Badava Rascal: ಶಂಕರ್ ಅಲಿಯಾಸ್ ಡಾಲಿ ಧನಂಜಯ್‌ ಚಿತ್ರದ ಟ್ರೇಲರ್ ರಿಲೀಸ್

By Suvarna NewsFirst Published Dec 13, 2021, 7:42 PM IST
Highlights

ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ್‌ ಅಭಿನಯದ ಬಹುನಿರೀಕ್ಷಿತ 'ಬಡವ ರಾಸ್ಕಲ್‌' ಚಿತ್ರ ತೆರೆಗೆ ಬರಲು ಸಜ್ಜಾಗಿದ್ದು, ಇದೀಗ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. 

ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ್‌ (Dolly Dhananjay) ಅಭಿನಯದ ಬಹುನಿರೀಕ್ಷಿತ 'ಬಡವ ರಾಸ್ಕಲ್‌' ಚಿತ್ರ ತೆರೆಗೆ ಬರಲು ಸಜ್ಜಾಗಿದ್ದು, ಇದೀಗ ಚಿತ್ರದ ಟ್ರೇಲರ್ (Trailer) ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ಪ್ರಾರಂಭದಲ್ಲಿ ನಿಮ್ಮ ನಗು ಪ್ರೀತಿಯ ಅಪ್ಪುಗೆ ಸದಾ ಜೀವಂತ ಅಣ್ಣ. ಕನ್ನಡದ ಮನೆ ಮಗ, ಕನ್ನಡ ತಾಯಿಯ ಕಿರೀಟದ ರತ್ನ. ಎಲ್ಲರ ಪ್ರೀತಿಯ ಕರ್ನಾಟಕ ರತ್ನ ಅಪ್ಪು. ಸದಾ ನಮ್ಮೊಂದಿಗೆ ಎಂಬ ಬರಹದೊಂದಿಗೆ ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರನ್ನು 'ಬಡವ ರಾಸ್ಕಲ್‌' ಚಿತ್ರತಂಡ ನೆನೆಪಿಸಿಕೊಂಡಿದ್ದಾರೆ.

ಬಿಡುಗಡೆಯಾದ ಟ್ರೇಲರ್‌ನಲ್ಲಿ ಧನಂಜಯ್ ಸ್ನೇಹಿತರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಕಾಣಿಸಿಕೊಂಡಿದ್ದು, ಆಟೋ ಓಡಿಸುವ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ, ತನ್ನ ಗೆಳೆಯರಿಗಾಗಿ ಏನು ಮಾಡೋಕೂ ಧನಂಜಯ್ ರೆಡಿ ಇರುತ್ತಾನೆ. ಇದು ಆತನನ್ನು ಪ್ರೀತಿಸುವ ಹುಡುಗಿಗೆ ಇಷ್ಟವಿರುವುದಿಲ್ಲ. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗುತ್ತದೆ. ಜೊತೆಗೆ ಹಾಸ್ಯಮಿಶ್ರಿತ ಸಂಭಾಷಣೆಗಳು, ತಾಯಿ ಸೆಂಟಿಮೆಂಟ್ ಸೇರಿದಂತೆ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಟ್ರೇಲರ್​​​ನಲ್ಲಿ ಹೈಲೈಟ್​ ಆಗಿದೆ. ಇದೀಗ ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಧನಂಜಯ್‌ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ (Amrutha Iyengar)​ ಮಿಂಚಿದ್ದಾರೆ.

