ರಮ್ಯಾ ಔಟ್ ಸುದ್ದಿ ಬೆನ್ನಲ್ಲೇ ಅಮಿತ್ ತ್ರಿವೇದಿ 'ಉತ್ತರಕಾಂಡ'ಕ್ಕೆ ಎಂಟ್ರಿ; ದುಪ್ಪಾಟ್ಟಾಯ್ತು ನಿರೀಕ್ಷೆ!

Published : Apr 03, 2024, 06:56 PM ISTUpdated : Apr 03, 2024, 06:59 PM IST
ರಮ್ಯಾ ಔಟ್ ಸುದ್ದಿ ಬೆನ್ನಲ್ಲೇ ಅಮಿತ್ ತ್ರಿವೇದಿ 'ಉತ್ತರಕಾಂಡ'ಕ್ಕೆ ಎಂಟ್ರಿ; ದುಪ್ಪಾಟ್ಟಾಯ್ತು ನಿರೀಕ್ಷೆ!

ಸಾರಾಂಶ

ಅಮಿತ್ ತ್ರಿವೇದಿ 'ಈ ಚಿತ್ರದ ಕಥಾವಸ್ತು ಮತ್ತು ಭಾವನೆ ನನಗೆ ಸಂಪೂರ್ಣವಾಗಿ ಅರ್ಥವಾಗಿದೆ‌. ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲು ಉತ್ಸುಕನಾಗಿದ್ದೇನೆ' ಎಂದು ತಿಳಿಸಿದರು. 

ಖ್ಯಾತ ಹಿಂದಿ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ 'ಉತ್ತರಕಾಂಡ' ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಘೋಷಣೆಯ ಮೂಲಕ ಬಹು ನಿರೀಕ್ಷಿತ ಹಾಗೂ ತಾರಾಗಣದ ಚಿತ್ರ "ಉತ್ತರಕಾಂಡ" ಎಲ್ಲೆಡೆ ಸದ್ದು ಮಾಡುತ್ತಿದೆ. ಅಂತರ ರಾಷ್ಟ್ರೀಯ ಖ್ಯಾತಿಯ ಸಂಗೀತ ಸಂಯೋಜಕ ಅಮಿತ್ 'ಉತ್ತರಕಾಂಡ'ಕ್ಕೆ ಸಂಗೀತ ಸಂಯೋಜನೆ ಮಾಡುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟುಗೊಳಿಸಿದೆ. ಅಮಿತ್ ತ್ರಿವೇದಿ ಪ್ರಸ್ತುತ ಭಾರತೀಯ ಚಿತ್ರರಂಗದಲ್ಲಿ ಬಹು ಬೇಡಿಕೆಯ ಸಂಗೀತ ಸಂಯೋಜಕ ಹಾಗೂ ಗಾಯಕ. 

ಕೇವಲ ಹಿಂದಿ ಚಿತ್ರಗಳಷ್ಟೇ ಅಲ್ಲದೆ,‌ ತೆಲುಗು, ಮಲಯಾಳಂ ಚಿತ್ರಗಳಲ್ಲಿ ತಮ್ಮ ವಿಭಿನ್ನ ಸಂಗೀತ ಸಂಯೋಜನೆ ಶೈಲಿಯ ಮೂಲಕ ಛಾಪನ್ನು ಮೂಡಿಸಿದ್ದಾರೆ. ದೇವ್ ಡಿ, ಕ್ವೀನ್, ವೇಕ್ ಅಪ್ ಸಿಡ್, ಇಂಗ್ಲಿಷ್ ವಿಂಗ್ಲಿಷ್, ಕೈ ಪೋ ಚೆ, ಲೂಟೇರಾ, ಉಡ್ತಾ ಪಂಜಾಬ್, ಡಿಯರ್ ಜಿಂದಗಿ, ಸಿಕ್ರೆಟ್ ಸೂಪರ್ ಸ್ಟಾರ್, ಮನ್ಮರ್ಜಿಯಾನ್, ಅಂಧಾದುನ್, ಸೈ ರಾ‌ ನರಸಿಂಹ ರೆಡ್ಡಿ, ಜೂಬಿಲಿ ಎಂಬ ವೆಬ್ ಸೀರಿಸ್ ಮತ್ತು ಇತ್ತೀಚಿನ ಶೈತಾನ್ ಮುಂತಾದವುಗಳು ಇವರು ಸಂಗೀತ ಸಂಯೋಜನೆ ಮಾಡಿರುವ ಚಿತ್ರಗಳು. 

