ತಮಿಳು ಸಿನಿಮಾದಲ್ಲಿ ಕನ್ನಡದ ಬಿಗ್ ಬಾಸ್ ವಿನ್ನರ್ ರೂಪೇಶ್ ಎಂಟ್ರಿ; ಯಾವ ಸಿನಿಮಾಗೆ ಫಿಕ್ಸ್ ಆದ್ರು ನೋಡಿ!

Published : Mar 20, 2024, 01:40 PM ISTUpdated : Mar 20, 2024, 02:53 PM IST
 ತಮಿಳು ಸಿನಿಮಾದಲ್ಲಿ ಕನ್ನಡದ ಬಿಗ್ ಬಾಸ್ ವಿನ್ನರ್ ರೂಪೇಶ್ ಎಂಟ್ರಿ; ಯಾವ ಸಿನಿಮಾಗೆ ಫಿಕ್ಸ್ ಆದ್ರು ನೋಡಿ!

ಸಾರಾಂಶ

ಬಿಗ್ ಬಾಸ್ ಸೀಸನ್ 9 ವಿನ್ನರ್ ಆಗಿರುವ ರಾಕ್ ಸ್ಟಾರ್ ರೂಪೇಶ್, ಸನ್ನಿಧಾನಮ್ P.O'ಎಂಬ ತಮಿಳು ಪ್ರಾಜೆಕ್ಟ್ ನಲ್ಲಿ ನಟಿಸಿದ್ದಾರೆ. ವಿಶೇಷ ಅಂದ್ರೆ ತಮಿಳು ಸಿನಿರಂಗದ ಹಾಸ್ಯ ದಿಗ್ಗಜ ಯೋಗಿಬಾಬು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ..

ತುಳುನಾಡ ನಟ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ, ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವವರ ನಡುವೆ ರೂಪೇಶ್ ಅಳೆದು ತೂಗಿ ಅಧಿಪತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಪತ್ರ ಚಿತ್ರದ ಜೊತೆಗೆ ಮತ್ತೆರೆಡು ಹೊಸ ಕನ್ನಡ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರೂಪೇಶ್ ಈಗ ತಮಿಳು ಸಿನಿಮಾರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ.

ಬಿಗ್ ಬಾಸ್ ಸೀಸನ್ 9 ವಿನ್ನರ್ ಆಗಿರುವ ರಾಕ್ ಸ್ಟಾರ್ ರೂಪೇಶ್, ಸನ್ನಿಧಾನಮ್ P.O'ಎಂಬ ತಮಿಳು ಪ್ರಾಜೆಕ್ಟ್ ನಲ್ಲಿ ನಟಿಸಿದ್ದಾರೆ. ವಿಶೇಷ ಅಂದ್ರೆ ತಮಿಳು ಸಿನಿರಂಗದ ಹಾಸ್ಯ ದಿಗ್ಗಜ ಯೋಗಿಬಾಬು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು, ಅವರ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವ ಸಂತಸದಲ್ಲಿದ್ದಾರೆ ರೂಪೇಶ್.

ಮಹಿಳಾ ಪ್ರಧಾನ 'ತಪಸ್ವಿ'ಯಲ್ಲಿ ರವಿಚಂದ್ರನ್; ಮ್ಯಾಥ್ಯೂ ಸಿನಿಮಾದಲ್ಲಿ ಕ್ರೇಜಿ ಸ್ಟಾರ್ ಪಾತ್ರವೇನು?

ಮಧುರಾವ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ಅಮುದ ಸಾರಥಿ ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಸನ್ನಿಧಾನಮ್ P.O ಚಿತ್ರದ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಜೂನ್ ನಲ್ಲಿ ಸಿನಿಮಾ ತೆರೆಗೆ ತರಲು ಚಿತ್ರತಂಡ ತಯಾರಿ ನಡೆಸುತ್ತಿದೆ. ನಾಲ್ಕು ಭಾಷೆಯಲ್ಲಿ ಸನ್ನಿಧಾನಮ್ P.O.  ನಿರ್ಮಾಣವಾಗುತ್ತಿದೆ. 

ಮತ್ತೆ ಬಂದ್ರು ಮಧುಚಂದ್ರ; ಕಮಲ್ ಹಾಸನ್ ಬರ್ತಾರೆ ಅಂದ್ಬಿಟ್ಟು ಸಖತ್ ಗೂಸಾ ತಿಂದ್ರು!

ತುಳು ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಾ, ನಟನಾಗಿ, ನಿರ್ದೇಶಕನಾಗಿ ನೆಲೆ ಕಂಡುಕೊಂಡಿದ್ದವರು ರೂಪೇಶ್ ಶೆಟ್ಟಿ. ಅದರ ಬೆನ್ನಲ್ಲೇ ಬಿಗ್ಬಾಸ್ ವಿಜೇತರಾಗಿಯೂ ಹೊರಹೊಮ್ಮಿದರು. ಬಳಿಕ ಕನ್ನಡದ ಸಿನಿಮಾ ಅವಕಾಶಗಳ ಬಾಗಿಲೂ ತೆರೆಯಿತು. ತುಳು, ಕನ್ನಡ ಮಾತ್ರವಲ್ಲ ತೆಲುಗು, ಕೊಂಕಣಿ ಭಾಷೆಯಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ರೂಪೇಶ್ ಅವರನ್ನು ತಮಿಳುಚಿತ್ರರಂಗ ರತ್ನ ಕಂಬಳಿ ಹಾಸಿ ಸ್ವಾಗತಿಸಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Kichcha Sudeep: ರಣಹದ್ದಿನ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು? ನಿಜ ಏನು?
BBK 12 ಫಿನಾಲೆ ಬೆನ್ನಲ್ಲೇ ಹೊಸ ವಿವಾದ, ಗಿಲ್ಲಿ ನಟ ಅಶ್ವಿನಿ ಗೌಡ ಫ್ಯಾನ್ಸ್ ನಡುವೆ ಭಾಷೆ ಜೊತೆ ಜಾತಿ ಜಗಳ..!