
ಬಹುಭಾಷಾ ನಟಿ ಪವಿತ್ರಾ ಲೋಕೇಶ್ (Pavithra Lokesh) ಅವರ ವೈಯಕ್ತಿಕ ಜೀವನದ ಬಗ್ಗೆ ಅನೇಕ ಸುದ್ದಿಗಳು ಹರಿದಾಡುತ್ತಿವೆ. ಅವರ ದಾಂಪತ್ಯ ಜೀವನದ ಕುರಿತು ಅನೇಕ ಚರ್ಚೆ ನಡೆಯುತ್ತಿದೆ. ಹೌದು ಪವಿತ್ರಾ ಲೋಕೇಶ್ ಮತ್ತೊಂದು ಮದುವೆ ಆಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಠಾಣೆ (Police Station) ಮೆಟ್ಟಿಲೇರಿದ್ದಾರೆ. ಪವಿತ್ರಾ ಲೋಕೇಶ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೈಬರ್ ಪೊಲೀಸರ ಮೊರೆಹೋಗಿದ್ದಾರೆ.
ತನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಸಿಡಿದೆದ್ದಿರುವ ಪವಿತ್ರಾ ಲೋಕೇಶ್ ಈಗ ಕಾನೂನ ಸಮರಕ್ಕೆ ಮುಂದಾಗಿದ್ದಾರೆ. ಸೈಬರ್ ಠಾಣೆಯ ಮೆಟ್ಟಿಲೇರಿರುವ ಪವಿತ್ರಾ ಲೋಕೇಶ್ ಸುಳ್ಳು ಸುದ್ದಿ ಹರಡಿಸುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಮೈಸರೂ ಸೈಬರ್ ಠಾಣೆ (Cyber Police station in Mysore) ಮೆಟ್ಟಿಲೇರಿರುವ ಪವಿತ್ರಾ ಲೋಕೇಶ್, ಸೋಶಿಯಲ್ ಮೀಡಿಯಾದಲ್ಲಿ ತನ್ನ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯಲಾಗಿದೆ. ಅದರ ಮೂಲಕ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಲಾಗಿದೆ. ಜೊತೆಗೆ, ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಎಫ್ಐಆರ್ ದಾಖಲಾಗಿದೆ.
ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್ ಟಾಲಿವುಡ್ ನಟ ನರೇಶ್ ಬಾಬು ಜೊತೆ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ಅನೇಕ ದಿನಗಳಿಂದ ಸದ್ದು ಮಾಡುತ್ತಿದೆ. ಆದರೆ ಈ ಬಗ್ಗೆ ಪವಿತ್ರಾ ಲೋಕೇಶ್ ಯಾವುದೇ ಸ್ಪಷ್ಟನೆ ನೀಡಿಲ್ಲ. ನರೇಶ್ ಬಾಬು ಕಡೆಯಿಂದನು ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ನಡುವೆ ಇಬ್ಬರ ಬಗ್ಗೆ ಅನೇಕ ವಿಚಾರಗಳು ವೈರಲ್ ಆಗಿವೆ. ಪವಿತ್ರಾ ಲೋಕೇಶ್ ಮತ್ತು ನರೇಶ್ ಇಬ್ಬರು ಒಟ್ಟಿಗೆ ಜೀವನ ಮಾಡುತ್ತಿದ್ದಾರೆ, ಮದುವೆ ಕೂಡ ಆಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಪವಿತ್ರಾ ಲೋಕೇಶ್ ಪ್ರತಿಕ್ರಿಯೆ ಸಿಗುವ ಮೊದಲೇ ಅನೇಕ ಗಾಸಿಪ್‌ಗಳು ಹರಿದಾಡುತ್ತಿವೆ. ಈ ಬಗ್ಗೆ ಬೇಸರಕೊಂಡಿರುವ ಪವಿತ್ರಾ ಲೋಕೇಶ್ ಮೈಸೂರು ಸೈಬರ್ ಕ್ರೈಂ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಹೇಶ್ ಬಾಬು ಅಣ್ಣನ ಜೊತೆ ಪವಿತ್ರಾ ಲೋಕೇಶ್ 3ನೇ ಮದುವೆ?; ಆದಿ ಲೋಕೇಶ್ ರಿಯಾಕ್ಷನ್!
ಖ್ಯಾತ ನಟ ಮೈಸೂರು ಲೋಕೇಶ್ ಅವರ ಪುತ್ರಿ ಪವಿತ್ರಾ ಲೋಕೇಶ್. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮತ್ತು ತೆಲುಗು ಸೇರಿದಂತೆ ಅನೇಕ ಭಾಷೆಯಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಪೋಷಕ ಪಾತ್ರಗಳ ಮೂಲಕ ಪವಿತ್ರಾ ಲೋಕೇಶ್ ಖ್ಯಾತಿ ಗಲಿಸಿದ್ದಾರೆ. ಇಂದಿಗೂ ಅವರು ಬಹುಬೇಡಿಕೆಯ ಪೋಷಕ ನಟಿಯಾಗಿ ಚಾರ್ಮ್ ಉಳಿಸಿಕೊಂಡಿದ್ದಾರೆ.
3ನೇ ಮದುವೆ ವದಂತಿ; ಇಲ್ಲಿವೆ ಪವಿತ್ರಾ ಲೋಕೇಶ್ ಸುಂದರ ಫೋಟೋಗಳು
ನಟಿ ಪವಿತ್ರಾ ಲೋಕೇಶ್ 2007ರಲ್ಲಿ ನಟ ಸುಚೇಂದ್ರ ಪ್ರಸಾದ್ ಅವರನ್ನು ಮದುವೆಯಾಗಿದ್ದರು. ಪವಿತ್ರಾ ಲೋಕೇಶ್ ಹಾಗೂ ಸುಚೇಂದ್ರ ಪ್ರಸಾದ್ ಇಬ್ಬರಿಗೂ ಅದು ಎರಡನೇ ಮದುವೆಯಾಗಿತ್ತು. ಆದರೂ ಇಬ್ಬರ ವೈವಾಹಿಕ ಜೀವನದಲ್ಲಿ ಸಾಮರಸ್ಯವಿಲ್ಲದ ಕಾರಣ ಇಬ್ಬರು ಕಳೆದ ನಾಲ್ಕೈದು ವರ್ಷಗಳಿಂದ ಬೇರೆ ಬೇರೆ ವಾಸಿಸುತ್ತಿದ್ದಾರೆ ಎನ್ನುವ ಗುಸು ಗುಸು ಸ್ಯಾಂಡಲ್ ವುಡ್‌ನಲ್ಲಿ ಕೇಳಿಬರುತ್ತಿದೆ. ಆದರೆ ಇದ್ಯಾವುದರ ಬಗ್ಗೆಯೂ ಪವಿತ್ರಾ ಲೋಕೇಶ್ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಪವಿತ್ರಾ ಲೋಕೇಶ್ ಪತಿ ಸುಚೇಂದ್ರ ಪ್ರಸಾದ್ ಹಾಗೂ ಸಹೋದರ ಆದಿ ಲೋಕೇಶ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.