'ಕಾಂತಾರ' ನಂತರ ಕಾಡಂಚಿನ ಜನರ ಬೆಂಬಲಕ್ಕೆ ನಿಂತ ರಿಷಬ್ ಶೆಟ್ಟಿ

Published : Mar 08, 2023, 03:52 PM ISTUpdated : Mar 10, 2023, 04:36 PM IST
'ಕಾಂತಾರ' ನಂತರ ಕಾಡಂಚಿನ ಜನರ ಬೆಂಬಲಕ್ಕೆ ನಿಂತ ರಿಷಬ್ ಶೆಟ್ಟಿ

ಸಾರಾಂಶ

'ಕಾಂತಾರ' ನಂತರ ಕಾಡಂಚಿನ ಜನರ ಬೆಂಬಲಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿಂತಿದ್ದಾರೆ. 

ಕಾಡಂಚಿನ ಜನರು ಮತ್ತು ಅರಣ್ಯ ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಮಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ರಿಷಬ್ ಶೆಟ್ಟಿ ಮನವಿ ಸಲ್ಲಿಸಿದ್ದಾರೆ. ಈ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಆದೇಶಿಸುವ ಭರಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ, 'ಕಾಂತಾರ ಸಿನಿಮಾದ ಬಳಿಕ ನಾನು ಹೆಚ್ಚೆಚ್ಚು ಕಾಡು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಸುತ್ತಾಡಿದೆ. ಅರಣ್ಯ ಇಲಾಖೆಯ ಜೊತೆ ಕೆಲಸ ಮಾಡುತ್ತಾ ಅರಣ್ಯ ರಕ್ಷಣೆಯ ವೇಳೆ ಇಲಾಖೆಯ ಮಂದಿ ಮತ್ತು ಕಾಡಂಚಿನ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅರಿತುಕೊಂಡೆ. ಉದಾಹರಣೆಗೆ ಕೃಷಿಕರು ಎದುರಿಸುತ್ತಿರುವ ಕಾಡಾನೆ ತೊಂದರೆ ಸಮಸ್ಯೆ ಇರಬಹುದು, ಕಾಡ್ಗಿಚ್ಚು ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಾಚರ್ ಗಳು ಎದುರಿಸುವ ಕಷ್ಟಗಳಿರಬಹುದು ಹೀಗೆ ಸುಮಾರು 20 ಅಂಶಗಳ ವಿವರವಾದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ಅವರು ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮುಖ್ಯಮಂತ್ರಿಗಳು ಇರುವುದಕ್ಕೆ ನಾವು ಧನ್ಯರು' ಎಂದೂ ತಿಳಿಸಿದ್ದಾರೆ.



'ಕಾಂತಾರ 2'ಗಾಗಿ ಮೆಗಾ ಪ್ಲ್ಯಾನ್ ಹೆಣೆದ ಡಿವೈನ್ ಸ್ಟಾರ್

'ಕಾಂತಾರ ಚಿತ್ರದ ನಂತರದ ದಿನಗಳಲ್ಲಿ ಕಾಡು ಸುತ್ತಿ, ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿಗಳ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ ಅವರು ತಕ್ಷಣವೇ ಪರಿಹರಿಸುವುದಾಗಿ ಹೇಳಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳು' ಎಂದು ರಿಷಬ್ ಶೆಟ್ಟಿ ಹೇಳಿದರು. 

ಕಾಂತಾರ 'ಕರ್ಮದ ಕಲ್ಲನು' ಹಾಡಿದ ಹಿಂದಿ ನಾಯಕಿ ತೇಜಸ್ವಿ; ಪರೋಕ್ಷ ಕನ್ನಡದ ನಟಿಗೆ ಪಾಠ ಮಾಡಿದ ನೆಟ್ಟಿಗರು

ಕಾಂತಾರ ಸಿನಿಮಾ ಮೂಲಕ ಅರಣ್ಯ ರಕ್ಷಣೆಯ ಸಂದೇಶ ನೀಡಿದ ರಿಷಬ್ ಶೆಟ್ಟಿಯವರು ಇದೀಗ ಅರಣ್ಯ ರಕ್ಷಣೆ ಮತ್ತು ಕಾಡಂಚಿನಲ್ಲಿರುವ ಜನರ ಹಿತ ಕಾಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಕೆಲಸವೇ ಸರಿ. ಇನ್ನೂ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಹಮ್ಮಿಕೊಂಡಿರುವ ಅರಣ್ಯ ಸಂರಕ್ಷಣ ಅಭಿಯಾನಕ್ಕೆ ರಿಷಬ್ ಶೆಟ್ಟಿ ರಾಯಭಾರಿಯಾಗಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