ಯಶ್ ನಟನೆಯ ‘ಕೆಜಿಎಫ್ 2’ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರದ ಡಬ್ಬಿಂಗ್ ಮುಗಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಡಬ್ಬಿಂಗ್ ಮಾಡುತ್ತಿರುವ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ.
ಸ್ಯಾಂಡಲ್‌ವುಡ್‌ನ (Sandalwood) ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ 'ಕೆಜಿಎಫ್ 2' (KGF 2) ಚಿತ್ರಕ್ಕಾಗಿ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾದು ಕುಳಿತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ (Prashanth Neel) ಆಕ್ಷನ್ ಕಟ್ ಹೇಳಿದ್ದಾರೆ. ಮುಖ್ಯವಾಗಿ 'ಕೆಜಿಎಫ್' (KGF) ಮೊದಲ ಭಾಗ ಮಾಡಿದ ಅಬ್ಬರ ನಮ್ಮೆಲ್ಲರಿಗೂ ಗೊತ್ತಿದೆ. ಇದೀಗ ಭಾಗ 2ರ ಮೂಲಕ ಅದೇ ಅಬ್ಬರ ಮುಂದುವರಿಸೋಕೆ ರಾಕಿ ಭಾಯ್ ಸಜ್ಜಾಗಿದ್ದಾರೆ. ಇದೀಗ 'ಕೆಜಿಎಫ್ 2' ಕುರಿತು ಬಿಗ್ ಅಪ್ಡೇಟ್ ಸಿಕ್ಕಿದೆ. ಹೌದು! ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ (SriNidhi Shetty) ತಮ್ಮ ಪಾತ್ರದ ಡಬ್ಬಿಂಗ್ (Dubbing) ಮುಗಿಸಿದ್ದಾರೆ.
ಶ್ರೀನಿಧಿ ಶೆಟ್ಟಿ ಮೊದಲ ಪಾರ್ಟ್‌ನಲ್ಲಿ ತಮ್ಮ ನಟನೆಯ ಮೂಲಕ ಮಿಂಚಿದ್ದರು. ಇದೀಗ 'ಕೆಜಿಎಫ್ 2' ನಲ್ಲೂ ಕಮಾಲ್ ಮಾಡೋಕೆ ರೆಡಿಯಾಗಿದ್ದು, 'ಕೆಜಿಎಫ್' ಸೀಕ್ವೆಲ್‌ನ ತಮ್ಮ ಡಬ್ಬಿಂಗ್ ಕೆಲಸ ಕಂಪ್ಲೀಟ್ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಡಬ್ಬಿಂಗ್ ಮಾಡುತ್ತಿರುವ ಫೋಟೋ ಅಪ್‌ಲೋಡ್ ಮಾಡಿರುವ ಅವರು, ‘ಈ ಚಿತ್ರಕ್ಕೆ ಹೃದಯಪೂರ್ವಕವಾಗಿ ಕೆಲಸ ಮಾಡಿದ್ದೇನೆ’ ಎಂದು ಬರೆದುಕೊಂಡು ಡಬ್ಬಿಂಗ್ ಮಾಡುತ್ತಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್ ಇತ್ತೀಚೆಗಷ್ಟೇ 36ನೇ ಹುಟ್ಟುಹಬ್ಬವನ್ನು ಸರಳವಾಗಿ ತಮ್ಮ ಕುಟುಂಬದ ಜೊತೆ ಆಚರಿಸಿಕೊಂಡಿದ್ದರು.
