಂದರೇನೇ ಅದೇನೋ ಆಕರ್ಷಣೆ. ನಿಮಿಕಾ ರತ್ನಾಕರ್ ಪಾಲಿಗೂ ಅಂಥಾದ್ದೊಂದು ಸೆಳೆತವಿದೆಯಂತೆ. ಆದರೆ ಈ ವರೆಗೂ ಅಲ್ಲಿಗೆ ಭೇಟಿ ಕೊಡುವ ಅವಕಾಶ ಕೂಡಿ ಬಂದಿರಲಿಲ್ಲ. ಕೆಲ ಹಾಡುಗಳ ಮೂಲಕವಷ್ಟೇ ಹಂಪಿಯನ್ನು ಕಣ್ತುಂಬಿಕೊಂಡಿದ್ದ ತಮ್ಮ ಪಾಲಿಗೆ ಆ ಪರಿಸರದಲ್ಲಿ ಬೆರೆಯುವ ಅವಕಾಶ ಸಿಕ್ಕಿದ್ಚದು ಖುಷಿ ಕೊಟ್ಟಿದೆ ಎಂಬುದು ನಿಮಿಕಾ ಮನದ ಮಾತು.
ಹೊಟೆಲ್ ಭಟ್ಟ ಸುಬ್ಬಣ್ಣನಾದ್ರು ರಂಗಾಯಣ ರಘು; ಮಲೆನಾಡಿನ ಹಳ್ಳಿಯಲ್ಲಿ ಸಾಗುವ 'ಶಾಖಾಹಾರಿ' ಕಥೆ !
ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಪೋಷಕರು ಹಾಜರಿದ್ದು ಖುಷಿಗೊಂಡಿದ್ದರು. ಈ ಬಾರಿಯೂ ಪೋಷಕರೊಂದಿಗೆ ಹಂಪಿ ಉತ್ಸವದಲ್ಲಿ ಭಾಗಿಯಾಗೋ ಇಂಗಿತ ನಿಮಿಕಾರದ್ದು. ಅಷ್ಟಕ್ಕೂ ಶೇಕ್ ಇಟ್ ಪುಷ್ಪವತಿ ಎಂಬ ಹಾಡು ನಿಮಿಕಾಗೆ ಒಂದಿಡೀ ಕರ್ನಾಟಕಕ್ಕೆ ಪ್ರದಕ್ಷಿಣೆ ಹಾಕುವ ಅವಕಾಶ ಕಲ್ಪಿಸುತ್ತಿದೆ.
ರಾಕೇಶ್ ಬಿರಾದಾರ್ 'ಧೀರ ಸಾಮ್ರಾಟ್'ಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸಾಥ್!
ಈಗಾಗಲೇ ಅವರು ರಾಜ್ಯದ ನಾನಾ ಪ್ರದೇಶಗಳಲ್ಲಿ ಈ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದೀಗ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ. ಯಾಕೆಂದರೆ, ಉತ್ತರ ಕರ್ನಾಟಕ ಮಂದಿಯ ಪ್ರೀತಿ, ಅಭಿಮಾನ ಪಡೆದುಕೊಂಡಿರುವ ಅವರಿಗೆ, ಅಭಿಮಾನಿಗಳ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಸುಯೋಗ ಕೂಡಿ ಬಂದಿದೆ.