Badava Rascal Trailer: ವಿಡಿಯೋ ಮೂಲಕ 'ಅಡಚಣೆಗಾಗಿ ಕ್ಷಮೆ'ಯಾಚಿಸಿದ ಧನಂಜಯ್‌
 
'ಬಡವ ರಾಸ್ಕಲ್‌' ಚಿತ್ರವು ದೇ ಡಿಸೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರತಂಡ ಪ್ರಚಾರ ಕಾರ್ಯಗಳನ್ನು ಭರ್ಜರಿಯಾಗಿ ನಡೆಸುತ್ತಿದೆ. ವಿಶೇಷವಾಗಿ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡವು ಜನಸಾಮಾನ್ಯರನ್ನೇ ಬಳಸಿಕೊಂಡು ವಿಭಿನ್ನವಾಗಿ ಹೆಜ್ಜೆ ಇಟ್ಟಿದೆ. ಶಾಲಾ ಮಕ್ಕಳಿಂದ ಹಿಡಿದು ತರಕಾರಿ ಅಂಗಡಿ, ಮಾಂಸದ ಅಂಗಡಿ, ದಿನಸಿ ಅಂಗಡಿ, ಆಸ್ಪತ್ರೆ ರಶೀದಿ ಚೀಟಿ, ಎಳನೀರು ಗಾಡಿ, ಕಾರು ಗ್ಯಾರೇಜ್, ಬಿರಿಯಾನಿ ಹೋಟೆಲ್‌, ಆಟೋ ಚಾಲಕರವರೆಗೂ ಸೇರಿದಂತೆ ಹೀಗೆ ಎಲ್ಲೆಂದರಲ್ಲಿ ಇದೀಗ 'ಬಡವ ರಾಸ್ಕಲ್‌' ಪ್ರೊಮೋಷನ್ಸ್‌ ನಡೆಯುತ್ತಿದೆ. 'ಡಿ.24ಕ್ಕೆ ಬಡವ ರಾಸ್ಕಲ್‌' ಎನ್ನುವ ಸ್ಲೇಟ್‌ ಫಲಕ ಎಲ್ಲೆಡೆ ರಾರಾಜಿಸುತ್ತಿದೆ. 

ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ನಡೆಯುವ 'ಬಡವ ರಾಸ್ಕಲ್‌' ಚಿತ್ರದಲ್ಲಿ ಧನಂಜಯ್‌ ಆಟೋ ಡ್ರೈವರ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. 'ಡಾಲಿ ಪಿಕ್ಚರ್' (Dolly Picture) ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ 'ಮಠ' ಗುರುಪ್ರಸಾದ್‌ (Guruprasad) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಕತೆಗೆ ತಿರುವು ಕೊಡುವ ಪಾತ್ರ ಇದಾಗಿದ್ದು, ಚಿತ್ರದಲ್ಲಿನ ಅವರ ಗೆಟಪ್‌ ಈ ಹಿಂದೆ ರಿವೀಲ್ ಆಗಿತ್ತು. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್‌ (Vasuki Vaibhav) ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. 

'ಬಡವ ರಾಸ್ಕಲ್‌' ಹೊಸ ಹಾಡಿನಲ್ಲಿ ಡಾಲಿ ಧನಂಜಯ್‌ ಹೃದಯ ಚೂರಾಯ್ತು

ಇನ್ನು 'ಬಡವ ರಾಸ್ಕಲ್' ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದೆ. ಈ ಹಿಂದೆ ಚಿತ್ರತಂಡ ಚಿತ್ರದ ಗ್ಲಿಂಪ್ಸ್ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ವಿಡಿಯೋದಲ್ಲಿ ಧನಂಜಯ್, ಶಂಕರ್ ಅಲಿಯಾಸ್ ಬಡವ ರಾಸ್ಕಲ್... ಎಂದು ಮಾಸ್ ಎಂಟ್ರಿ ಕೊಟ್ಟಿದ್ದು, ಜೊತೆಯಲ್ಲಿ ಪಿಟ್ಟ, ಪ್ಯಾಕೆಟ್, ಕಬಾಬ್, ಬೆಂಕಿ,  ಸಣ್ಣಪ್ಪ, ಡೌನ್ ಟು ಅರ್ಥ್, ನಾಗ ಎಂಬ ಪಾತ್ರಗಳ ಪರಿಚಯವಿತ್ತು. ಧನಂಜಯ್ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಮಾನ್ಸೂನ್ ರಾಗ (Monsoon Raga), ಹೆಡ್​ ಬುಷ್ (Head Bush)​, ಹಾಗೂ  'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' (Once Upon a Time in Jamaligudda) ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಟಾಲಿವುಡ್‌ನ 'ಪುಷ್ಪ' (Pushpa) ಚಿತ್ರದಲ್ಲಿ ನೆಗೆಟಿವ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
 

click me!