KGF Yash: ಪರಿಸ್ಥಿತಿ ಊಹಿಸಿಯೇ ಕೆಜಿಎಫ್ 2 ಬಿಡುಗಡೆ ದಿನಾಂಕ ನಿಗದಿ
ಯಶ್ ಅವರ ಹುಟ್ಟುಹಬ್ಬಕ್ಕೆ 'ಕೆಜಿಎಫ್ 2' ಚಿತ್ರದ ಹೊಸ ಪೋಸ್ಟರ್ವೊಂದು ರಿಲೀಸ್ ಆಗಿತ್ತು. 'ಡೇಂಜರ್ ಆಹೆಡ್' ಎಂಬ ಬರಹ ಬರೆದು ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಯಶ್ 'ಕೆಜಿಎಫ್ 2' ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಇಡೀ ಚಿತ್ರತಂಡ ಇತ್ತೀಚೆಗೆ ಕೊಲ್ಲೂರಿನ ಮೂಕಾಂಬಿಕಾ ದೇವಿಯ ಆಶೀರ್ವಾದ ಪಡೆದು ಬಂದಿದೆ. ಪ್ರಧಾನ ಮಂತ್ರಿ ರಮಿಕಾ ಸೇನ್ ಆಗಿ ರವೀನಾ ಟಂಡನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರಿಂದ ಸ್ಫೂರ್ತಿ ಪಡೆದಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇದು ಇಂದಿರಾ ಗಾಂಧಿಯಿಂದ ಸ್ಫೂರ್ತಿ ಪಡೆದ ಪಾತ್ರವಲ್ಲ ಎನ್ನುವ ಸ್ಪಷ್ಟನೆ ರವೀನಾ ಕಡೆಯಿಂದ ಬಂದಿದೆ.
ಕೆಲ ತಿಂಗಳ ಹಿಂದಷ್ಟೇ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್ ನಟ ಸಂಜಯ್ದತ್ ಅವರ ಡಬ್ಬಿಂಗ್ ಮುಕ್ತಾಯಗೊಳ್ಳುವ ಮೂಲಕ ಎಲ್ಲಾ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ (Social Media) ಹಂಚಿಕೊಂಡಿದ್ದರು. ಅಧೀರಾ ಈಸ್ ಬ್ಯಾಕ್ 'ಕೆಜಿಎಫ್ 2' ಚಿತ್ರದ ಅಧೀರನ ಪಾತ್ರಕ್ಕೆ ಡಬ್ಬಿಂಗ್ ಮುಗಿದಿದೆ. ದೊಡ್ಡ ಪರದೆ ಮೇಲೆ ಏಪ್ರಿಲ್ 14ಕ್ಕೆ ಸಿಗೋಣ ಎಂದು ಪ್ರಶಾಂತ್ ನೀಲ್ ಟ್ವೀಟ್ (Tweet) ಮಾಡಿದ್ದರು. ಯಶ್ ಕೂಡ ಹಿಂದಿಯಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕೆಜಿಎಫ್ 2ನಲ್ಲಿ Sanjay dutt ಜೊತೆ ಸೀನ್ ಇಲ್ಲ: Raveena tandon
ಇನ್ನು ರವಿ ಬಸ್ರೂರ್ (Ravi Basrur) ಸಂಗಿತ ಸಂಯೋಜನೆ ಚಿತ್ರಕ್ಕಿದ್ದು, ಪ್ರಕಾಶ್ ರಾಜ್ (Prakash Raj), ಬಾಲಿವುಡ್ ನಟ ಸಂಜಯ್ ದತ್ (Sanjay Dutt), ತೆಲುಗು ನಟ ರಾವ್ ರಮೇಶ್ (Rao Ramesh) ಸೇರಿದಂತೆ ದೊಡ್ಡ ತಾರಾಬಳಗ ಚಿತ್ರಕ್ಕಿದೆ. 'ಕೆಜಿಎಫ್ 2' ಸಿನಿಮಾ ಏಪ್ರಿಲ್ 14ಕ್ಕೆ ವಿಶ್ವದಾದ್ಯಾಂತ ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತೆರೆ ಕಾಣಲಿದ್ದು, ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು (Vijay Kiragandur) ನಿರ್ಮಿಸಿದ್ದಾರೆ. ಈ ಹಿಂದೆ 2021ರ ಜುಲೈ 16 ಕ್ಕೆ 'ಕೆಜಿಎಫ್ 2' ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಕೊರೋನಾದಿಂದ ಇದು ಸಾಧ್ಯವಾಗಿರಲಿಲ್ಲ.
All done & all hearts for this one!! ♥️🧡💜💛💚💙💖
See you all on April 14 2022 💫 🙏🏻🙏🏻 pic.twitter.com/4reG9PbUEB