
ಕಿರುತೆರೆ ವೀಕ್ಷಕರ ನೆಚ್ಚಿನ ಚಾಕೊಲೇಟ್ ಬಾಯ್ ವಿಜಯ್ ಸೂರ್ಯ 'ಇಷ್ಟಕಾಮ್ಯ' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ್ದರು. ಅದಾದ ನಂತರ ಧಾರಾವಾಹಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಈದೀಗ ಮತ್ತೆ ಸಿನಿಮಾ ಪ್ರಪಂಚಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಅಯ್ಯೋ! 'ಅಗ್ನಿಸಾಕ್ಷಿ' ಸಿದ್ಧಾರ್ಥ್ ಲಾಕ್‌ಡೌನ್‌ನಲ್ಲಿ ಏನ್ ಮಾಡ್ಕೊಂಡಿದ್ದಾರೆ ನೋಡಿ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ' ಪ್ರೇಮಲೋಕ' ಧಾರಾವಾಹಿಯ ಪ್ರಮುಖ ಪಾತ್ರಧಾರಿ ಆಗಿರುವ ವಿಜಯ್ ಸೂರ್ಯ ಈಗ ವೀರಪುತ್ರ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಹಾಗೂ ಪ್ರೋಮೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದೆ.
ಎಸ್ ದೇವರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೀರಪುತ್ರ ಸಿನಿಮಾದಲ್ಲಿ ನೀವು ಎಂದೂ ನೋಡಿರದ ವಿಜಯ್ ಸೂರ್ಯನನ್ನು ಚಿತ್ರದಲ್ಲಿ ಕಾಣಬಹುದು. ಚಿತ್ರದ ವಿಶೇಷತೆ ಏನೆಂದರೆ ನಿರ್ದೇಶಕ ದೇವರಾಜ್ ಅವರೇ ಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದಿರುವುದು.
ಸೆಪ್ಟೆಂಬರ್ 7ರಂದು ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಲುಕ್ ಹಾಗೂ ಪ್ರೋಮೋ ವಿಡಿಯೋ ರಿಲೀಸ್ ಮಾಡಲಾಗಿತ್ತು. ಡಿಂಪಲ್ ಬಾಯ್ ಮಾಸ್ ಲುಕ್‌ಗೆ ಹುಡುಗಿಯರ ಕ್ಲೀನ್ ಬೋಲ್ಡ್ ಆಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.