
ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಿನಿಮಾ ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಭಾಗವಹಿಸಿ, ಪ್ರಶಸ್ತಿ ಪಡೆದುಕೊಂಡಿದೆ.
ಈ ಚಿತ್ರಕ್ಕೆ ಅಮೆರಿಕದ ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಚಿತ್ರಕತೆಗಾಗಿ ಬರಗೂರು ರಾಮಚಂದ್ರಪ್ಪ ಅವರಿಗೂ ಅತ್ಯುತ್ತಮ ಸ್ಕ್ರೀನ್ ಪ್ಲೇನ್ ಪ್ರಶಸ್ತಿ ಬಂದಿದೆ.
ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ನಿಂತ ಕಿಚ್ಚ ಸುದೀಪ್
ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆ ಆಗಿ ಪ್ರದರ್ಶನಗೊಂಡು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ಈ ಚಿತ್ರದಲ್ಲಿ ನಟಿ ಹರಿಪ್ರಿಯಾ, ದುನಿಯಾ ಕಿಶೋರ್ ನಟಿಸಿದ್ದಾರೆ. 13ನೇ ಶತಮಾನದ ಕನ್ನಡದ ಕವಿ ಜನ್ನನ ಯಶೋಧರ ಚರಿತೆಯನ್ನು ಆಧರಿಸಿದ ಸಿನಿಮಾ ಇದಾಗಿದೆ. ಪುಟ್ಟಣ್ಣ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.