
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಅತಿಥಿಗಳ ಲಿಸ್ಟ್ ಕೂಡ ಫೈನಲ್ ಆಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. 14ನೇ ಫಿಲ್ಮ್ ಫೆಸ್ಟಿವಲ್ ಗೆ ನಾಲ್ಕು ಕೋಟಿ ಅನುದಾನ ನೀಡಲಾಗಿದ್ದು ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ನಡೆಯಲಿದೆ. ಈಗಾಗಲೇ ಫಿಲ್ಮ್ ಫೆಸ್ಟಿವಲ್ ಲೋಗೋ ಕೂಡ ಅನಾವರಣ ಮಾಡಲಾಗಿದೆ. ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಬಾಲಿವುಡ್ ಸ್ಟಾರ್, ಎವರ್ ಗ್ರೀನ್ ನಟಿ ರೇಖಾ ವಿಶೇಷ ಇತಿಥಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದೆ. ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರ್ಕಾರದಿಂದ ಇದೂವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದ ಚಿತ್ರೋತ್ಸವ ಈ ತಿಂಗಳಿಂದ ಮುಂದಿನ ತಿಂಗಳಿಗೆ ಶಿಫ್ಟ್ ಆಗಿದೆ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ.
Bengaluru International Film Festival: ಮಾ.3 ವಿಶ್ವ ಕನ್ನಡ ಚಲನಚಿತ್ರ ದಿನ: ಸಿಎಂ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣ ನೀತಿ ಸಂಹಿತೆ ಜಾರಿ ಆಗುವ ಮುನ್ನವೇ ಚಿತ್ರೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಬೇಕು ಎನ್ನುವುದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ನಾಲ್ಕು ವರ್ಷಗಳಿಂದ ಚಲನಚಿತ್ರ ಪ್ರಶಸ್ತಿಗಳನ್ನೂ ನೀಡಿಲ್ಲ. ಕನಿಷ್ಠ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾಡುವ ತರಾತುರಿ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮಾರ್ಚ್ ನಲ್ಲಿ ಅಂದುಕೊಂಡಿರುವ ಕಾರ್ಯಕ್ರಮಗಳು ನಡೆಯುತ್ತಿವೆಯಾ ಎಂದು ಕಾದು ನೋಡಬೇಕು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.