'ಆಡು ಜೀವಿತಂ' ಸಿನಿಮಾಗೆ ನಾನು ಕಡ್ಡಿ-ಗುಡ್ಡ ಎರಡೂ ಆಗಿದ್ದೇನೆ; ಪ್ರಥ್ವಿರಾಜ್ ಮಾತಿನ ಮರ್ಮವೇನಿರಬಹುದು?

'ಉತ್ತರಕಾಂಡ'ದ ಪ್ರೋಮೋಗೆ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು,‌ ಸಂಪೂರ್ಣ ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.  ಈ ಕುರಿತು ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, 'ಉತ್ತರಕಾಂಡ ಚಿತ್ರದ ಮೂಲಕ ನಾವು ಉತ್ತರಕರ್ನಾಟಕದ ನಾಟಿ ಮತ್ತು ಹಳ್ಳಿಗಾಡಿನ ಕಥೆಯನ್ನು ಹೇಳಬಯಸುತ್ತೇವೆ. 

ಸ್ಟಾರ್ ಸುವರ್ಣ; ಐಎಎಸ್ ಮಾಡ್ಬೇಕು'ಅಂತಿರೋ ಹುಡ್ಗಿ 'ವರಲಕ್ಷ್ಮಿ ಕಲ್ಯಾಣ' ಫಿಕ್ಸ್ ಆಯ್ತು

ಇಂತಹ ಸ್ಥಳೀಯ ಭಾವನೆಯನ್ನು ಉಂಟು ಮಾಡುವ ಕಥೆಗೆ ಅಮಿತ್ ತ್ರಿವೇದಿ ಅವರ ಸಂಗೀತ ಸಾಥ್ ನೀಡಲಿದೆ. ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವುದು ಚಿತ್ರದ ಮೆರುಗನ್ನು ಹೆಚ್ಚಿಸಲಿದೆ' ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಅಮಿತ್ ತ್ರಿವೇದಿ ಮಾತನಾಡಿ, 'ಈ ಚಿತ್ರದ ಕಥಾವಸ್ತು ಮತ್ತು ಭಾವನೆ ನನಗೆ ಸಂಪೂರ್ಣವಾಗಿ ಅರ್ಥವಾಗಿದೆ‌. ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲು ಉತ್ಸುಕನಾಗಿದ್ದೇನೆ' ಎಂದು ತಿಳಿಸಿದರು. 

ಕಾಲೇಜ್‌ ಗರ್ಲ್ಸ್‌ಗೆ ಸಮಂತಾ ಹೇಳಿದ ಟಿಪ್ಸ್ ಕೇಳಿ 'ಬಾಯ್ಸ್‌' ಕಂಗಾಲು; ನಾವೇನು ಮಾಡ್ಲಿ ಅಂತಿದಾರಲ್ರೀ!

'ಉತ್ತರಕಾಂಡ' ಚಿತ್ರವು ಕೆ.ಆರ್.ಜಿ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಾಣದ ಮತ್ತು ರೋಹಿತ್ ಪದಕಿ ನಿರ್ದೇಶನದ ಆಕ್ಷನ್ ಡ್ರಾಮಾ ಚಿತ್ರವಾಗಿದೆ. ಉತ್ತರಕಾಂಡ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ತಂಡ ಈಗಾಗಲೇ ಚಿತ್ರದ ನಾಯಕಿಯ ಹುಡುಕಾಟದಲ್ಲಿದ್ದು, ಇದೇ ಏಪ್ರಿಲ್ 15ರಿಂದ ಚಿತ್ರೀಕರಣ ಆರಂಭಿಸಲಿದೆ.

ಯಂಗ್‌ಸ್ಟರ್ಸ್‌ಗೆ ದೀಪಿಕಾ ಪಡುಕೋಣೆ ಲೈಫ್ ಟಿಪ್ಸ್; ಕೇಳಿ ತಲೆದೂಗಿದ ಯುವಜನರು ಹೇಳಿದ್ದೇನು?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್