
ಸ್ಯಾಂಡಲ್‌ವುಡ್‌ನಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ (Ramya) ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದರು. ಮಾತ್ರವಲ್ಲದೇ ಮತ್ತೆ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ ಎಂಬ ಗಾಳಿ ಸುದ್ದಿ ಗಾಂಧಿನಗರದ ಗಲ್ಲಿಯಲ್ಲಿ ಭಾರೀ ಚರ್ಚೆ ಮೂಡಿಸಿತ್ತು. ಇದೀಗ ಈ ವಿಚಾರವಾಗಿ ಸ್ವತಃ ರಮ್ಯಾ ಅವರೇ ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಚಿತ್ರರಂಗದಿಂದ ದೂರವಾಗಿ, ಬಳಿಕ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಆ ನಂತರ ರಾಜಕೀಯದಿಂದಲೂ ದೂರವಾಗಿರುವ ರಮ್ಯಾ ಇದೀಗ ಮತ್ತೆ ಬೆಳ್ಳಿತೆರೆಗೆ ಬರಲು ತಯಾರಿ ನಡೆಸುತ್ತಿದ್ದಾರೆ.
ಹೌದು! ಸದ್ಯ ಸಾಮಾಜಿಕ ಜಾಲತಾಣದಲ್ಲಿ ತುಂಬಾನೇ ಸಕ್ರಿಯ ಆಗಿರುವ ಮೋಹಕ ತಾರೆ ರಮ್ಯಾ ಮತ್ತೆ ಬಿಗ್‍ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲಿದ್ದು, ಪದೇ, ಪದೇ ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ ಮತ್ತು ಮಾಧ್ಯಮಗಳ ಮುಂದೆಯೂ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಸದ್ಯ ಈ ವಿಚಾರವಾಗಿ ರಮ್ಯಾ ತಮ್ಮ ಇನ್‍ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 'ನಾನು ಮತ್ತೆ ಸಿನಿಮಾ ರಂಗಕ್ಕೆ ಕಮ್‍ಬ್ಯಾಕ್ ಮಾಡುತ್ತಿದ್ದೇನೆ ಎಂಬ ಊಹಾಪೋಹಗಳು ಹರಿದಾಡುತ್ತಿರುವುದನ್ನು ಕೇಳಿದ್ದೇನೆ. ಆದರೆ, ಈ ಬಗ್ಗೆ ಎಲ್ಲೂ ಕೂಡ ವರದಿಯಾಗಿಲ್ಲ. ನಾನು ಕಳೆದ ಕೆಲವು ತಿಂಗಳುಗಳಲ್ಲಿ ಸಿನಿಮಾದ ಕೆಲ ಇಂಟ್ರಸ್ಟ್ರಿಂಗ್ ಕಥೆಗಳನ್ನು ಕೇಳಿದ್ದೇನೆ. ಎಲ್ಲವೂ ಓಕೆ. ಆದರೆ, ನನ್ನಿಂದ ಶೀಘ್ರದಲ್ಲಿಯೇ ಗುಡ್ ನ್ಯೂಸ್ ಸಿಗಲಿದೆ. ಅಲ್ಲಿಯವರೆಗೂ ನಿಮ್ಮ ಕುತೂಹಲ ಹೀಗೆ ಉಳಿಸಿಕೊಳ್ಳಿ ಎಂದು ರಮ್ಯಾ ಬರೆದುಕೊಂಡಿದ್ದಾರೆ.
Golden Gang: ಗಣಿ ಜೊತೆ ಮಾತನಾಡೋಕೆ ಮೋಹಕ ತಾರೆ ರಮ್ಯಾ ಬರ್ತಿದ್ದಾರೆ?
ಪುನೀತ್ ಜೊತೆ ನಟಿಸಬೇಕಿತ್ತು: ಸ್ಯಾಂಡಲ್‌ವುಡ್‌ನ ಬೆಸ್ಟ್ ಜೋಡಿಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumaar) ಹಾಗೂ ನಟಿ ರಮ್ಯಾ ಅವರ ಜೋಡಿಯೂ ಒಂದು. ತಮ್ಮ ಮೊದಲ 'ಅಭಿ' (Abhi) ಚಿತ್ರದಲ್ಲಿ ರಮ್ಯಾ ಪುನೀತ್ ಜೊತೆ ನಟಿಸಿದ್ದರು. ಅದು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ಬಳಿಕ ಹಿಟ್ ಎನಿಸಿಕೊಂಡ ಈ ಜೋಡಿ, 'ಆಕಾಶ್', 'ಅರಸು' ಸಿನಿಮಾಗಳಲ್ಲಿ ಮೋಡಿ ಮಾಡಿತ್ತು. ಅದಾದ ಮೇಲೆ ರಮ್ಯಾ ಹಾಗೂ ಪುನೀತ್ ತೆರೆ ಮೇಲೆ ಒಂದಾಗಲಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪುನೀತ್ ರಾಜ್‌ಕುಮಾರ್ ಜೊತೆ ರಮ್ಯಾ ಹೊಸ ಸಿನಿಮಾದಲ್ಲಿ ನಟಿಸಬೇಕಿತ್ತು. ಈ ಬಗ್ಗೆ ಪುನೀತ್ ನಿಧನರಾಗಿದ್ದ ಸಂದರ್ಭದಲ್ಲಿ 'ಮತ್ತೆ ನಾವಿಬ್ಬರು ನಟಿಸಬೇಕಿತ್ತು. ಈ ವಿಚಾರದ ಬಗ್ಗೆ ಹಿಂದೆಯೇ ಚರ್ಚೆಯಾಗಿತ್ತು. ಇಬ್ಬರೂ ಒಪ್ಪಿಗೆ ನೀಡಿಯೂ ಆಗಿತ್ತು. ಅಷ್ಟರಲ್ಲೇ ಅಪ್ಪು ಅವರ ಅಕಾಲಿಕ ಮರಣ ನನಗೆ ಆಘಾತ ತಂದಿದೆ ರಮ್ಯಾ ಭಾವುಕರಾಗಿ ಹೇಳಿದ್ದರು.
