
'ಯುವರತ್ನ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ತೆಲುಗು ನಟಿ ಸಯೇಷಾ ಹಾಗೂ ಆರ್ಯ ದಂಪತಿಗೆ ಹೆಣ್ಣು ಮಗುವಾಗಿದೆ. ನಟ ವಿಶಾಲ್ ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಅಭಿಮಾನಿಗಳಿಗೆಈ ಸಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಸಯೇಷಾ ಮತ್ತು ಆರ್ಯ ತಮ್ಮ ಮೊದಲ ಮಗುವಿನ ನಿರೀಕ್ಷೆ ಬಗ್ಗೆ ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. 'ಅಂಕಲ್ ಆಗುತ್ತಿರುವ ವಿಚಾರ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ನನ್ನ ಸಹೋದರ ಆರ್ಯ ಹಾಗೂ ಸಯೇಷಾ ಹೆಣ್ಣು ಮಗುವನ್ನು ಬರ ಮಾಡಿಕೊಂಡಿದ್ದಾರೆ. ಮಗುವಿಗೆ ದೇವರು ಒಳ್ಳಯದು ಮಾಡಲಿ ಹಾಗೂ ದಂಪತಿ ಪೋಷಕರಾಗುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ. ಶೂಟಿಂಗ್‌ನಲ್ಲಿರುವೆ. ನನ್ನೊಳಗಿನ ಭಾವನೆ ತಡೆದುಕೊಳ್ಳಲಾಗುತ್ತಿಲ್ಲ,' ಎಂದು ವಿಶಾಲ್ ಟ್ಟೀಟ್ ಮಾಡಿದ್ದಾರೆ.
2019ರಲ್ಲಿ ಸಯೇಷಾ ಹಾಗೂ ಆರ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ನಡುವೆ 12 ವರ್ಷಗಳ ವಯಸ್ಸಿನ ಅಂತರವಿದೆ. ನೆಟ್ಟಿಗರು ಇವರ ಪ್ರೀತಿ ಬಗ್ಗೆ ನೆಗೆಟಿವ್ ಆಗಿ ಕಾಮೆಂಟ್ ಮಾಡಿದ್ದರು. ಇವರಿಬ್ಬರೂ ಜೋಡಿಯಾಗಿ 'ಟೆಡ್ಡಿ' ,'ಗಜನಿಕಾಂತ್' ಮತ್ತು 'ಕಾಪ್ಟನ್' ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಡ್ಯಾನ್ಸ್ ಹಾಗೂ ಇನ್‌ಸ್ಟಾಗ್ರಾಂ ರೀಲ್ಸ್ ಹಂಚಿಕೊಂಡು, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದರೂ, ಯಾಕೆ ಹಂಚಿಕೊಂಡಿಲ್ಲ ಎಂಬುದು ನೆಟ್ಟಿಗರ ಪ್ರಶ್ನೆ..
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.