Bagheera; ಶ್ರೀಮುರಳಿ ಹುಟ್ಟುಹಬ್ಬಕ್ಕೆ ಸಿಕ್ತು 'ಬಘೀರ' ಪೋಸ್ಟರ್ ಗಿಫ್ಟ್

Published : Dec 17, 2022, 05:23 PM ISTUpdated : Dec 18, 2022, 05:26 PM IST
Bagheera; ಶ್ರೀಮುರಳಿ ಹುಟ್ಟುಹಬ್ಬಕ್ಕೆ ಸಿಕ್ತು 'ಬಘೀರ' ಪೋಸ್ಟರ್ ಗಿಫ್ಟ್

ಸಾರಾಂಶ

ಶ್ರೀಮುರಳಿ ಹುಟ್ಟುಹಬ್ಬಕ್ಕೆ ಬಘೀರ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. 

ಸ್ಯಾಂಡಲ್ ವುಡ್‌ನ ರೋರಿಂಗ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಟ ಶ್ರೀಮುರಳಿ ಅವರಿಗೆ ಇಂದು (ಡಿಸೆಂಬರ್ 17) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು, ಕುಟುಂಬದವರು ಶ್ರೀಮುರಳಿ ಅವರಿಗೆ ಶುಭ ಹಾರೈಸಿದ್ದಾರೆ. ಈ ನಡುವೆ ಶ್ರೀಮುರಳಿ ಅವರ ಫ್ಯಾನ್ಸ್‌ಗೆ ಬಘೀರ ಚಿತ್ರತಂಡದಿಂದ ಬಿಗ್ ಸರ್ಪ್ರೈಸ್ ಸಿಕ್ಕಿದೆ. ಬಘೀರ ಸಿನಿಮಾ ಸೆಟ್ಟೇರಿ ವರ್ಷವೇ ಕಳೆದಿದೆ. ನಿರ್ದೇಶಕ ಪ್ರಶಾಂತ್ ನೀಲ್ ಬಘೀರ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿ ಈ ಚಿತ್ರ ನಿರ್ಮಾಣವಾಗಿದೆ. ಇಂದು ಶ್ರೀಮುರಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಘೀರ ಸಿನಿಮಾದಿಂದ ಹೊಸ ಪೋಸ್ಟರ್‌ ರಿಲೀಸ್‌ ಮಾಡುವ ಮೂಲಕ ಶ್ರೀಮುರಳಿ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ.   

ಅಂದಹಾಗೆ ಬಘೀರ ಸಿನಿಮಾದಿಂದ ರಿಲೀಸ್ ಆಗುತ್ತಿರುವ ಎರಡನೇ ಪೋಸ್ಟರ್ ಇದಾಗಿದೆ. ಈ ಸಿನಿಮಾ ಸೆಟ್ಟೇರಿ ವರ್ಷವೇ ಆಗಿದ್ದರೂ ಯಾವುದೇ ಯಾವುದೇ ಪೋಸ್ಟರ್ ಅಥವಾ ಅಪ್ ಡೇಟ್ ಹೊರಬಿದ್ದಿಲ್ಲ. ಇದೀಗ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದೆ. ಆದರೆ ಈ ಪೋಸ್ಟರ್ ನಲ್ಲಿ ಶ್ರೀಮುರಲಿ ಲುಕ್ ಬಹಿರಂಗವಾಗಿಲ್ಲ. ಮುಖ ಮುಚ್ಚಿರುವ ಲುಕ್ ಇದಾಗಿದೆ. ಮೊದಲು ರಿಲೀಸ್ ಮಾಡಿರುವ ಲುಕ್ ನೋಡಿದ್ರೆ  ಶ್ರೀಮುರಳಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಗೊತ್ತಾಗಿತ್ತು. ಆದರೆ ಇಂದು ರಿಲೀಸ್ ಆಗಿರುವ ಪೋಸ್ಟರ್ ಅಚ್ಚರಿ ಮೂಡಿಸಿದೆ. 



'ಬಘೀರ' ಚಿತ್ರಕ್ಕೆ ನಾಯಕಿ ಫಿಕ್ಸ್; ರಕ್ಷಿತ್ ಶೆಟ್ಟಿ ಹೀರೋಯಿನ್ ಜೊತೆ ಶ್ರೀಮುರಳಿ ರೊಮ್ಯಾನ್ಸ್

ಅಂದಹಾಗೆ ಬಘೀರ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಉಗ್ರಂ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಮತ್ತು ಶ್ರೀಮುರಳಿ ಕಾಂಬಿನೇಷನ್ ನಲ್ಲಿ ಬರ್ತಿರುವ ಸಿನಿಮಾ ಇದಾಗಿದೆ. ಅದರಲ್ಲೂ ಹೊಂಬಾಳೆ ಫಿಲ್ಮ್ಸ್ ಬಂಡಾಳ ಹೂಡುತ್ತಿದೆ ಎಂದರೆ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಚಿತ್ರಕ್ಕೆ ಡಾ. ಸೂರ್ ಆಕ್ಷನ್ ಹೇಳುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ರುಕ್ಮಿಣಿ ವಸಂತ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರುಕ್ಮಿಣಿ, ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಕ್ಮಿಣಿ ಅವರ ಪೋಸ್ಟರ್ ವೈರಲ್ ಆಗಿತ್ತು. ಇದೀಗ ಬಘೀರ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಶ್ರೀಮುರಳಿ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಾರೆ.

ಬಘೀರಾ ಮುಹೂರ್ತ; KGF ನಿರ್ದೇಶಕ ಪ್ರಶಾಂತ್ ನೀಲ್ ಕಥೆಗೆ ಶ್ರೀಮುರಳಿ ಹೀರೋ

ಹೊಂಬಾಳೆ ಫಿಲ್ಮ್ಸ್ ಪೋಸ್ಟರ್ ರಿಲೀಸ್ ಮಾಡಿ ಶ್ರೀಮುರಳಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಂದಹಾಗೆ ಈ ಪೋಸ್ಟರ್‌ಗೆ ಅಭಿಮಾನಿಗಳಿಂದ ತರಹೇವಾರಿ ಕಾಮೆಂಟ್ ಬಂದಿದೆ. ಇದು ಬ್ಯಾಟ್‌ಮ್ಯಾನ್ ಪೋಸ್ಟರ್ ಹಾಗೆ ಇದೆ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಮೊದಲ ಪೋಸ್ಟರ್ ಗೆ ಮಾಸ್ಕ್ ಧರಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗೆ ನಾನಾರೀತಿಯ ಕಾಮೆಂಟ್ ಹರಿದುಬಂದಿದೆ. ಬಘೀರ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್