ರಮ್ಯಾ ಇತ್ತೀಚೆಗೆ ಆಡಿ ಕಾರ್‌ಗೆ ಬಲಿಯಾದ ನಾಯಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ, ಆರೋಪಿಯ ಮೃಗೀಯ ವರ್ತನೆಯನ್ನು ಖಂಡಿಸಿದ್ದರು. ಜೊತೆಗೆ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಟ್ವೀಟ್ (Tweet) ಕೂಡಾ ಮಾಡಿದ್ದರು. ಆಕ್ಸಿಡೆಂಟ್ ಆಗತ್ತೆ, ಮನುಷ್ಯ ತಪ್ಪು ಮಾಡ್ತಾನೆ ಸಹಜ. ಆದ್ರೆ ಈ ವಿಚಾರದಲ್ಲಿ ನೋಡಿದಾಗ ಬೇಕಂತಲೇ ನಾಯಿ ಮೇಲೆ ಗಾಡಿ ಹತ್ತಿಸಿದ್ದಾರೆ ಇದನ್ನ ನೋಡಿ ಸಹಿಸಿಕೊಳ್ಳಲು ಆಗಲಿಲ್ಲ ಎಂದು ಆಕ್ರೋಶ ವ್ಯಕಪಡಿಸಿದರು. ನಮ್ಮ ದೇಶದಲ್ಲಿ ಅನಿಮಲ್ ಲಾ ಸ್ಟ್ರಿಕ್ಟ್ ಇಲ್ಲ. 50 ರೂಪಾಯಿ ಕೊಟ್ಟು ಹೊರಗಡೆ ಬರ್ತಾರೆ. ದಯೆ ಅನ್ನೋದು ಕೇವಲ ಮನುಷ್ಯನಿಗೆ ಅಲ್ಲ. ಪ್ರಕೃತಿಯಲ್ಲಿರುವ ಪ್ರಾಣಿಗಳಿಗೂ ಕೂಡ ಇರಬೇಕು ಎಂದರು.
Bengaluru Airport:ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಅಲ್ಲಿನ ವ್ಯವಸ್ಥೆ ಬಗ್ಗೆ ಬರೆದ ರಮ್ಯಾ!
ಮೊದಲನೆಯದಾಗು ಕಾನೂನು ಕಠಿಣವಾಗಿಬೇಕಿದೆ. ದೊಡ್ಡವರು ದುಡ್ಡಿರೋರು ಕಾನೂನಿನಲ್ಲಿ ಎಸ್ಕೇಪ್ ಆಗ್ತಾರೆ ಕಾನೂನು ಕಠಿಣಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಇನ್ನು ನಟಿ ಅಮೂಲ್ಯ (Amulya) ಅವರ ಬೇಬಿ ಶವರ್ (Baby Shower) ಕಾರ್ಯಕ್ರಮದಲ್ಲಿಯೂ ರಮ್ಯಾ ಭಾಗವಹಿಸಿ ಅಮೂಲ್ಯ ಜೊತೆ ಸೆಲ್ಫಿಗೆ ಪೋಸ್ ನೀಡುವ ಮೂಲಕ ಗಮನ ಸೆಳೆದಿದ್ದರು. ಮಾತ್ರವಲ್ಲದೇ ಅಮೂಲ್ಯಗೆ ಸೀರೆ ಉಡುಗೊರೆಯಾಗಿ ನೀಡಿದ್ದರು. ವಿಶೇಷವಾಗಿ ಡಾಲಿ ಧನಂಜಯ್ ನಟಿಸಿದ್ದ 'ರತ್ನನ್ ಪ್ರಪಂಚ', ನಿಖಿಲ್ ಕುಮಾರಸ್ವಾಮಿ ನಟನೆಯ 'ರೈಡರ್', '100 ಕ್ರೋರ್ಸ್' ಸಿನಿಮಾಕ್ಕೂ ರಮ್ಯಾ ಬೆಂಬಲವನ್ನು ಸೂಚಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.